ಬೆಂಗಳೂರು: ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಲು 500 ಎಕರೆ ಭೂಮಿ ನೀಡಲು ರಾಜ್ಯ ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಗುರುವಾರ ಹೇಳಿದರು. ಶಿವಕುಮಾರ್ ಅವರು, ಗುರುವಾರ ಬೆಂಗಳೂರಿನಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರೊಂದಿಗೆ
ಕೊಚ್ಚಿ: ಕುವೈತ್‌ನಲ್ಲಿ ಅಗ್ನಿ ಅವಘಡದಲ್ಲಿ ಬಲಿಯಾದ 45 ಭಾರತೀಯರ ಪಾರ್ಥಿವ ಶರೀರವನ್ನು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡು ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಿ ಇಂದು ಶುಕ್ರವಾರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟ ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನ ಇಂದು ಬೆಳಗ್ಗೆ
ರೇಣುಕಾ ಸ್ವಾಮಿ ಕೊಲೆಯ ಬಗ್ಗೆ ದಿನಕ್ಕೊಂದು ಹೊಸ ಹೊಸ ವಿಷಯಗಳು ಹೊರಬರುತ್ತಿವೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಈಗಾಗಲೇ ಹಲವಾರು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಹಲವು ಆರೋಪಿಗಳನ್ನು ಬಂಧಿಸಿದ್ದು ಮಹಜರು ಪ್ರಕ್ರಿಯೆ ಸಹ ಬಹುತೇಕ ಮುಗಿದೆ. ರೇಣುಕಾ ಸ್ವಾಮಿಯನ್ನು ಅಪಹರಣ ಮಾಡಲಾಗಿದ್ದ ಚಿತ್ರದುರ್ಗಕ್ಕೂ ತೆರಳಿ ಅಲ್ಲಿಯೂ ಮಹಜರು ಮಾಡಲಾಗಿದೆ. ಪ್ರಕರಣದ ಎ8
ಮಂಗಳೂರು, ಜೂನ್ 14: ಬೋಳಿಯಾರ್ನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಈ ಪ್ರಕರಣವನ್ನು ದೊಡ್ಡದು ಮಾಡುವವರೇ ದೇಶದ್ರೋಹಿಗಳು ಎಂದಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಬೋಳಿಯಾರ್ ಎಂಬುದು ಸಹೋದರತೆ ಇರುವ ಊರು. ಕೆಲವೇ ಕೆಲವು ಯುವಕರಿಂದ ಅಲ್ಲಿ ಕೆಟ್ಟ
ಅಮರಾವತಿ: ಪ್ರಧಾನಿ ನರೇಂದ್ರ ಮೋದಿ, ಹಿರಿಯ ಬಿಜೆಪಿ ನಾಯಕರು ಮತ್ತು ಕೇಂದ್ರ ಸಚಿವರು ಭಾಗವಹಿಸಿದ್ದ ಸಮಾರಂಭದಲ್ಲಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಅವಧಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಜನಸೇನಾ ಮುಖ್ಯಸ್ಥ ಮತ್ತು ನಟ ಪವನ್ ಕಲ್ಯಾಣ್, ನಾಯ್ಡು ಅವರ ಪುತ್ರ ನಾರಾ ಲೋಕೇಶ್
ಕುವೈತ್‌ನಲ್ಲಿ ಮಲಯಾಳಿ ಉದ್ಯಮಿಗೆ ಸೇರಿದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 43 ಮಂದಿ ಸಜೀವದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮೃತರಲ್ಲಿ ನಾಲ್ವರು ಭಾರತೀಯರಾಗಿದ್ದಾರೆ. ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಟ್ಟಡದಲ್ಲಿ ಅವಘಡ ಸಂಭವಿಸಿದೆ, ಈ ಕಟ್ಟಡದಲ್ಲಿರುವವರು ಹೆಚ್ಚಿನವರು ಮಲಯಾಳಿಗಳು ಎನ್ನಲಾಗಿದೆ. ಮೃತರಲ್ಲಿ ಇಬ್ಬರು ತಮಿಳುನಾಡು ಮತ್ತು ಉತ್ತರ ಭಾರತದವರು ಎನ್ನಲಾಗಿದೆ. ಕುವೈತ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಗ್ರಾಮವೊಂದರಲ್ಲಿ ಮಂಗಳವಾರ ತಡರಾತ್ರಿ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ. ಈ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಅರೆಸೇನಾಪಡೆಯ ಯೋಧರೊಬ್ಬರು ಕೂಡ ಸಾವನ್ನಪ್ಪಿದ್ದಾರೆ. ಜಮ್ಮುವಿನಲ್ಲಿ ರಾತ್ರೋರಾತ್ರಿ ಆರಂಭವಾದ 2 ಎನ್‌ಕೌಂಟರ್‌ಗಳು ಬೆಳಗಿನ ಜಾವದವರೆಗೂ ನಡೆದಿದೆ. ಅಲ್ಲಿ
ಚಿತ್ರದುರ್ಗ, ಜೂನ್ 12: ನಟ ದರ್ಶನ ಹಾಗೂ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ದರ್ಶನ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ಕೂಡ ಚುರುಕಾಗಿ ನಡೆದಿದೆ. ದರ್ಶನ ಹಾಗೂ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಕೊಲೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗುತ್ತಿದೆ.
ದಕ್ಷಿಣ ಕನ್ನಡ, ಜೂ.11: ಬಿಜೆಪಿ ವಿಜಯೋತ್ಸವ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ‘ಸಿಸಿಟಿವಿ ವಿಡಿಯೋ ಆಧಾರದಲ್ಲಿ 20 ಜನರನ್ನು ವಶಕ್ಕೆ ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಆರು ಮಂದಿಯನ್ನು ಬಂಧಿಸಿದ್ದೇವೆ. ಮೂರು ತಂಡದ ಮೂಲಕ ತನಿಖೆ
ಬೆಂಗಳೂರು,ಜೂ. 11:ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಇಂದು ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಈ ಸೂಚನೆ