ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಬೆಂಗಳೂರು: ಕಳ್ಳ ಸಾಗಾಣಿಕೆಯಲ್ಲಿ ಚಿನ್ನಾಭರಣ ಸಾಗಿಸಲು ಯತ್ನಿಸಿದ ಮೂವರು ವಿದೇಶಿಗರನ್ನು ಬಂಧಿಸಿ 2.44 ಕೆಜಿ ಚಿನ್ನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಥಾಯ್ಲೆಂಡ್ ದೇಶದ ಬ್ಯಾಂಕಾಂಕ್ ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 3 ವಿದೇಶಿಗರಿಂದ ರೂ.1.71 ಕೋಟಿ ಮೌಲ್ಯದ 2.44 ಕೆಜಿ

ಶಿರೂರು: ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬುಧವಾರ ಬೆಳಗ್ಗೆ ನಿಧಾನಗತಿಯಲ್ಲಿ ಪುನರಾರಂಭಗೊಂಡ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯು ಭಾರೀ ಮಳೆ ಮತ್ತು ಸ್ಥಳದಲ್ಲಿ ಸಣ್ಣ ಭೂಕುಸಿತದಿಂದಾಗಿ ಸ್ಥಗಿತಗೊಂಡಿದೆ. ಗುಡ್ಡದ ಭಾಗವು ಜಾರುತ್ತಲೇ ಇದೆ, ಇದು NDRI

ಪಾಟ್ನಾ: ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS)ಯ ಮೂವರು ವೈದ್ಯಕೀಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದೆ.ಅವರ ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳನ್ನು ಸಹ ತನಿಖಾ ಸಂಸ್ಥೆ ವಶಪಡಿಸಿಕೊಂಡಿದೆ. 2021 ರ ಬ್ಯಾಚ್‌ಗೆ ಸೇರಿದ ವಿದ್ಯಾರ್ಥಿಗಳನ್ನು

ಹಾಸನ, ಜುಲೈ: ಹಾಸನ ಹಾಸನ‌ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್​​ನಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಇಂದು ಮುಂಜಾನೆ ದೊಡ್ಡತಪ್ಲು ಬಳಿ ಗುಡ್ಡ ಕುಸಿತ ಸಂಭವಿಸಿದೆ. ಗುಡ್ಡ ಕುಸಿತದಿಂದ ಸುಮಾರು 10 ಕಿಮೀ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ಟ್ರಕ್, ಲಾರಿ ಟ್ಯಾಕರ್

ಬೆಂಗಳೂರು, ಜುಲೈ 17: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್​ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಹಗರಣದ ಆರೋಪಿಗಳ ಹೇಳಿಕೆ ಆಧರಿಸಿ ಈ

ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ತಗ್ಗಿದರೂ ಗುಡ್ಡ ಕುಸಿತದ ಆತಂಕ‌ ತಪ್ಪಿಲ್ಲ. ಗೋಕರ್ಣದಲ್ಲಿ ಬೆಳ್ಳಂಬೆಳಿಗ್ಗೆ ಗುಡ್ಡ ಕುಸಿದಿದೆ. ಗೋಕರ್ಣ ಮುಖ್ಯಕಡಲತೀರದ ರಾಮಮಂದಿರ ಬಳಿ ಗುಡ್ಡ ಕುಸಿತವಾಗಿದೆ. ಮಂದಿರದಲ್ಲಿ ‌ಯಾರು ಇಲ್ಲದ ಕಾರಣ‌ ಅನಾಹುತ ನಡೆದಿಲ್ಲ. ಗುಡ್ಡದ ಕಲ್ಲುಗಳು ದೇವಾಲಯದ ಗೋಡೆತನಕ ಉರುಳಿ ಬಂದು ನಿಂತಿವೆ. ಹೆಚ್ಚಿನ ಅನಾಹುತವಾಗಿಲ್ಲ.

ಮಸ್ಕತ್: ಒಮನ್ ಕರಾವಳಿಯಲ್ಲಿ 117 ಮೀಟರ್ ಉದ್ದದ ತೈಲ ಟ್ಯಾಂಕರ್ ಮಗುಚಿ ಬಿದ್ದ ಪರಿಣಾಮ 13 ಮಂದಿ ಭಾರತೀಯರು ಸೇರಿ 16 ಮಂದಿ ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ನಾಪತ್ತೆಯಾಗಿರುವವರಲ್ಲಿ 13 ಭಾರತೀಯ ಪ್ರಜೆಗಳು ಹಾಗೂ ಮೂವರು ಶ್ರೀಲಂಕಾ ನಾಗರೀಕರು ಎಂದು ಕಡಲ ಭದ್ರತಾ ಕೇಂದ್ರ (MSC) ಮಾಹಿತಿ ನೀಡಿದೆ. ಕಾಣೆಯಾದವರ ಪತ್ತೆಹಚ್ಚಲು ಶೋಧ

ಬೆಂಗಳೂರು: 2 ದಿನಗಳಿಂದ ಸುರಿಯುತ್ತಿರುವ ಅವ್ಯಾಹಸ ಮಳೆ ಉತ್ತರ ಕನ್ನಡ ಕರಾವಳಿಯಲ್ಲಿ ಭಾರೀ ಅನಾಹುತ, ಅವಘಡಗಳ ಸರಮಾಲೆಯನ್ನೇ ಸೃಷ್ಟಿಸಿದೆ. ಹಲವೆಡೆ ಗುಡ್ಡ ಕುಸಿತದಿಂದ 11 ಜನ ಮೃತರಾಗಿರುವ ಶಂಕೆ ವ್ಯಕ್ತವಾಗಿದ್ದು, ಐದು ಮೃತದೇಹ ಪತ್ತೆಯಾಗಿದೆ. ಜಿಲ್ಲೆಯ ಕರಾವಳಿಯ ಪ್ರಮುಖ ರಸ್ತೆಗಳೆಲ್ಲವೂ ಬಂದ್ ಆಗಿದ್ದು, ಅಕ್ಷರಶಃ ದ್ವೀಪದಂತಾಗಿದೆ. ಕರಾವಳಿಯ ಐದೂ ತಾಲೂಕುಗಳ

ಕಾರವಾರ, ಜುಲೈ 16: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 9 ಮಂದಿ ಮಣ್ಣಿನಡಿ ಸಿಲುಕಿ  7 ಮಂದಿ ಮೃತ್ಯು ಆಗಿದ್ದಾರೆ.  ಇದರಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಐವರು ಇದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ನಾಯ್ಕ, ಶಾಂತಿ

ಬೆಂಗಳೂರು, ಜುಲೈ 16: ನಂದಿನಿ ಹಾಲಿನ ಪ್ಯಾಕೆಟ್​​ಗಳಲ್ಲಿ ಪ್ರಮಾಣ ತುಸು ಹೆಚ್ಚಿಸಿ ದರ ಪರಿಷ್ಕರಣೆ ಮಾಡಿದ್ದ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಇದೀಗ ನಂದಿನಿ ಮೊಸರು, ಮಜ್ಜಿಗೆ ಹಾಗೂ ಲಸ್ಸಿಯ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಕೆಲವೆಡೆ ವರದಿಯಾಗಿದೆ. ಆದರೆ ಇದು ಸುಳ್ಳು