ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ವಯನಾಡ್: ವಿನಾಶಕಾರಿ ಭೂಕುಸಿತದ ನಂತರ ಭಾರತೀಯ ಸೇನೆಯು ಕೇರಳದ ವಯನಾಡ್‌ನಲ್ಲಿ ತನ್ನ ರಕ್ಷಣಾ ಕಾರ್ಯಾಚರಣೆಯನ್ನು ಹೆಚ್ಚಿಸಿದೆ, ಭೂಕುಸಿತ ಪೀಡಿತ ಪ್ರದೇಶಗಳಿಂದ 1,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ. ಇಂದು ಬುಧವಾರ ಬೆಳಗ್ಗೆಯ ವೇಳೆಗೆ ಸುಮಾರು 126 ಮಂದಿ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಕಣ್ಣೂರಿನ ಡಿಎಸ್‌ಸಿ

ವಯನಾಡ್: ಕೇರಳದ ವಯನಾಡ್‌ನಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ೧೭೫ಕ್ಕೆ ಏರಿಕೆಯಾಗಿದೆ. 211 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ, ಸಾವಿರಾರು ಮಂದಿ ಗಾಯಗೊಂಡಿದ್ದು ಬದುಕುಳಿದವರು ಸ್ಥಳಾಂತರಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಿನ್ನೆ ಮಂಗಳವಾರ ನಸುಕಿನ ಜಾವ ವಯನಾಡ್ ಜಿಲ್ಲೆಯ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳಲ್ಲಿ ಭಾರಿ ಭೂಕುಸಿತ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗದ ನೂತನ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಆಯ್ಕೆಯಾಗಿದ್ದು, ಆಗಸ್ಟ್ 1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ . 1983ರ ಬ್ಯಾಚ್‌ನ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ವಿವಾದದ ಸಂದರ್ಭದಲ್ಲಿ ಯುಪಿಎಸ್‌ಸಿ ಮಾಜಿ ಅಧ್ಯಕ್ಷ ಮನೋಜ್

ಹಾಸನ, ಜುಲೈ 30: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ.  ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ. ಸತತ ಮಳೆಯಿಂದ ದೊಡ್ಡತಪ್ಲೆ ಬಳಿ

ಪ್ಯಾರಿಸ್‌: ಪ್ಯಾರಿಸ್​ ಒಲಿಂಪಿಕ್ಸ್‌ 2024ನಲ್ಲಿ ಭಾರತ ಮತ್ತೊಂದು ಪದಕವನ್ನು ತನ್ನದಾಗಿಸಿಕೊಂಡಿದೆ. 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್‌ ಸಿಂಗ್‌ ಮತ್ತು ಮನು ಭಾಕರ್​ ಜೋಡಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. 2 ದಿನಗಳ ಹಿಂದಷ್ಟೇ ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ

ವಯನಾಡ್: ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆಗಾಗಿ ಕೇರಳ ಸರ್ಕಾರ ಮಂಗಳವಾರ ಭಾರತೀಯ ಸೇನೆಯ ನೆರವು ಕೋರಿದೆ. ಇದರ ಬೆನ್ನಲ್ಲೇ, ಭಾರತೀಯ ಸೇನೆ, NDRF ತಂಡಗಳು, ಎರಡು ಸೇನಾ ಹೆಲಿಕಾಪ್ಟರ್‌ಗಳು ಮತ್ತು ಇತರ ರಕ್ಷಣಾ ತಂಡಗಳು ಮುಂಡಕ್ಕೈಗೆ ತೆರಳುತ್ತಿವೆ. ಕೇರಳದ ಗುಡ್ಡಗಾಡು ಪ್ರದೇಶವಾದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ವಿನಾಶಕಾರಿ

ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ. ಹಲವು ಕುಟುಂಬಗಳು ಜಲಸಮಾಧಿಯಾಗಿವೆ. ಕನಿಷ್ಠ 400ಕ್ಕೂ ಹೆಚ್ಚು ಕುಟುಂಬಗಳು ದುರಂತದಲ್ಲಿ ಸಿಲುಕಿವೆ ಎಂದು ಹೇಳಲಾಗುತ್ತದೆ. ಇಂದು ನಸುಕಿನ ಜಾವ ಭೂಕುಸಿತ ಸಂಭವಿಸಿದ್ದು, ಮನೆಗಳು ಮತ್ತು ಕುಟುಂಬಗಳು ಕೊಚ್ಚಿಕೊಂಡು ಹೋಗಿವೆ. ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು

ಬಾಗಲಕೋಟೆ, ಜುಲೈ.30: ಬೆಳಗಾವಿಯಲ್ಲಿ (Belagavi) ಮೂರು ನದಿಗಳ ಆರ್ಭಟಕ್ಕೆ ಅಡಿಬಟ್ಟಿ ಗ್ರಾಮದ 30ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಜಲಾವೃತವಾಗಿದೆ. ನೆಮ್ಮದಿಯಾಗಿ ಬದುಕ್ತಿದ್ದ ಜನರ ಬದುಕು ಬೀದಿದೆ ಬಂದಿದೆ. ನಿನ್ನೆಯಷ್ಟೇ ಮನೆಯಲ್ಲಿದ್ದವರು ಇದೀಗ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯೋ ಸ್ಥಿತಿ ತಂದಿಟ್ಟಿದ್ದಾನೆ ವರುಣರಾಯ, ಮೂರು ನದಿಗಳ ನೀರು ನೂರಾರು ಜನರ ಬದುಕನ್ನೇ

ಪ್ಯಾರಿಸ್ ಒಲಿಂಪಿಕ್ಸ್​ನ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಭಾರತದ ಮಣಿಕಾ ಬಾತ್ರಾ ಪ್ರಿ ಕ್ವಾರ್ಟರ್‌ಫೈನಲ್​ಗೆ ಎಂಟ್ರಿ ಕೊಟ್ಟಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಸೋಮವಾರ ನಡೆದ ಮಹಿಳಾ ಸಿಂಗಲ್ಸ್ ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ಮಣಿಕಾ ಬಾತ್ರಾ ಹಾಗೂ ಫ್ರಾನ್ಸ್​ನ ಪ್ರಿತಿಕಾ ಪವಾಡೆ

ಮಂಡ್ಯ, (ಜುಲೈ 29): ಕೆಲ ವರ್ಷಗಳಿಂದ ಸರಿಯಾದ ಮಳೆ ಇಲ್ಲದೇ ಬರಿದಾಗಿದ್ದ ಕಾವೇರಿ ಜಲಾಶಯ ಇದೀಗ ಭರ್ತಿಯಾಗಿದ್ದು, ರೈತರು ಸಂತಸಗೊಂಡಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಸೇರಿ ಅವರು ಇಂದು (ಜುಲೈ 29) ಕಾವೇರಿಗೆ ಬಾಗಿನ ಅರ್ಪಿಸಿದರು. ಆದ್ರೆ, ಈ ಬಾಗಿನ ಕಾರ್ಯಕ್ರಮದ