ಉಡುಪಿ:ವಕೀಲರು ಹಾಗೂ ನ್ಯಾಯಾಧೀಶರು ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ಕಾನೂನು ವ್ಯವಸ್ಥೆಯಲ್ಲಿ ಆರೋಗ್ಯಕರ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ರಾಜ್ಯ ಕಾನೂನು ಸೇವಾ ಪಾಧಿಕಾರದ ಕಾರ್ಯಾಧ್ಯಕ್ಷ ಹಾಗೂ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾ|ಕಾಮೇಶ್ವರ ರಾವ್ ಅಭಿಪ್ರಾಯ ವ್ಯಕ್ತಪಡಿಸಿದರು. ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಎಮ್ಜಿಎಮ್
ಲಾಹೋರ್: ಹರಸಾಹಸ ಪಟ್ಟು ತನ್ನ ದೇಶದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಆಯೋಜಿಸಿಕೊಂಡಿದ್ದ ಪಾಕಿಸ್ತಾನಕ್ಕೆ ಒಂದರ ಮೆಲೊಂದು ತಲೆನೋವು ಆರಂಭವಾಗುತ್ತಿದ್ದು, ಇದೀಗ ಬಾಂಬ್ ಸ್ಫೋಟ ಪ್ರಕರಣ ಹೊಸ ತಲೆನೋವಿಗೆ ಕಾರಣವಾಗಿದೆ. ಹೌದು.. ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಪಾಕಿಸ್ತಾನ ಕ್ರಿಕೆಟ್ ತಂಡ ಹೊರಬಿದ್ದ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಉಗ್ರರು ದಾಳಿ ಮಾಡುವ ಎಚ್ಚರಿಕೆ ನೀಡಿದ್ದರು.
ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿದ್ದ ಗಡಿ ರಸ್ತೆ ಸಂಸ್ಥೆ(ಬಿಆರ್ಒ) 55 ಕಾರ್ಮಿಕರ ಪೈಕಿ ಈವರೆಗೂ 46 ಮಂದಿಯನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಭಾರತೀಯ ಸೇನಾಪಡೆ ಸೇರಿದಂತೆ ರಕ್ಷಣಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಿವೆ. ರಕ್ಷಣಾ ಕಾರ್ಯಾಚರಣೆಯ ಎರಡನೇ ದಿನವಾದ ಇಂದು (ಶನಿವಾರ) ರಕ್ಷಣಾ
ಹಂಪಿ: ವಿಜಯನಗರದ ಗತವೈಭವ ಸಾರವ 3 ದಿನಗಳ ಹಂಪಿ ಉತ್ಸವಕ್ಕೆ ಕನ್ನಡ ಮತ್ತು ಸಾಂಸ್ಕೃತಿಕ ಸಚಿವ ಶಿವರಾಜ್ ತಂಗಡಗಿ ಅವರ ಸಮ್ಮುಖದಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶುಕ್ರವಾರ ವಿಧ್ಯುಕ್ತ ಚಾಲನೆ ನೀಡಿದರು. ಹಂಪಿ ಉತ್ಸವದ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಬೇಕಿತ್ತು,ಆದರೆ ಮಂಡಿನೋವಿಂದ ಬಳಲುತ್ತಿರುವ
ಚಾಮರಾಜನಗರ: ಕಾರು ಮತ್ತು ಟಿಪ್ಪರ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿಯ ಮುಖ್ಯರಸ್ತೆಯಲ್ಲಿ ಇಂದು ಬೆಳಗ್ಗೆ ಟಿಪ್ಪರ್ ಹಾಗೂ ಕಾರು ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ
ಬೆಂಗಳೂರು (ಫೆಬ್ರವರಿ 27): ಬೆಂಗಳೂರಿನ ಅರಮನೆ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ಒಪ್ಪದ ಸುಪ್ರೀಂಕೋರ್ಟ್ ಟಿಡಿಆರ್ ಅನ್ನು ತನ್ನ ಸುಪರ್ದಿಗೆ ನೀಡುವಂತೆ ಹೇಳಿದೆ.10 ದಿನಗಳ ಒಳಗಾಗಿ ಸುಪ್ರೀಂಕೋರ್ಟ್ ಗೆ ಟಿಡಿಆರ್ ಪ್ರಮಾಣಪತ್ರವನ್ನು ಸರ್ಕಾರ ನೀಡಬೇಕಾಗಿದೆ. ಬಳ್ಳಾರಿ ರಸ್ತೆ ಹಾಗೂ ಜಯಮಹಲ್ ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.7 ಎಕರೆ
ಕಲಬುರಗಿ: ದೇಶದ ವಿವಿಧ ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್ನನ್ನು ಕಲಬುರಗಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೇಹಲಿ ಮೂಲದ ರಾಜೀವ ಸಿಂಗ್ ಆರೋರಾ ಎಂದು ಗುರುತಿಸಲಾಗಿದ್ದು, ಕಲಬುರಗಿ ಪೊಲೀಸರು ದೆಹಲಿಯ ರಾಮಪಾರ್ಕ್ ಅಪಾರ್ಟ್ಮೆಂಟ್ ದ್ವಾರಕ್ ಮೋಡ್ನಲ್ಲಿ ಬಂಧಿಸಿದ್ದಾರೆ. ರಾಜೀವ ಸಿಂಗ್ ಆರೋರಾ
ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಗೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಕೇಂದ್ರ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ. ಈ ಮೂಲಕ ಬಜೆಟ್ ಅಧಿವೇಶನದ ಉತ್ತರಾರ್ಧದಲ್ಲಿ ಮಸೂದೆಯನ್ನು ಸದನದಲ್ಲಿ ಮಂಡಿಸಿ, ಚರ್ಚಿಸಿ ಅನುಮೋದನೆ ಪಡೆಯಲು ಹಾದಿ ಸುಗಮಗೊಂಡಂತಾಗಿದೆ. ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಶಿಫಾರಸ್ಸು ಮಾಡಿರುವ ಬಹುತೇಕ ಎಲ್ಲ
ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್ಡಿ ಕುಮಾರಸ್ವಾಮಿ ಭಾಗಿಯಾಗಿದ್ದಾರೆ ಎನ್ನಲಾದ ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆ ನಡೆಸುತ್ತಿರುವ ಲೋಕಾಯುಕ್ತ ವಿಶೇಷ ತನಿಖಾ ತಂಡ (ಎಸ್ಐಟಿ) ಪ್ರಾಸಿಕ್ಯೂಷನ್ ಅನುಮತಿಗೆ ಮತ್ತೊಮ್ಮೆ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಕಳೆದ ಏಳು ತಿಂಗಳ ಹಿಂದೆ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಈ ವೇಳೆ
ಸುಡಾನ್, ಫೆಬ್ರವರಿ 27: ಸುಡಾನ್ ರಾಜಧಾನಿ ಖಾರ್ಟೌಮ್ ಹೊರವಲಯದಲ್ಲಿ ಮಿಲಿಟರಿ ವಿಮಾನವೊಂದು ಪತನಗೊಂಡಿದೆ. ಈ ವಿಮಾನ ಅಪಘಾತದಲ್ಲಿ 46 ಜನರು ಸಾವನ್ನಪ್ಪಿದ್ದಾರೆ. ವಿಮಾನ ನಿಲ್ದಾಣದಿಂದ ಹಾರುವಾಗ ವಿಮಾನ ಪತನಗೊಂಡು, ಸೇನಾ ಸಿಬ್ಬಂದಿ ಮತ್ತು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಅಪಘಾತದಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ