ಛತ್ತೀಸ್ಗಢ: ಛತ್ತೀಸ್ಗಢದ ನಾರಾಯಣಪುರ ಪ್ರದೇಶದ ಅಬುಜ್ಮದ್ನಲ್ಲಿ ಪೊಲೀಸರು ಮತ್ತು ನಕ್ಸಲೀಯರ ನಡುವೆ ನಡೆದ ಎನ್ಕೌಂಟರ್ನಲ್ಲಿ ಎಂಟು ನಕ್ಸಲೀಯರು ಹತರಾಗಿದ್ದು ಓರ್ವ ಸೇನಾ ಯೋಧ ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ. ನಾರಾಯಣಪುರ ಜಿಲ್ಲೆಯ ಮಾದ್ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಎನ್ಕೌಂಟರ್ ನಡೆಯುತ್ತಿದೆ. ಅದರಂತೆ ಇಂದು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಇಂದು ಗೋರಖ್ ಪುರದಲ್ಲಿ ಭೇಟಿಯಾಗಲಿದ್ದಾರೆ. ಲೋಕಸಭಾ ಚುನಾವಣೆ-2024 ರ ಫಲಿತಾಂಶದಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಅತ್ಯಂತ ಕಡಿಮೆ ಸ್ಥಾನಗಳನ್ನು ಪಡೆದಿತ್ತು. ಪರಿಣಾಮ ಕೇಂದ್ರದಲ್ಲಿ ಸರ್ಕಾರ ರಚನೆಗೆ ಅಗತ್ಯವಾದ ಬಹುಮತವನ್ನು ಏಕಾಂಗಿಯಾಗಿ ಪಡೆಯಲು ಬಿಜೆಪಿಗೆ ಸಾಧ್ಯವಾಗಿರಲಿಲ್ಲ. ಫಲಿತಾಂಶ
ರುದ್ರಪ್ರಯಾಗ: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಬದರಿನಾಥ್ ಹೆದ್ದಾರಿಯಲ್ಲಿ ಶನಿವಾರ ಟೆಂಪೋ ಟ್ರಾವೆಲರೊಂದು ಆಳವಾದ ಕಮರಿಗೆ ಬಿದ್ದ ಪರಿಣಾಮ ಹನ್ನೆರಡು ಜನ ಸಾವನ್ನಪ್ಪಿದ್ದಾರೆ ಮತ್ತು ಹತ್ತು ಮಂದಿ ಗಾಯಗೊಂಡಿದ್ದಾರೆ. ಟೆಂಪೋ ಟ್ರಾವೆಲರ್ ಜನಪ್ರಿಯ ಪ್ರವಾಸಿ ತಾಣವಾದ ಚೋಪ್ಟಾಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಎಸ್ಡಿಆರ್ಎಫ್ ಮತ್ತು ಪೊಲೀಸ್ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ
ಬೆಂಗಳೂರು, ಜೂ. 15;ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಳ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂ. ಹಗರಣದ ವಿರುದ್ಧ ಜೂ. 28ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ ಮಾಡಿದೆ. ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಪ್ರತಿಭಟನೆ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ.
ಬೆಂಗಳೂರು, ಜೂನ್ 14: ತಮ್ಮ ವಿರುದ್ಧದ ಪೊಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. 17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಉತ್ತರಿಸಿದ್ದಾರೆ. ಅವರಿಗೆ ವಯಸ್ಸಾಗಿದ್ದು ಸಹಜವಾಗಿಯೇ ಅನಾರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಶುಕ್ರವಾರ ಆದೇಶ
ನವದೆಹಲಿ (ಜೂ.14): ಇತ್ತೀಚೆಗೆ ಮುಗಿದ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ನೀರಸ ಪ್ರದರ್ಶನಕ್ಕೆ ಬಿಜೆಪಿ ನಾಯಕರ ದುರಹಂಕಾರವೇ ಕಾರಣ ಎಂದು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕರಾದ ಆರೆಸ್ಸೆಸ್ನ ಹಿರಿಯ ನಾಯಕ ಇಂದ್ರೇಶ್ ಕುಮಾರ್ ಹೇಳಿದ್ದಾರೆ. ಜೈಪುರ ಸಮೀಪದ ಕನೋಟಾದಲ್ಲಿ ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಇಂದ್ರೇಶ್ ಕುಮಾರ್, "ಶ್ರೀರಾಮನ ಭಕ್ತಿ ಮಾಡಿದವರು
ಬೆಂಗಳೂರು :ಜೂ.14): ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಸ್ಟಡಿಯಲ್ಲಿರುವ ನಟ ದರ್ಶನ್ಗೆ ಸ್ಪೆಷಲ್ ಟ್ರೀಟ್ಮೆಂಟ್ ನೀಡುತ್ತಿರುವ ಬಗ್ಗೆ ಸಿಎಂ ಸಿದ್ಧರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದರ್ಶನ್ಗೆ ವಿಶೇಷ ಟ್ರೀಟ್ಮೆಂಟ್ ನೀಡುತ್ತಿರುವ ಬಗ್ಗೆ ಮಾಧ್ಯಮಗಳು ನಿರಂತರ ವರದಿ ಪ್ರಸಾರ ಮಾಡಿದ್ದವು. ಇಡೀ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಲಾಗಿದ್ದರೆ,
ಬೆಂಗಳೂರು: ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಲು 500 ಎಕರೆ ಭೂಮಿ ನೀಡಲು ರಾಜ್ಯ ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಗುರುವಾರ ಹೇಳಿದರು. ಶಿವಕುಮಾರ್ ಅವರು, ಗುರುವಾರ ಬೆಂಗಳೂರಿನಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರೊಂದಿಗೆ
ಕೊಚ್ಚಿ: ಕುವೈತ್ನಲ್ಲಿ ಅಗ್ನಿ ಅವಘಡದಲ್ಲಿ ಬಲಿಯಾದ 45 ಭಾರತೀಯರ ಪಾರ್ಥಿವ ಶರೀರವನ್ನು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡು ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಿ ಇಂದು ಶುಕ್ರವಾರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಕುವೈತ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟ ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನ ಇಂದು ಬೆಳಗ್ಗೆ
ರೇಣುಕಾ ಸ್ವಾಮಿ ಕೊಲೆಯ ಬಗ್ಗೆ ದಿನಕ್ಕೊಂದು ಹೊಸ ಹೊಸ ವಿಷಯಗಳು ಹೊರಬರುತ್ತಿವೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಈಗಾಗಲೇ ಹಲವಾರು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಹಲವು ಆರೋಪಿಗಳನ್ನು ಬಂಧಿಸಿದ್ದು ಮಹಜರು ಪ್ರಕ್ರಿಯೆ ಸಹ ಬಹುತೇಕ ಮುಗಿದೆ. ರೇಣುಕಾ ಸ್ವಾಮಿಯನ್ನು ಅಪಹರಣ ಮಾಡಲಾಗಿದ್ದ ಚಿತ್ರದುರ್ಗಕ್ಕೂ ತೆರಳಿ ಅಲ್ಲಿಯೂ ಮಹಜರು ಮಾಡಲಾಗಿದೆ. ಪ್ರಕರಣದ ಎ8