ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದಾನೆಂದು ತಿಳಿದುಬಂದಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ ತನಿಖೆಯನ್ನು ಚುರುಕುಗೊಳಿಸಿದ್ದು, ಶವಗಳನ್ನು ಹೂಳಲಾಗಿದೆ ಎಂಬ ಸಾಕ್ಷಿ-ದೂರುದಾರನ ಹೇಳಿಕೆ ಅನ್ವಯ ದಕ್ಷಿಣ