ಕೊಡಗು: ಇಲ್ಲಿನ ಶ್ರೀಮಂಗಲ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಸೋಮವಾರ ಕಾಡಾನೆ ದಾಳಿಗೆ 50 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಬೀರುಗ ಎಂಬಲ್ಲಿ ಬೆಳಗ್ಗೆ 6.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. 'ಮಡಿಕೇರಿ ವನ್ಯಜೀವಿ ವಿಭಾಗದ ಶ್ರೀಮಂಗಲ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಬಗ್ಗೆ
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಭಾನುವಾರ ಪ್ರತಿಭಟನೆ ನಡೆಸಿದ್ದು, ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಬೆಳಗಾವಿಯ ಆದರ್ಶ ನಗರದಲ್ಲಿರುವ ಸಂಜಯ್ ಪಾಟೀಲ್ ನಿವಾಸದ ಎದುರು ಕೆಪಿಸಿಸಿ ಸದಸ್ಯೆ ಆಯಿಷಾ ಸನದಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಬೆಂಗಳೂರು: ಗ್ಯಾರೆಂಟಿ ಯೋಜನೆಯಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಪ್ರಚಾರ ಸಭೆಯಲ್ಲಿ ಹೇಳಿದ್ದರು. ಇದು ವಿವಾದಕ್ಕೆ ಕಾರಣವಾಗಿದ್ದು, ಪ್ರತಿ ಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದೆ. ಹೆಚ್ಡಿ ಕುಮಾರಸ್ವಾಮಿ ಅವರ ಈ ಹೇಳಿಕೆಯಿಂದ ಎನ್ಡಿಎ ಮೈತ್ರಿಕೂಟಕ್ಕೆ ಹೊಡೆತ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಡ್ಯಾಮೇಜ್ ಕಂಟ್ರೋಲ್ಗೆ
ನವದೆಹಲಿ: ಲೋಕಸಭೆ ಚುನಾವಣೆ 2024ರ ಬಿರುಸಿನ ಪ್ರಚಾರ, ಬಿಡುವಿರದ ಸಮಯ ಮಧ್ಯೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗೇಮಿಂಗ್ ಉದ್ಯಮಕ್ಕೆ ಸಂಬಂಧಿಸಿದ ಹಲವಾರು ಸಮಸ್ಯೆಗಳ ಕುರಿತು ಭಾರತದ ಪ್ರಮುಖ ಗೇಮರ್ ಗಳ ಜೊತೆ ಸಂವಾದ ನಡೆಸಿದರು. ಇ-ಗೇಮಿಂಗ್ ಉದ್ಯಮದ ಮುಂದಿರುವ ಸವಾಲುಗಳು ಮತ್ತು ಭವಿಷ್ಯದ ಬಗ್ಗೆ ನಡೆದ ಮುಕ್ತ ಸಂವಾದದಲ್ಲಿ, ಪ್ರಧಾನ
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ ವಶಕ್ಕೆ ನೀಡಿ ಆದೇಶಿಸಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಳಿಸಿ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ
ವಿಜಯಪುರ: ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ವಿಜಯಪುರ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರ್ಜುನ ಕುಶಾಲಸಿಂಗ್ ರಜಪೂತ (32), ರವಿನಾಥ ಪತ್ತಾರ (52), ಪುಷ್ಪಾ ರವಿನಾಥ ಪತ್ತಾರ (40), ಮೇಘರಾಜ ರಜಪೂತ (12) ಮೃತ ದುರ್ದೈವಿಗಳು. ಕಾರಿನಲ್ಲಿ ನಾಲ್ವರು ವಿಜಯಪುರದಿಂದ ಜಮಖಂಡಿಯಲ್ಲಿರುವ ದೇವಸ್ಥಾನಕ್ಕೆ
ಶಿವಮೊಗ್ಗ, ಏಪ್ರಿಲ್ 12: ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಇಂದು (ಏ.12) ನಾಮಪತ್ರ ಸಲ್ಲಿಸಿದರು. ಬೃಹತ ಮೆರವಣಿಗೆ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಉಮೇದುವಾರಿಕೆ ಸಲ್ಲಿಸಿದರು. ಪುತ್ರ ಕಾಂತೇಶ್ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್
ಬೆಂಗಳೂರು: ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram cafe) ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿದಳು ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ಬಂಧಿಸಲಾಗಿದೆ ಎಂದು ಎನ್ಎಐ
ಉಧಂಪುರ: ಮುಂಬರುವ ಲೋಕಸಭೆ ಚುನಾವಣೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ, ದಾಳಿ, ಕಲ್ಲು ತೂರಾಟ ಮತ್ತು ಗಡಿಯಾಚೆಗಿನ ಗುಂಡಿನ ದಾಳಿಯ ಭಯವಿಲ್ಲದೆ ನಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. ಇಂದು ಉಧಂಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದ ಜನರ ದೀರ್ಘಾವಧಿಯ ನೋವುಗಳನ್ನು ಕೊನೆಗೊಳಿಸುವ ಭರವಸೆಯನ್ನು
ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಿನಲ್ಲಿ ರಾಜಕೀಯ ನಾಯಕರ ಪ್ರಚಾರದ ಜೊತೆಗೆ ಪಕ್ಷಾಂತರ ಕೂಡ ಜೋರಾಗಿದೆ. ಕರ್ನಾಟಕ ರಾಜಕೀಯದಲ್ಲಿ ಪ್ರಭಾವಿ ನಾಯಕ ಡಿಸಿಎಂ ಡಿ ಕೆ ಶಿವಕುಮಾರ್ ರಾತ್ರೋರಾತ್ರಿ ಜೆಡಿಎಸ್ ನಾಯಕರಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಭಾಗ್ಯಗಳ ಘೋಷಣೆಯಿಂದ ಭರ್ಜರಿ ಗೆಲುವು ಕಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್