ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿ, ಅ.12: ರಾಜಧಾನಿ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಪ್ರಜೆಗಳ ಬಂಧನ ಕಾರ್ಯಾಚರಣೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಸುಮಾರು 20ಕ್ಕೂ ಹೆಚ್ಚು ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಲಾಗಿದ್ದು ದೆಹಲಿಯಲ್ಲಿ ಐವರು, ರಾಜಸ್ಥಾನದಲ್ಲಿ ಮೂವರು, ಉತ್ತರ ಪ್ರದೇಶದಲ್ಲಿ ಇಬ್ಬರು ಪಾಕ್‌ ಪ್ರಜೆಗಳನ್ನು ಬಂಧಿಸಲಾಗಿದೆ. ಇದರ ನಡುವೆ ಇದೀಗ ಉಡುಪಿಯ ಮಲ್ಪೆಯಲ್ಲಿ

ಮುಂಬೈ: ಟಾಟಾ ಗ್ರೂಪ್ ನ ಮಾಜಿ ಗೌರವಾಧ್ಯಕ್ಷ ದಿವಂಗತ ರತನ್ ಟಾಟಾ ಅವರ ಮಲ ಸಹೋದರ ನೋಯೆಲ್ ಟಾಟಾ ಅವರು ಟಾಟಾ ಟ್ರಸ್ಟ್‌ನ ಮುಂದಿನ ಅಧ್ಯಕ್ಷರಾಗಲಿದ್ದಾರೆ ಎಂದು ಮೂಲಗಳು ಶುಕ್ರವಾರ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿವೆ. ಅವರು ದೊರಬಾಜಿ ಟಾಟಾ ಟ್ರಸ್ಟ್‌ನ 11 ನೇ ಅಧ್ಯಕ್ಷ ಮತ್ತು ರತನ್ ಟಾಟಾ ಟ್ರಸ್ಟ್‌ನ ಆರನೇ

ಬೆಂಗಳೂರು: ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ (ಪೆರಿಫೆರಲ್ ರಿಂಗ್ ರೋಡ್)ಗಾಗಿ ಭೂ ಸ್ವಾಧೀನಪಡಿಸಿಕೊಳ್ಳುವ ಜನರಿಗೆ ಭೂಸ್ವಾಧೀನ ಕಾಯ್ದೆಯಡಿ ನೀಡಲಾಗುತ್ತಿರುವ ಪರಿಹಾರಕ್ಕಿಂತ ಹೆಚ್ಚಿನ ಪರಿಹಾರವನ್ನು ನೀಡುವ ಮಾರ್ಪಡಿಸಿದ ಆದೇಶಕ್ಕೆ ರಾಜ್ಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ದಿನಾಂಕ: 19.09.2024 ರಂದು ಸಲ್ಲಿಸಿರುವ ಪ್ರಸ್ತಾವನೆಯನ್ವಯ ಈಗಾಗಲೇ ದಿನಾಂಕ: 12.09.2024

ಬೆಂಗಳೂರು: ಪ್ರತ್ಯೇಕ ಸಭೆ, ವಿವಾದಾತ್ಮಕ ಹೇಳಿಕೆಗಳ ಮೂಲಕ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಹುಟ್ಟುಹಾಕುತ್ತಿರುವ ಸಚಿವರ ವಿರುದ್ಧ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಚಹಾ, ಭೋಜನದ ನೆಪದಲ್ಲಿ ಸಚಿವರಾದ ಸತೀಶ ಜಾರಕಿಹೊಳಿ, ಎಚ್‌.ಸಿ. ಮಹದೇವಪ್ಪ, ಜಿ. ಪರಮೆಶ್ವರ್ ಅವರು ಗೌಪ್ಯವಾಗಿ ಸಭೆ

ಬೆಂಗಳೂರು: ಈ ವರ್ಷ ನವೆಂಬರ್ 1ರಂದು 50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದು, ಎಲ್ಲಾ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ  ಹಾರಿಸಲೇಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆದೇಶ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನವೆಂಬರ್ 1

ದೇಶಾದ್ಯಂತ ದೇವಿ ನವರಾತ್ರಿ ಸಂಭ್ರಮ ಜೋರಾಗಿದೆ. ದುರ್ಗಾಪೂಜೆ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ದುರ್ಗಾ ಪೂಜೆಯ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ಅಲ್ಲಿನ ಸರ್ಕಾರವು 4 ದಿನಗಳ ರಜೆಯನ್ನು ಘೋಷಿಸಿದೆ. ಇಡೀ ದೇಶವೇ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಿದೆ. ಮತ್ತೊಂದೆಡೆ, ಬಾಂಗ್ಲಾದೇಶದ ಸತ್ಖಿರಾ ನಗರದ ಶ್ಯಾಮನಗರದಲ್ಲಿರುವ  ಪ್ರಸಿದ್ಧ ಜೇಶೋರೇಶ್ವರಿ ಕಾಳಿ ದೇವಸ್ಥಾನದ  ಚಿನ್ನದ ಕಿರೀಟವನ್ನು

ಬೆಂಗಳೂರು, ಅಕ್ಟೋಬರ್ 11: ಸಾಮಾಜಿಕ ಕಾರ್ಯಕರ್ತೆ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಜತೆಗೆ, ಸಂತ್ರಸ್ತೆ ವಿರುದ್ಧ ವಿನಯ್​ ಕುಲಕರ್ಣಿ ದಾಖಲಿಸಿರುವ ಪ್ರಕರಣವನ್ನೂ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಶಾಸಕ ವಿನಯ್​ ಕುಲಕರ್ಣಿ ವಿರುದ್ಧ ರೈತ ಮಹಿಳೆ

ಉಡುಪಿ: ದೇಶಾದ್ಯಂತ 180ಕ್ಕೂ ಹೆಚ್ಚು ರೆಸ್ಟೋರೆಂಟ್‌ಗಳನ್ನು ಹೊಂದಿರುವ ‘ದ ಓಶಿಯನ್ ಪರ್ಲ್ ಗ್ರೂಫ್ ಆಪ್ ಹೊಟೇಲ್’ನಿಂದ ಉಡುಪಿಯಲ್ಲಿ 2ನೇ ಹೊಟೇಲ್ ‘ಓಶಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ ಹೋಟೆಲ್’ ಉಡುಪಿ ಹೃದಯ ಭಾಗದಲ್ಲಿರುವ ಟೈಮ್ಸ್ ಸ್ಕ್ವೇರ್ ಮಾಲ್‌ನಲ್ಲಿ ಬುಧವಾರ ಉದ್ಘಾಟಿಸಲಾಯಿತು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮತ್ತು ಕುಕ್ಕೆ

ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದದ 'ಭಾರತ ರತ್ನ'ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸರ್ಕಾರ ಸಂಪುಟ ಗುರುವಾರ ಅಂಗೀಕರಿಸಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ, ಕಳೆದ ರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದ ಉದ್ಯಮ ರಂಗದ