ಶಿವಮೊಗ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ವಿನೋಬನಗರದಲ್ಲಿ ನಡೆದಿದೆ. ಚಂದ್ರಶೇಖರನ್ (45) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಇವರು ಬೆಂಗಳೂರಿನ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೂ ಮುನ್ನಾ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಮೂವರು ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿದ್ದು, ಬಹುಕೋಟಿ ಭ್ರಷ್ಟಾಚಾರ ರಹಸ್ಯವನ್ನೂ
ಗಾಜಾ, ಮೇ 27 : ಇಸ್ರೇಲ್ ಗಾಜಾದ ನಿರಾಶ್ರಿತರ ಮೇಲೆ ವೈಮಾನಿಕ ದಾಳಿ ನಡೆಸಿದೆ. ಈ ದಾಳಿಯಲ್ಲಿ ಮಕ್ಕಳು ಸೇರಿ 35 ಜನ ಮೃತಪಟ್ಟಿದ್ದಾರೆ ಎಂದು ಪ್ಯಾಲೆಸ್ತೀನಿಯನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಹಮಾಸ್ ರಾಕೆಟ್ ದಾಳಿ ನಡೆಸಿದ ಬಳಿಕ ಇಸ್ರೇಲ್ ರಾಫಾ ಮೇಲೆ ದೊಡ್ಡ ವೈಮಾನಿಕ ದಾಳಿ ನಡೆಸಿದೆ. ಇಸ್ರೇಲಿ
ಕೋಲ್ಕತ್ತಾ: ರೆಮಲ್ ಚಂಡಮಾರುತ ನಿನ್ನೆ ಭಾನುವಾರ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಕರಾವಳಿಯ ನಡುವೆ ಅಪ್ಪಳಿಸಿದ್ದು ತೀವ್ರ ಬಿರುಗಾಳಿಯಿಂದ ಭೂಕುಸಿತ ಉಂಟಾಗಿದೆ, ಗಾಳಿಯ ವೇಗ ಗಂಟೆಗೆ 110-135 ಕಿಮೀ ವೇಗ ಪಡೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ರೆಮಲ್ ಚಂಡಮಾರುತದ ಪರಿಣಾಮ ಪಶ್ಚಿಮ ಬಂಗಾಳದ ದಕ್ಷಿಣ ಮತ್ತು ಉತ್ತರ
ಪುಣೆ: ಪುಣೆಯಲ್ಲಿ ನಡೆದ ಪೋರ್ಶೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಆರೋಪಿ ಬಾಲಕನ ರಕ್ತದ ಮಾದರಿಯನ್ನು ತಿರುಚಿ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಇಲ್ಲಿನ ಸಸೂನ್ ಜನರಲ್ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಬಂಧಿತರಲ್ಲಿ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ
ನವದೆಹಲಿ, ಮೇ 26: ಶನಿವಾರ ತಡರಾತ್ರಿ ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ ಏಳು ನವಜಾತ ಶಿಶುಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿನ ಬೇಬಿ ಕೇರ್ ಸೆಂಟರ್‌ನಲ್ಲಿ ರಾತ್ರಿ 11.32 ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು
ಹಾಸನ, ಮೇ 26: ಬೆಳ್ಳಂಬೆಳಗ್ಗೆ ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿ NH 75ನಲ್ಲಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗು ಸೇರಿದಂತೆ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಮತ್ತು ಕಾರು ಚಾಲಕ
ಮೈಸೂರು, (ಮೇ 26): ರೈತ ಮಹಿಳೆ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಅಲ್ಲಿನ ಮೂರ್ಬಾಂದ್ ಬೆಟ್ಟದ ಸಮೀಪದಲ್ಲಿ ನಡೆದಿದೆ. ಹುಲಿ ದಾಳಿಯಿಂದ ಮಹಿಳೆ ಸಾವನ್ನಪ್ಪಿದ್ದಾಳೆ. ಚಿಕ್ಕಿ (48) ಹುಲಿ ದಾಳಿಗೆ ಬಲಿಯಾದ ಮಹಿಳೆ. ಎಚ್.ಡಿ.ಕೋಟೆ ತಾಲ್ಲೂಕು ಎನ್.ಬೇಗೂರು ಸಮೀಪದ ಮಾಳದ ಹಾಡಿ ನಿವಾಸಿ. ಮೇಕೆ ಮೇಯಿಸುತ್ತಿದ್ದಾಗ ಹಠಾತ್
ಉಡುಪಿ, ಮೇ 26: ಗ್ಯಾಂಗ್ವಾರ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳು ಇಂದು (ಮೇ 26) ಕಾಪು ಪೊಲೀಸರಿಗೆ ಶರಣಾಗಿದ್ದಾರೆ. ಮೂವರು ಅರೋಪಿಗಳನ್ನು ಕಾಪು ಪೋಲೀಸರು ಉಡುಪಿ ನಗರ ಪೋಲಿಸರಿಗೆ ಒಪ್ಪಿಸಿದ್ದಾರೆ. ಗರುಡ ಗ್ಯಾಂಗ್ನ ಮಜೀದ್, ಅಲ್ಫಾಜ್, ಶರೀಫ್ ಶರಣಾದವರು. ಗ್ಯಾಂಗ್ ವಾರ್ ಯಾಕೆ? ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ಮೇ 18ರ ಮುಂಜಾನೆ
ಮಂಗಳೂರು: ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಅಲ್ಲ ಗೆಳೆಯಲು ಸಾಧ್ಯವೇ?ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ಅನ್ನು ದಾಖಲಿಸಲಾಗಿದ್ದು, ಅದರಂತೆ ಕ್ರಮ
ದಾವಣಗೆರೆ: ಜಿಲ್ಲೆಯ ಚನ್ನಗಿರಿ ಪ್ರಟ್ಟಣದಲ್ಲಿ ನಿನ್ನೆ ಲಾಕಪ್ ಡೆತ್ (lock up death) ಸಂಭವಿಸಿದೆ ಎಂಬ ಆರೋಪ ಕೇಳಿಬರುತ್ತಿದೆ. ನಿನ್ನೆ ವ್ಯಕ್ತಿಯೊಬ್ಬನನ್ನು ವಿಚಾರಣೆಗೆಂದು ಪೊಲೀಸರು ಇಲ್ಲಿ ಕಾಣುತ್ತಿರುವ ಪೊಲೀಸ್ ಠಾಣೆಗೆ ಕರೆತಂದಾಗ ಅವನು ಕುಸಿದುಬಿದ್ದು ಸಾವನ್ನಪ್ಪಿದ್ದಾನೆ. ಪೊಲೀಸರು ಬಂಧಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಕಾರಣ ಅವನು ಸತ್ತಿದ್ದಾನೆ ಎಂದು