ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬೆಳಗಾವಿ: ಓಮಾನ್​ ದೇಶದ ಹೈಮಾ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ ಮತ್ತು ಆದಿಶೇಷ ಮೃತಪಟ್ಟವರಾಗಿದ್ದಾರೆ. ಈ ನಾಲ್ವರು ಓಮಾನ್​ಗೆ ಪ್ರವಾಸಕ್ಕೆ ತೆರಳಿದ್ದರು. ಹೈಮಾ ಎಂಬ ಪ್ರದೇಶದಲ್ಲಿ ಹೋಗುತ್ತಿದ್ದ

ಉಡುಪಿ,ಆ.30: ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಯಾವುದೇ ನದಿಗಳಲ್ಲಿ ಮತ್ತು ಇತರೆ ನೀರಿನ ಮೂಲದಲ್ಲಿ ವಿಸರ್ಜನೆ ಮಾಡುವುದರಿಂದ ನೀರಿನಲ್ಲಿರುವ ಜಲಚರಗಳಿಗೆ ಹಾನಿಯಾಗುವ ಜೊತೆಗೆ ಜಲ ಮಾಲಿನ್ಯಕ್ಕೂ ಕಾರಣವಾಗುತ್ತದೆ. ಆದ್ದರಿಂದ ಜಲ ಸಂಪನ್ಮೂಲವನ್ನು ರಕ್ಷಿಸಲು ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಬಳಸದೇ ಮಣ್ಣಿನ ಮೂರ್ತಿಯನ್ನು ಬಳಸಿ, ನಿರ್ದಿಷ್ಟ ಸ್ಥಳಗಳಲ್ಲಿಯೇ ಮೂರ್ತಿಯನ್ನು ವಿಸರ್ಜನೆ ಮಾಡಬೇಕು. ನಗರಸಭಾ

ಹಿಮಾಚಲ ಪ್ರದೇಶ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಿನ್ನಲೆ ಇದೀಗ ಎಲ್ಲಾ ರಾಜ್ಯ ಸಚಿವರು, ಮುಖ್ಯ ಸಂಸದೀಯ ಕಾರ್ಯದರ್ಶಿಗಳು ಮತ್ತು ಕ್ಯಾಬಿನೆಟ್ ದರ್ಜೆಯ ಸದಸ್ಯರಿಗೆ 2 ತಿಂಗಳ ವರೆಗೆ ಯಾವುದೇ ವೇತನ ಹಾಗೂ ಭತ್ಯೆ ನೀಡಲಾಗುವುದಿಲ್ಲ ಎಂದು ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್‌ ಸಿಂಗ್ ಸುಖು ರಾಜ್ಯ ವಿಧಾನಸಭೆಗೆ ತಿಳಿಸಿದ್ದಾರೆ. ಮುಂದಿನ

ಹಾಲಿನ ವ್ಯಾಪಾರಿ ಇದ್ದ ಬೈಕ್​ಗೆ ಅಪ್ರಾಪ್ತ ಬಾಲಕ ಕಾರನ್ನು ಡಿಕ್ಕಿ ಹೊಡೆಸಿರುವ ಘಟನೆ ಗೋರೆಗಾಂವ್​ನಲ್ಲಿ ನಡೆದಿದೆ, ವ್ಯಾಪಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಎಸ್‌ಯುವಿ ವೇಗವಾಗಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಮುಂಜಾನೆ 4 ಗಂಟೆ ಸುಮಾರಿಗೆ ಆರೆ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ದ್ವಿಚಕ್ರ ವಾಹನಕ್ಕೆ

ಬೆಂಗಳೂರು, ಆಗಸ್ಟ್ 30: ಕರ್ನಾಟಕದಲ್ಲಿ ಮಳೆ ಹೆಚ್ಚಳದ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರ್ತಿಲ್ಲ.‌ ಹೀಗಾಗಿ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರುಹಿಸಿಕೊಳ್ಳಲಾಗುತ್ತಿದ್ದು,‌ ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಈರುಳ್ಳಿಯ ಬೆಲೆ 60-70 ರೂಪಾಯಿ ಆಗಿದೆ.‌ ಹಬ್ಬದ ವೇಳೆಗೆ ಈರುಳ್ಳಿಯ ಬೆಲೆ ಮತ್ತಷ್ಟು

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾತ್ರಿಯಿಡೀ ಸುರಿದ ಭಾರಿ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಹಲವು ರಸ್ತೆಗಳು ನದಿಯಂತಾಗಿವೆ. ಪರಿಣಾಮ ಗುರುವಾರ ಬೆಳಗ್ಗೆ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ. ಭಾರತೀಯ ಹವಾಮಾನ ಇಲಾಖೆ(IMD) ಪ್ರಕಾರ, ಕನಿಷ್ಠ ತಾಪಮಾನವು 23 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಇಂದು ಬೆಳಗ್ಗೆ 8.30ರ ವೇಳೆಗೆ ತೇವಾಂಶದ ಪ್ರಮಾಣ

ಕುಪ್ವಾರ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಸದೆಬಡಿದಿದೆ ಎಂದು ಗುರುವಾರ ತಿಳಿದುಬಂದಿದೆ. ಕುಪ್ವಾರ ಜಿಲ್ಲೆ ತಂಗ್ಧಾರ್ ನಲ್ಲಿ ಕೆಲ ಉಗ್ರರು ಗಡಿ ನುಸುಳಲು ಯತ್ನ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ

-:ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣಜನ್ಮಾಷ್ಟಮಿಯ ಶುಭಾಶಯಗಳು:-  

ನಟ ದರ್ಶನ್ ಅವರು ಕೇಂದ್ರ ಕಾರಾಗೃಹದಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇದ್ದರು. ಈ ಫೋಟೋ ವೈರಲ್ ಆಗಿತ್ತು. ಇದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ. ಜೈಲಿನ ಏಳು

ಪಾಕಿಸ್ತಾನದ ಬಲೂಚಿಸ್ತಾನದಲ್ಲಿ 23 ಪ್ರಯಾಣಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಬಸ್​ ನಿಲ್ಲಿಸಿ ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿದ ಬಂದೂಕುಧಾರಿಗಳು 23 ಪ್ರಯಾಣಿಕರನ್ನು ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿದ್ದಾರೆ. ಆಕ್ರಮಣಕಾರರು ಅಂತರ-ಪ್ರಾಂತೀಯ ಬಸ್‌ಗಳು ಮತ್ತು ಟ್ರಕ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಪ್ರಯಾಣಿಕರನ್ನು ಗೆಳಗಿಳಿಸಿ ಗುರುತಿನ ಚೀಟಿ