ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಗುರುಗ್ರಾಮ್: ಮಾಜಿ ಪೊಲೀಸ್ ಕಮಿಷನರ್ ಕೃಷ್ಣ ಕುಮಾರ್ ರಾವ್ ಅವರು ನ್ಯಾಯಾಂಗ ಆದೇಶದಲ್ಲಿ ತಮ್ಮ ವಿರುದ್ಧ ವ್ಯತಿರಿಕ್ತ ಹೇಳಿಕೆಗಾಗಿ ನ್ಯಾಯಾಧೀಶರ ವಿರುದ್ಧ 1 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಲಾಗಿದ್ದು ಅದೇ ದಿನ ಈ ಬಗ್ಗೆ ವಿಚಾರಣೆ ಕೂಡ ನಡೆದಿತ್ತು. ನವೆಂಬರ್ 21ರಂದು

ಪಾಟ್ನಾ: ಭೂ ವಿವಾದ ಸಂಬಂಧ ನಡೆದ ಗುಂಡಿನ ದಾಳಿಯ ನಂತರ ಬುಧವಾರ ತಡರಾತ್ರಿ ನವಾಡ ಜಿಲ್ಲೆಯ ಮುಫಾಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾದಲಿತ್ ತೊಲಾ ಗ್ರಾಮದಲ್ಲಿ ದುಷ್ಕರ್ಮಿಗಳ ಗುಂಪೊಂದು ಸುಮಾರು 80 ಮನೆಗಳಿಗೆ ಬೆಂಕಿ ಹಚ್ಚಿದೆ. ಮಹಾದಲಿತ ಸಮುದಾಯದ ಜನರು ಕಳೆದ 10 ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಮೂಲಗಳು

ಬೆಂಗಳೂರು: ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ, ಅಂದು ವಿರೋಧ ಪಕ್ಷ ಸ್ಥಾನದಲ್ಲಿದ್ದ ಕಾಂಗ್ರೆಸ್ ‘ಪೇ ಸಿಎಂ’ ಅಭಿಯಾನ ನಡೆಸಲು ಕಾರಣವಾಗಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇಂದು ಗುರುವಾರ ನಿಧನರಾಗಿದ್ದಾರೆ. ಹೊಸಕೋಟೆಯ ಅವರ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ

ರಾಮನಗರ, ಸೆ.19: ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಕೇಸ್‌ನಲ್ಲಿ ಬಿಜೆಪಿ ಶಾಸಕ ಮುನಿರತ್ನ (Munirathna) ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಅವರ ವಿರುದ್ಧ ಒಕ್ಕಲಿಗ, ದಲಿತ ಸಂಘಟನೆಗಳು ಸರಣಿ ಪ್ರತಿಭಟನೆ ಮಾಡ್ತಿವೆ. ಕಾಂಗ್ರೆಸ್‌ಗೆ ಈ ಪ್ರಕರಣ ಅಸ್ತ್ರವಾಗಿ ಸಿಕ್ಕಿದೆ. ಆದರೆ ಇದೀಗ ಇದರ ನಡುವೆ ಮುನಿರತ್ನಗೆ

ಬೆಂಗಳೂರು, ಸೆಪ್ಟೆಂಬರ್ 19: ಮುಡಾ ಹಗರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರು ಇದೀಗ ಅದೇ ಪ್ರಕರಣದಲ್ಲಿ ದಾಖಲಾಗಿರುವ ಮತ್ತೊಂದು ದೂರಿಗೆ ಸಂಬಂಧಿಸಿ ಸರ್ಕಾರದಿಂದ ವರದಿ ಕೇಳಿದ್ದಾರೆ. ಸಿದ್ದರಾಮಯ್ಯ ಮೇಲಿನ ದೂರಿನ ವಿವರಣೆ ಕೇಳಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ನವದೆಹಲಿ: 'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶ. ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ವರದಿ ಸಲ್ಲಿಸಲು ಕೇಂದ್ರವು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿತ್ತು. ಮೂಲಗಳ

ಉಡುಪಿ:ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಅನಂತವ್ರತ ಕಾರ್ಯಕ್ರಮ ದೇವಾಲಯದ ತಂತ್ರಿಗಳವರಾದ ಹಯವದನ ತಂತ್ರಿ, ವಾದಿರಾಜ ತಂತ್ರಿ, ಪ್ರದಾನ ಅರ್ಚಕ ರಾಘವೇಂದ್ರ ಭಟ್,ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಹಾಗೂ ಅನಂತ ವಿಪ್ರ ಬಳಗದವರ ಸಹಕಾರದಿಂದ ವೈಭವದಿಂದ ಜರುಗಿತು. ವಿಶೇಷವಾಗಿ ಅನಂತ ಕದಳಿ ಸಮರ್ಪಣೆ ಸೇವೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್‌ ಮತ್ತು ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯು ಸೆಪ್ಟೆಂಬರ್ 30ರವರೆಗೂ ವಿಸ್ತರಣೆಯಾಗಿದೆ. ಕೊಲೆ ಕೇಸ್‌ ಆರೋಪ ಪಟ್ಟಿ ಸಲ್ಲಿಕೆಯಾದ ಬಳಿಕ ನ್ಯಾಯಾಲಯ ದರ್ಶನ್‌, ಪವಿತ್ರಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ಸೆಪ್ಟೆಂಬರ್‌ 12 ರವರೆಗೆ ಆ ಬಳಿಕ ಸೆಪ್ಟೆಂಬರ್‌ 17

ಕಲಬುರಗಿ: ಕಲಬುರಗಿ ನಗರವನ್ನು ರೂ. 1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದರು. ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ, ಸ್ಟಾರ್ಟ್ ಸಿಟಿಯಾಗಿ ಅಭಿವೃದ್ಧಿಪಡಿಸುವುದರಿಂದ ಇಲ್ಲಿನ ಜನರ ಜೀವನ ಗುಣಮಟ್ಟ ಸುಧಾರಿಸಲಿದ್ದು, ಹಿಂದುಳಿದ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ. ಆರೋಪಿಗಳಾದ ಹುಕ್ಕೇರಿಯ ಭರತ್ ಜಯವಂತ ಕುರಾನೆ (42), ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ (ಈ ಹಿಂದಿನ ಹೆಸರು ಔರಂಗಾಬಾದ್)