ಉಡುಪಿ : ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಶಾಲಾ ವಾಹನಗಳ ಮೇಲೆ ನಿಗಾ ಇಡಲು ಉಡುಪಿ ಎಸ್ ಪಿ ಆಯಾ ವ್ಯಾಪ್ತಿಯ ಠಾಣಾಧಿಕಾರಿಗಳಿಗೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಗುರುವಾರ ಬೆಳಗ್ಗೆ ಶಾಲೆಗಳ ಮುಂದೆ ಕಾರ್ಯಾಚರಣೆಗಿಳಿದಿದ್ದಾರೆ. ನಗರದ ಪ್ರಮುಖ ಜಂಕ್ಷನ್, ಶಾಲೆಯ ಮುಂಭಾಗದಲ್ಲಿ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯ ಅಧಿಕಾರಿ
ಟೆಹ್ರಾನ್: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಗುರುವಾರ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಎರಡೂ ರಾಷ್ಟ್ರಗಳ ನಡುವಿನ ಕ್ಷಿಪಣಿ ದಾಳಿ ಮತ್ತಷ್ಟು ತೀವ್ರಗೊಂಡಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ, ನಮ್ಮ ದೇಶ ಒಗ್ಗಟ್ಟಿನಿಂದ ಇದ್ದು, ವಿದೇಶಿ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇಂದು ಬೆಳಗ್ಗೆ ಇಸ್ರೇಲ್ ಮೇಲೆ ಇರಾನ್ ಡಜನ್ ಗಟ್ಟಲೆ
ನಿಕೋಸಿಯಾ: ಸೈಪ್ರಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಆಫ್ ಸೈಪ್ರಸ್ ಅನ್ನು ಪ್ರದಾನ ಮಾಡಲಾಯಿತು. ಸೈಪ್ರಸ್ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಪ್ರಧಾನಿ ಮೋದಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ
ಟೆಹ್ರಾನ್:ಜೂ. 16. ಇಸ್ರೇಲ್ ಇರಾನ್ ಮೇಲೆ ಪರಮಾಣು ಬಾಂಬ್ ಹಾಕಿದರೆ ಪಾಕಿಸ್ತಾನವು ಇಸ್ರೇಲ್ ಮೇಲೆ ಪರಮಾಣು ದಾಳಿ ನಡೆಸುತ್ತದೆ ಎಂದು ಇರಾನ್‌ನ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಹೂದಿ ರಾಷ್ಟ್ರವಾದ ಇಸ್ರೇಲ್ ಇರಾನ್ ಮೇಲೆ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಿದರೆ ಪಾಕಿಸ್ತಾನ ಇಸ್ರೇಲ್ ಮೇಲೆ ಪರಮಾಣು ದಾಳಿ ನಡೆಸುತ್ತದೆ ಎಂದು ಇರಾನಿನ ಹಿರಿಯ
ಅಹಮದಾಬಾದ್:ಜೂ.16, ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರ ಪೈಕಿ ಡಿಎನ್‌ಎ ಹೊಂದಾಣಿಕೆ ಮೂಲಕ 87 ಮಂದಿಯ ಗುರುತು ಪತ್ತೆ ಮಾಡಲಾಗಿದೆ. 47 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದುರಂತ ನಡೆದ ನಾಲ್ಕು ದಿನಗಳ ನಂತರ 87 ಸಂತ್ರಸ್ತರನ್ನು ಗುರುತಿಸಲಾಗಿದೆ. ಈವರೆಗೆ ಗುರುತು ಪತ್ತೆ
ದಾವಣಗೆರೆ: ನಮ್ಮ ಸರ್ಕಾರದ ಮುಂಬರುವ ಸಾಮಾಜಿಕ-ಶೈಕ್ಷಣಿಕ ಮತ್ತು ಜಾತಿ ಸಮೀಕ್ಷೆಯು ಕೇಂದ್ರದ ಜಾತಿ ಗಣತಿಗಿಂತ ಸಂಪೂರ್ಣ ಭಿನ್ನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ರಾಜ್ಯದ ಈ ಉಪಕ್ರಮವು ಸಾಮಾಜಿಕ ನ್ಯಾಯ ಒದಗಿಸುತ್ತದೆ ಎಂದು ಒತ್ತಿ ಹೇಳಿದ್ದಾರೆ. ಕೇಂದ್ರ ಸರ್ಕಾರ 16ನೇ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ಮಾರ್ಚ್ 1,
ಬೆಂಗಳೂರು: ನೆಲಮಂಗಲದ ಕುಣಿಗಲ್ ಬೈಪಾಸ್ನಲ್ಲಿ ಸೋಮವಾರ ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್(22) ಮತ್ತು ಸಹನಾ(21) ಎಂದು ಗುರುತಿಸಲಾಗಿದೆ. ಅಪಘಾತದ ನಂತರ ಲಾರಿ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಪ್ರಜ್ವಲ್ ಕೆಲವು ಸಿನಿಮಾ ಮತ್ತು
ಕಲಬುರಗಿ: ಕೋರ್ಟ್ ಹಾಲ್‌ಗೆ ತೆರಳುವ ಕೆಲವೇ ನಿಮಿಷಗಳಿಗೂ ಮುನ್ನ ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರು ಸಾವನಪ್ಪಿರುವ ಘಟನೆ, ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಕಲಬುರಗಿ ಜಿಲ್ಲಾ 3ನೇ ಹಿರಿಯ ಶ್ರೇಣಿ ನ್ಯಾಯಾಧೀಶರಾದ ವಿಶ್ವನಾಥ್ ವಿ ಮೂಗತಿ (44) ಸಾವನ್ನಪ್ಪಿದ ದುರ್ದೈವಿ. ಕಳೆದ ವಾರವೇ ಕಲಬುರಗಿ ಕೋರ್ಟ್‌ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು. ಇಂದು ಬೆಳಗ್ಗೆ
ಗುಜರಾತ್ನ ಅಹಮದಾಬಾದ್‌ನಲ್ಲಿ ಗುರುವಾರ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಕೇರಳದ ಪುಲ್ಲಾಡ್ ಮೂಲದ ರಂಜಿತಾ ಗೋಪಕುಮಾರ್ ಸಾವನ್ನಪ್ಪಿದ್ದಾರೆ. ಇವರ ಸಾವನ್ನು ಜಿಲ್ಲಾಧಿಕಾರಿಗಳು ಧೃಡಪಡಿಸಿದ್ದು, ಇಡೀ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ. ರಂಜಿತಾ ಪತ್ತನಂತಿಟ್ಟ ಜಿಲ್ಲೆಯಲ್ಲೇ ಸರ್ಕಾರಿ ಉದ್ಯೋಗದಲ್ಲಿದ್ದರು. ಆದರೆ ತಮ್ಮ ಸ್ವಂತ ಮನೆ ಹೊಂದುವ ಕನಸನ್ನು ನನಸಾಗಿಸಿಕೊಳ್ಳಲು, ವಿದೇಶದಲ್ಲಿ ಕೆಲಸ
ಮಂಗಳೂರಿನಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು ‘ಸ್ಪೆಷಲ್ ಆ್ಯಕ್ಷನ್ ಫೋರ್ಸ್’ ಇಂದು ಅಸ್ತಿತ್ವಕ್ಕೆ ಬಂದಿದೆ. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ನೂತನ ವಿಶೇಷ ಕಾರ್ಯಪಡೆ ಘಟಕಕ್ಕೆ ಚಾಲನೆ ನೀಡಿದರು. ಕೋಮು ಸಂಘರ್ಷ ಸಿಲುಕಿದ್ದ ಮಂಗಳೂರಿಗೆ ನೂತನ ಪೊಲೀಸ್ ಪಡೆಯ ಆಗಮನವಾಗಿದೆ. ರಾಜ್ಯ ಸರ್ಕಾರ