37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ನ್ಯೂಜೆರ್ಸಿ: ಮದುವೆಗಾಗಿ ಅಮೆರಿಕಕ್ಕೆ ಆಗಮಿಸಿದ್ದ 24 ವರ್ಷದ ಭಾರತೀಯ ಯುವತಿಯೊಬ್ಬಳು ನಾಪತ್ತೆಯಾಗಿರುವುದಾಗಿ ನ್ಯೂಜೆರ್ಸಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ತನಿಖೆ ಆರಂಭಿಸಿ, ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಯುವತಿ ಸಿಮ್ರಾನ್ ಎಂದು ಗುರುತಿಸಲಾಗಿದೆ. ಆಕೆ ಬುಧವಾರ ನಾಪತ್ತೆಯಾಗುವ ಮುನ್ನಾ ಯಾರಿಗೂ ಕಾಯುತ್ತಿರುವುದು ಹಾಗೂ ತನ್ನ ಫೋನ್ ಅನ್ನು ಪರಿಶೀಲಿಸುತ್ತಿರುವುದು ಕಂಡುಬಂದಿದೆ ಎಂದು

  ಉಡುಪಿ:ಉಡುಪಿಯ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥದ ನಿರ್ಮಾಣಕ್ಕೆ ಭಾನುವಾರದ೦ದು ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ಮ೦ತ್ರಾಲಯದ ಶ್ರೀರಾಘವೇ೦ದ್ರ ಮಠದ ಶ್ರೀಸುಬುಧೇ೦ದ್ರ ತೀರ್ಥಶ್ರೀಪಾದರು ಅದ್ದೂರಿಯ ಚಾಲನೆಯನ್ನು ನೀಡಿದರು. ಪರ್ಯಾಯ ಶ್ರೀಪುತ್ತಿಗೆಮಠದ ಶ್ರೀಸುಗುಣೇ೦ದ್ರ ತೀರ್ಥ ಶ್ರೀಪಾದರು ತಮ್ಮ ಚತುರ್ಥ ಪರ್ಯಾಯದಲ್ಲಿ ಲೋಕಕಲ್ಯಾಣರ್ಥವಾಗಿ,ತಮ್ಮ ಸನ್ಯಾಸ ಸುವರ್ಣಮಹೋತ್ಸವದ ಪ್ರಯುಕ್ತ ಶ್ರೀಕೃಷ್ಣದೇವರಿಗೆ ಸಮರ್ಪಿಸಲು ಸ೦ಕಲ್ಪಿಸುವ ಪಾರ್ಥಸಾರಥಿ ರಥ ಇದಾಗಿದೆ. ಕಾರ್ಯಕ್ರಮದ ಆರ೦ಭದಲ್ಲಿ

ಗಾಜಾ ನಗರದ ಅಲ್-ತುಫಾ ನೆರೆಹೊರೆಯಲ್ಲಿ ಜನನಿಬಿಡ ವಸತಿ ಕಟ್ಟಡದ ಮೇಲೆ ಇಸ್ರೇಲ್ ನಿನ್ನೆ ಶನಿವಾರ ನಡೆಸಿದ ಬಾಂಬ್ ದಾಳಿಯಲ್ಲಿ ಒಂಬತ್ತು ಮಕ್ಕಳು ಸೇರಿದಂತೆ ಕನಿಷ್ಠ 20 ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ. ಗಾಜಾದ ಆರೋಗ್ಯ ಸಚಿವಾಲಯದ ಪ್ರಕಾರ, ಶನಿವಾರ ಗಾಜಾದಾದ್ಯಂತ ವಿವಿಧ ದಾಳಿಗಳಲ್ಲಿ ಕನಿಷ್ಠ 81 ಪ್ಯಾಲೆಸ್ತೀನಿಯನ್ನರು ಮೃತಪಟ್ಟಿದ್ದಾರೆ. ಇದರಲ್ಲಿ ಅಮೆರಿಕ ಬೆಂಬಲಿತ

ಉತ್ತರಕಾಶಿ ಜಿಲ್ಲೆಯ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ಒಂಬತ್ತು ರಸ್ತೆ ನಿರ್ಮಾಣ ಕಾರ್ಮಿಕರು ಕೊಚ್ಚಿಹೋಗಿರುವ ಶಂಕೆಯಿದೆ. ಉತ್ತರಕಾಶಿ ಜಿಲ್ಲೆಯ ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಬಾರ್ಕೋಟ್ ಪ್ರದೇಶದ ಸಿಲೈ ಬೆಂಡ್ ಬಳಿ ಭಾರೀ ಮಳೆ ಮತ್ತು ಮೇಘಸ್ಫೋಟದ ಪರಿಣಾಮವಾಗಿ ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ಉತ್ತರಕಾಶಿಯ ವಿಪತ್ತು

ಬಳ್ಳಾರಿ: ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಬಳ್ಳಾರಿಯಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ

ಇಸ್ಲಾಮಾಬಾದ್: ವರುಣಾಘಾತದಿಂದ ಪಾಕಿಸ್ತಾನ ನಲುಗಿದ್ದು, ಮೃತರ ಸಂಖ್ಯೆ 38 ಕ್ಕೆ ಏರಿಕೆಯಾಗಿದೆ. 63 ಮಂದಿ ಗಾಯಗೊಂಡಿದ್ದು, ಮುಂಗಾರು ಪೂರ್ವ ಮಳೆಯು ದೇಶದ ವಿವಿಧ ಭಾಗಗಳಲ್ಲಿ ಅಪಾರ ಹಾನಿಯನ್ನುಂಟುಮಾಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಜೂನ್ 26 ರಿಂದ ಪ್ರಾರಂಭವಾದ ಮುಂಗಾರು ಪೂರ್ವ ಮಳೆ ದೇಶದ ವಿವಿಧ ಭಾಗಗಳಲ್ಲಿ ಮುಂದುವರೆದಿದ್ದು, ಭಾರಿ ಮಳೆಯಾಗುತ್ತಿದೆ. ವಾಯುವ್ಯದಲ್ಲಿರುವ

ಭುವನೇಶ್ವರ/ ಪುರಿ: ಭಾನುವಾರ ಬೆಳಗಿನ ಜಾವ ಪುರಿಯ ಗುಂಡಿಚಾ ದೇವಸ್ಥಾನದ ಮುಂದೆ ಸಂಭವಿಸಿದ ಕಾಲ್ತುಳಿತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಭಕ್ತರು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, 6 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ರಥಯಾತ್ರೆಯ ರಥ ಎಳೆಯುವ ಆಚರಣೆ ಮುಗಿದು ಗುಂಡಿಚಾ ದೇವಸ್ಥಾನದ ಮುಂದೆ ಮೂರು ರಥಗಳನ್ನು

ನವದೆಹಲಿ: ಶಾಂಘೈ ಸಹಕಾರ ಸಂಸ್ಥೆ(SCO)ಯ ರಕ್ಷಣಾ ಸಚಿವರ ಸಭೆಯ ಫಲಿತಾಂಶದ ಡಾಕ್ಯುಮೆಂಟ್ ನಲ್ಲಿ ಭಯೋತ್ಪಾದನೆ ಉಲ್ಲೇಖಿಸಬೇಕು ಎಂದು ಭಾರತ ಬಯಸಿದೆ. ಆದರೆ ಅದು ಒಂದು ಸದಸ್ಯ ರಾಷ್ಟ್ರಕ್ಕೆ ಬೇಕಾಗಿಲ್ಲ ಎಂದು ಶುಕ್ರವಾರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಪಾಕಿಸ್ತಾನಕ್ಕೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಭಯೋತ್ಪಾದನೆಯ ವಿರುದ್ಧ ಹೋರಾಡುವುದು SCOನ ಮುಖ್ಯ

ಇತ್ತೀಚೆಗೆ ಚೀನಾದೊಂದಿಗಿನ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಿದ ನಂತರ, ಭಾರತದೊಂದಿಗೆ ಶೀಘ್ರದಲ್ಲೇ ಪ್ರಮುಖ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ. ಭಾರತ ಮತ್ತು ಅಮೆರಿಕ ನಡುವೆ ಕಳೆದ 4 ದಿನಗಳಿಂದ ವ್ಯಾಪಾರ ಒಪ್ಪಂದ ಸಂಬಂಧ ಸುದೀರ್ಘ ಮಾತುಕತೆ ನಡೆಯುತ್ತಿದೆ. ಈ ಮಾತುಕತೆಯ

ಕ್ವಿಂಗ್ಡಾವೊ: ಭಾರತ ಮತ್ತು ಚೀನಾ ದ್ವಿಪಕ್ಷೀಯ ಸಂಬಂಧಗಳಲ್ಲಿ ಸಕಾರಾತ್ಮಕ ಆವೇಗವನ್ನು ಕಾಯ್ದುಕೊಳ್ಳಬೇಕು ಮತ್ತು ಹೊಸ ಸಮಸ್ಯೆಯನ್ನು ತಪ್ಪಿಸಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚೀನಾದ ರಕ್ಷಣಾ ಮಂತ್ರಿ ಅಡ್ಮಿರಲ್ ಡಾನ್ ಜುನ್ ಅವರಿಗೆ ತಿಳಿಸಿದ್ದಾರೆ. ನಿನ್ನೆ ಗುರುವಾರ ಸಂಜೆ ಚೀನಾದ ಬಂದರು ನಗರದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ