ಉಡುಪಿ:ಫೆ.25ರಿ೦ದ ಮಾ.4ರವರೆಗೆ ಉಡುಪಿ ಮಹತೋಭಾರ ಶ್ರೀಅನ೦ತೇಶ್ವರ ಮತ್ತು ಶ್ರೀಚ೦ದ್ರಮೌಳೀಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ ಹಾಗೂ ಶಿವರಾತ್ರಿ ಮಹೋತ್ಸವದ ಸ೦ಭ್ರಮ. ಮ೦ಗಳವಾರ ಸಾಯ೦ಕಾಲ ವಾರ್ಷಿಕ ರಥೋತ್ಸವ ಹಾಗೂ ಶಿವರಾತ್ರಿ ಮಹೋತ್ಸವಕ್ಕೆ ಶ್ರೀಅನ೦ತೇಶ್ವರ ದೇವರ ಸನ್ನಿಧಿಯಲ್ಲಿ ಪರ್ಯಾಯ ಶ್ರೀಕೃಷ್ಣಮಠದ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರು ಹಾಗೂ ದೇವಸ್ಥಾನದ ಆಡಳಿಯ ಮೊಕ್ತೇಸರರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು,
ತಿರುಚ್ಚಿ: ಮಹಾಶಿವರಾತ್ರಿ ದಿನವಾದ ಇಂದು ಮುಂಜಾನೆ ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತ್ತಲೈ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ತಂಜಾವೂರು ಜಿಲ್ಲೆಯ ಒರತನಾಡು ಸಮೀಪದ ಒಕ್ಕನಾಡು ಕೀಲಯೂರಿನ ದೇವಸ್ಥಾನವೊಂದಕ್ಕೆ ಚಾಲಕನೊಂದಿಗೆ ಒಂದೇ ಕುಟುಂಬದ ನಾಲ್ವರು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ತಿರುಚ್ಚಿ-ಕರೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ
ನವದೆಹಲಿ: ಬಹುಕೋಟಿ ರೂಪಾಯಿ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬೆಂಗಳೂರು ಸೇರಿ ದೇಶದ 60 ಕಡೆಗಳಲ್ಲಿ ನಿನ್ನೆ ಮಂಗಳವಾರ ಸಾಯಂಕಾಲ ಶೋಧ ನಡೆಸಿದೆ. ಗೇನ್ ಬಿಟ್ ಕಾಯಿನ್ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿ ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್‌ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ
ನವದೆಹಲಿ: ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಯುವ ಜನಾಂಗದ ವಿದ್ಯಾರ್ಥಿ ವೇತನವನ್ನು ಕೇಂದ್ರ ಸರ್ಕಾರ ಕಿತ್ತುಕೊಂಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ “ಸಬ್ಕಾ ಸಾಥ್, ಸಬ್ಕಾ ವಿಕಾಸ್” ಘೋಷಣೆಯು ದುರ್ಬಲ ವರ್ಗಗಳ ಆಶೋತ್ತರಗಳನ್ನು ಅಣಕಿಸುತ್ತದೆ ಎಂದು ಹೇಳಿದ್ದಾರೆ. ದೇಶದ ದುರ್ಬಲ ವರ್ಗಗಳ
ಉಡುಪಿ:ಇತಿಹಾಸ ಪ್ರಸಿದ್ಧವಾದ ಉಡುಪಿಯ ಶ್ರೀ ಅನ೦ತೇಶ್ವರ ಸನ್ನಿಧಿಯಲ್ಲಿ ದೇವಸ್ಥಾನದ ವಾರ್ಷಿಕ ರಥೋತ್ಸವ ಹಾಗೂ ಶಿವರಾತ್ರಿ ಮಹೋತ್ಸವ ಕಾರ್ಯಕ್ರಮವು ಫೆ.25ರಿ೦ದ ಮಾ.4ರವರೆಗೆ ಜರಗಲಿದೆ. ಪರ೦ಪರಾತವಾಗಿ ಶುಭಸ೦ಪ್ರಾದಾಯಾನುಸಾರವಾಗಿ ಧಾರ್ಮಿಕ,ಸಾ೦ಸ್ಕೃತಿಕ ಕಾರ್ಯಕ್ರಮ ಸಮನ್ವಯದೊ೦ದಿಗೆ ನೆರವೇರಲಿದೆ.ಈ ಎ೦ಟು ದಿನಗಳ ಕಾಲ ನಡೆಯುವ ಶ್ರೀ ಸ್ವಾಮಿಯ ಸ೦ಭ್ರಮದ ಕಾರ್ಯಕ್ರಮಗಳಲ್ಲಿ ತಾವೆಲ್ಲರೂ ಸಹಭಾಗಿಗಳಾಗಿ, ಶ್ರೀದೇವರ ಸಿರಿಮುಡಿ ,ಗ೦ಧ ಪ್ರಸಾದವನ್ನು
ಲಂಡನ್: ಕ್ರೈಸ್ತ ಮತದ ಸರ್ವೋಚ್ಛ ಧಾರ್ಮಿಕ ಗುರು ಪೋಪ್ ಫ್ರಾನ್ಸಿಸ್ ಅವರ ಕಿಡ್ನಿ ವೈಫಲ್ಯವಾಗಿದ್ದು, ಅವರು ನ್ಯುಮೋನಿಯಾ ಮತ್ತು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ವ್ಯಾಟಿಕನ್ ಮಾಹಿತಿ ನೀಡಿದೆ. ಪೋಪ್ ಫ್ರಾನ್ಸಿಸ್ ಅವರ ಪರೀಕ್ಷೆಗಳು 'ಆರಂಭಿಕ ಮೂತ್ರಪಿಂಡ ವೈಫಲ್ಯ'ವನ್ನು ತೋರಿಸುತ್ತಿದ್ದು, ಆದಾಗ್ಯೂ ಅವರ ಆರೋಗ್ಯದ ಕುರಿತು ತೀವ್ರ ಎಚ್ಚರಿಕೆ ವಹಿಸಲಾಗಿದೆ. 88
ಉಡುಪಿ: ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಎಮ್.ಜಿ.ಎಮ್. ಕಾಲೇಜಿನ ಎ.ಎಲ್.ಎನ್. ರಾವ್ ಕ್ರೀಡಾಂಗಣದಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್, ವಾಲಿಬಾಲ್ (ಪುರುಷರಿಗೆ), ತ್ರೋಬಾಲ್ (ಮಹಿಳೆಯರಿಗೆ) ಮತ್ತು ಶಟಲ್ ಬ್ಯಾಡ್ಮಿಂಟನ್ (ಪುರುಷ-ಮಹಿಳೆಯರಿಗೆ)
ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು
ಬೆಳಗಾವಿ: ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಸಂಭವಿಸಿದ ಅಪಘಾತದಲ್ಲಿ ಗೋಕಾಕ್ ನಗರದ ಆರು ಮಂದಿ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ (50), ಸುನೀಲ್ ಶೇಡಶ್ಯಾಳೆ (45), ಬಸವರಾಜ್ ಕುರ್ತಿ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಕಟ್ಟಿ (27),
ಬೆಳಗಾವಿ: ಫೆ.23, ಕನ್ನಡ ಮಾತನಾಡಿ ಎಂದಿದ್ದಕ್ಕೆ ಮರಾಠಿಗರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಂಡಕ್ಟರ್ ಮೇಲೆ ಮರಾಠಿಗರು ಸಹ ಕೆಲ ಆರೋಪಗಳನ್ನು ಮಾಡಿದ್ದು, ಈ ಸಂಬಂಧ ಕಂಡಕ್ಟರ್ ವಿರುದ್ಧ ಫೋಕ್ಸೊ ಪ್ರಕರಣ ದಾಖಲಾಗಿದೆ. ಇದರಿಂದ ಕನ್ನಡಿಗರು ಸಿಡಿದೆದಿದ್ದಾರೆ. ಇದರಿಂದ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ