ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬೆಲ್ಜಿಯಂನ ಬ್ರಸೆಲ್​​ನಲ್ಲಿ ನಡೆದ ಡೈಮಂಡ್ ಲೀಗ್​ ಜಾವೆಲಿನ್ ಥ್ರೋ ಫೈನಲ್​​ನಲ್ಲಿ ನೀರಜ್ ಚೋಪ್ರಾ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅಂತಿಮ ಹಣಾಹಣಿಯಲ್ಲಿ ಅ್ಯಂಡರ್ಸನ್ ಪೀಟರ್ಸ್ 87.87 ಮೀಟರ್ ದೂರಕ್ಕೆ ಭರ್ಜಿ ಎಸೆದು ಮೊದಲ ಸ್ಥಾನ ಪಡೆದರೆ, ನೀರಜ್ ಚೋಪ್ರಾ 87.86 ದೂರಕ್ಕೆ ಎಸೆಯುವಲ್ಲಿ ಯಶಸ್ವಿಯಾಗಿದ್ದರು. ಅಂದರೆ ಇಲ್ಲಿ ಮೊದಲ ಸ್ಥಾನ ಹಾಗೂ

ಹೊಸದಿಲ್ಲಿ: ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಇಂದ (ಸೆ.15) ಬೆಳಗ್ಗೆ ಕಾರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೈಪುರ ರಾಷ್ಟ್ರೀಯ ಹೆದ್ದಾರಿಯ ಹಿಂದೋಲಿ ಬಳಿ ಮುಂಜಾನೆ 4:30 ರ ಸುಮಾರಿಗೆ ಉತ್ತರ ಪ್ರದೇಶದ ದೇವಾಸ್ ನಿವಾಸಿಗಳು ಸಿಕಾರ್

ಬೆಂಗಳೂರು, ಸೆಪ್ಟೆಂಬರ್​ 15: ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಆರೋಪಿ ದರ್ಶನ್​ಗೆ ರಾಜಾತಿಥ್ಯ ನೀಡಿದ್ದ ಫೋಟೋ ವೈರಲ್​​ ಆಗಿತ್ತು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಫೋಟೋದಲ್ಲಿ ಆರೋಪಿ ದರ್ಶನ್​ ಜೊತೆ ರೌಡಿಶೀಟರ್​​ ವಿಲ್ಸನ್​​ ಗಾರ್ಡನ್​ ನಾಗ ಕೂಡ ಇದ್ದನು. ಇದೀಗ, ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಾಳಿ

ಎರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಬಿಜೆಪಿ ತನ್ನ ವಿರುದ್ಧ ಸುಳ್ಳು ಆರೋಪ ಮಾಡಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಹೀಗಾಗಿ ಸಾರ್ವಜನಿಕ ನ್ಯಾಯಾಲಯದ ಮೊರೆ ಹೋಗುತ್ತೇವೆ.ಅವರ ಸ್ಥಾನದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ನವೆಂಬರ್‌ನಲ್ಲಿ ದೆಹಲಿ ಚುನಾವಣೆ ನಡೆಸುವಂತೆ

ರಾಮನಗರ: ಕಳೆದ ಜೂನ್ ತಿಂಗಳಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರಿಗೆ 2 ರೂಪಾಯಿ ಹೆಚ್ಚಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಹಾಲಿನ ದರವನ್ನು ಹೆಚ್ಚಿಸುವ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮಾತನಾಡಿದ್ದಾರೆ. ಇಂದು ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳದಲ್ಲಿ ಭಾಷಣ ಮಾಡುವಾಗ ಬಿಜೆಪಿ ಅಭ್ಯರ್ಥಿಯಾಗಿದ್ದ ವಿ. ಸುನೀಲ್ ಕುಮಾರ್ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಸುನೀಲ್ ಕುಮಾರ್ ಮಾನಹಾನಿಕರ ಹೇಳಿಕೆ ನೀಡಿದ್ದಾರೆಂದು ಪ್ರಮೋದ್ ಮುತಾಲಿಕ್ ದೂರು ಸಲ್ಲಿಸಿದ್ದರು. ತಮ್ಮ

ದೆಹಲಿ ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal)​ಗೆ ಸುಪ್ರೀಂಕೋರ್ಟ್​ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೇಜ್ರಿವಾಲ್​ ಕಚೇರಿಗೆ ತೆರಳಿ ಕಡತಗಳಿಗೆ ಸಹಿ ಮಾಡುವಂತಿಲ್ಲ, ಬಹಿರಂಗ ಪ್ರಚಾರ ಮಾಡುವಂತಿಲ್ಲ, ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಕಚೇರಿಗೆ ಹೋಗುವಂತಿಲ್ಲ ಮತ್ತು ಅವರು ಯಾವುದೇ ಸಾಕ್ಷಿಗಳೊಂದಿಗೆ ಮಾತನಾಡುವುದಿಲ್ಲ. ಅಗತ್ಯ

ಬೆಂಗಳೂರು, ಸೆಪ್ಟೆಂಬರ್ 11: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ವಿಶೇಷ ತನಿಖಾ ತಂಡ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ್ದು, ಇದೀಗ ಅದರಲ್ಲಿ ಏನೇನು ಉಲ್ಲೇಖವಾಗಿದೆ ಎಂಬುದು ಬೆಳಕಿಗೆ ಬಂದಿದೆ. ಸುಮಾರು 1632 ಪುಟಗಳ ಚಾರ್ಜ್​ಶೀಟ್​ನಲ್ಲಿ 113 ಸಾಕ್ಷಿಗಳನ್ನು ಎಸ್​​ಐಟಿ

ಅಫ್ಘಾನಿಸ್ತಾನ್ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಪಂದ್ಯದ ಮೂರು ದಿನದಾಟಗಳು ಸಂಪೂರ್ಣ ರದ್ದಾಗಿದೆ. ಭಾರತದ ಗ್ರೇಟರ್ ನೋಯ್ಡಾದ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮೈದಾನದಲ್ಲಿ ನಡೆಯಬೇಕಿದ್ದ ಮೊದಲ ದಿನದಾಟವು ಮಳೆಯ ಕಾರಣ ಸಂಪೂರ್ಣ ರದ್ದಾಗಿತ್ತು. ಇನ್ನು ಮೈದಾನವು ಸಂಪೂರ್ಣ ಒದ್ದೆಯಾಗಿದ್ದ ಕಾರಣ ದ್ವಿತೀಯ ದಿನದಾಟದಲ್ಲಿ ಪಂದ್ಯ ನಡೆದಿರಲಿಲ್ಲ. ಇನ್ನು ಮೂರನೇ ದಿನದಾಟದಲ್ಲಿ

ಮೈಸೂರು, ಸೆಪ್ಟೆಂಬರ್​ 11: ಕಲುಷಿತ ನೀರು  ಸೇವಿಸಿ 12 ಜನ ವಾಂತಿ, ‌ಭೇದಿಯಿಂದ ಅಸ್ವಸ್ಥರಾಗಿದ್ದು, ಓರ್ವ ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೋವಿಂದೇಗೌಡ (65 ವರ್ಷ) ಮೃತದುರ್ದೈವಿ. ಬೆಟ್ಟಹಳ್ಳಿ ಗ್ರಾಮಕ್ಕೆ ಟ್ಯಾಂಕರ್​​ನಿಂದ ಕುಡಿಯುವ ನೀರು ಸರಬರಾಜು ಮಾಡಲಾಗಿತ್ತು. ನೀರು ಕುಡಿದ ಬಳಿಕ ಕೆಲವರು ವಾಂತಿ-ಭೇದಿಯಿಂದ