ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಮಹಾರಾಷ್ಟ್ರ: ಜುಲೈ 16: ಚಲಿಸುತ್ತಿರುವ ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ್ದ  ಮಹಿಳೆ ಪತಿಯ ಸಹಾಯದಿಂದ ಕಿಟಕಿಯಿಂದ ಮಗುವನ್ನು ಎಸೆದಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿಯಲ್ಲಿ ನಡೆದಿದೆ.  ಚಲಿಸುತ್ತಿರುವ ಸ್ಲೀಪರ್ ಬಸ್ಸಿನಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ, ಪತಿ ಎಂದು ಹೇಳಿಕೊಂಡ ವ್ಯಕ್ತಿಯ ಸಹಾಯದಿಂದ ನವಜಾತ ಶಿಶುವನ್ನು ಕಿಟಕಿಯಿಂದ ಹೊರಗೆ ಎಸೆದಿದ್ದಾರೆ. ಶಿಶು ಗಂಭೀರ ಗಾಯಗಳಿಂದಾಗಿ  ಸಾವನ್ನಪ್ಪಿದೆ. ಮಂಗಳವಾರ ಬೆಳಗ್ಗೆ 6.30 ರ ಸುಮಾರಿಗೆ ಪತ್ರಿ-ಸೇಲು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಪೊಲೀಸರ ಪ್ರಕಾರ, ಯುವತಿ ಮತ್ತು ಆಕೆಯ ಸಹಚರರು ಸಂತ ಪ್ರಯಾಗ್ ಟ್ರಾವೆಲ್ಸ್ ಸ್ಲೀಪರ್ ಕೋಚ್

ಪಿಥೋರಗಢ: ಉತ್ತರಾಖಂಡದ ಪಿಥೋರಗಢದ ಮುವಾನಿ ಪಟ್ಟಣದಲ್ಲಿ 13 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ವೊಂದು ಕಂದಕಕ್ಕೆ ಉರುಳಿಬಿದ್ದಿದ್ದು, ಭೀಕರ ಅಪಘಾತದಲ್ಲಿಕನಿಷ್ಠ ಎಂಟು ಜನ ಸಾವನ್ನಪ್ಪಿದ್ದಾರೆ. ಸೋನಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ 150 ಮೀಟರ್ ಆಳದ ಕಂದಕಕ್ಕೆ ವಾಹನ ಬಿದ್ದಿದೆ. ದುರಂತ ಘಟನಾ ಸ್ಥಳಕ್ಕೆ ಪೊಲೀಸರು ತಲುಪಿದ್ದು, ರಕ್ಷಣಾ ಕಾರ್ಯಾಚರಣೆ

ನ್ಯೂಯಾರ್ಕ್: ಯಶಸ್ವಿ ಬಾಹ್ಯಾಕಾಶ ಯಾನ ಮುಕ್ತಾಯಗೊಳಿಸಿದ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲ ಅವರಿದ್ದ ತಂಡ ಇಂದು ಡ್ರ್ಯಾಗನ್ ನೌಕೆಯ ಮೂಲಕ ಯಶಸ್ವಿಯಾಗಿ ಭೂಮಿಗೆ ಮರಳಿದ್ದಾರೆ. "ನಾವು ಮನೆಗೆ ಮರಳಿದ್ದೇವೆ" ಆಕ್ಸಿಯಮ್ -4 ಮಿಷನ್ ಕಮಾಂಡರ್ ಪೆಗ್ಗಿ ವಿಟ್ಸನ್, ಜುಲೈ 15 ರಂದು ಪೆಸಿಫಿಕ್ ಮಹಾಸಾಗರದ ಸ್ಯಾನ್ ಡಿಯಾಗೋ ಬಳಿಯ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ

ಬೆಂಗಳೂರು: ಸೋಮವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರು ಮಂಗಳವಾರ ತಮ್ಮ ಹುಟ್ಟೂರು ಚನ್ನಪಟ್ಟಣದ ದಶಾವರದ ಮಣ್ಣಲ್ಲಿ ಮಣ್ಣಾಗಿದ್ದು, ಅಭಿನಯ ಸರಸ್ವತಿ ಇನ್ನೂ ನೆನಪು ಮಾತ್ರ. ಇಂದು ಮಧ್ಯಾಹ್ನ ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿತು. ದಶಾವರದಲ್ಲಿ ಅವರ ತಾಯಿಯ ಸಮಾಧಿ ಪಕ್ಕವೇ

ನವದೆಹಲಿ: ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ(ಐಎಸ್‌ಎಸ್‌) 18 ದಿನಗಳ ವಾಸ್ತವ್ಯದ ನಂತರ ಭಾರತೀಯ ಗಗನಯಾನಿ ಶುಭಾಂಶು ಶುಕ್ಲಾ ಹಾಗೂ ಇತರೆ ಮೂವರು ಗಗನಯಾತ್ರಿಗಳು ಸೋಮವಾರ ಮಧ್ಯಾಹ್ನ ಡ್ರ್ಯಾಗನ್ ಗ್ರೇಸ್ ಬಾಹ್ಯಾಕಾಶ ನೌಕೆಯನ್ನು ಪ್ರವೇಶಿಸಿದ್ದು, ಭೂಮಿಯತ್ತ ತಮ್ಮ ಪ್ರಯಾಣ ಆರಂಭಿಸಲು ಸಿದ್ಧರಾಗಿದ್ದಾರೆ. ಮಿಷನ್ ಪೈಲಟ್ ಶುಕ್ಲಾ, ಕಮಾಂಡರ್ ಪೆಗ್ಗಿ ವಿಟ್ಸನ್

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸರೋಜಾ ದೇವಿ 1938ರ ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ. ಸರೋಜಾ ಬಳಿ ಭೈರಪ್ಪ

ನವದೆಹಲಿ: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ದ್ವೇಷದ ಭಾಷಣ ನಿಯಂತ್ರಿಸುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೋಮವಾರ ಸೂಚಿಸಿದೆ. ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಕೋರ್ಟ್ ಈ ರೀತಿಯ ಸಲಹೆ ನೀಡಿದೆ. ದ್ವೇಷದ ಭಾಷಣವನ್ನು 'ಅಭಿವ್ಯಕ್ತಿ ಸ್ವಾತಂತ್ರ್ಯ' ಎಂದು ಹೇಳುವುದಕ್ಕೆ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಮುಂದಿನ ಪರ್ಯಾಯಕ್ಕಾಗಿ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭಾನುವಾರ (ಜುಲಾಯಿ 13)ದ೦ದು ಅದ್ದೂರಿಯಿ೦ದ ಕಟ್ಟಿಗೆ ಮುಹೂರ್ತ ಕಾರ್ಯಕ್ರಮವು ಸ೦ಪನ್ನ ಗೊ೦ಡಿತು. ಈಗಾಗಲೇ ಬಾಳೆ ಮುಹೂರ್ತ, ಅಕ್ಕಿ ಮುಹೂರ್ತ ನೆರವೇರಿಸಲಾಗಿದ್ದು ಬಾರಿಯ ಕಟ್ಟಿಗೆ ಮುಹೂರ್ತವು ಜುಲೈ 13ರಂದು ಬೆಳಿಗ್ಗೆ 9.15 ರ

ನವದೆಹಲಿ: ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, 26/11 ಮುಂಬೈ ದಾಳಿ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಮ್, ಕೇರಳ ಬಿಜೆಪಿ ನಾಯಕ ಸಿ. ಸದಾನಂದನ್ ಮಾಸ್ಟರ್ ಮತ್ತು ಇತಿಹಾಸಗಾರ್ತಿ ಮೀನಾಕ್ಷಿ ಜೈನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ್ದಾರೆ. ಈ ಸಂಬಂಧ ಶನಿವಾರ

ಚೆನ್ನೈ: ತಮಿಳು ನಾಡಿನ ತಿರುವಲ್ಲೂರು ಬಳಿ ಕಚ್ಚಾ ತೈಲ ಸಾಗಿಸುತ್ತಿದ್ದ ಸರಕು ಸಾಗಣೆ ರೈಲಿನಲ್ಲಿ ಭಾನುವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿ ರೈಲು ಸೇವೆಗಳು ಸ್ಥಗಿತಗೊಂಡಿದ್ದರಿಂದ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು. ಭಾರೀ ಬೆಂಕಿಯಿಂದಾಗಿ ಜ್ವಾಲೆಗಳು ಮತ್ತು ದಟ್ಟ ಹೊಗೆ ಉಂಟಾಗಿದ್ದು, ಹಳಿಗಳ ಬಳಿ ವಾಸಿಸುವ ನಿವಾಸಿಗಳು ಭಯಭೀತರಾದರು,