ಲಖನೌ: ಪಹಲ್ಗಾಮ್ ಉಗ್ರ ದಾಳಿಯ ನಂತರ ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ಪ್ರಚೋದನಕಾರಿ ಪೋಸ್ಟ್‌ಗಳು ದೇಶದ ಏಕತೆಗೆ ಹಾನಿ ಉಂಟುಮಾಡಬಹುದು ಎಂಬ ದೂರಿನ ಆಧಾರದ ಮೇರೆಗೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ಕಳೆದ ವಾರ ಜಮ್ಮು ಮತ್ತು
(ಬಿಎಸ್‌ಎಫ್ ಯೋಧರೊಬ್ಬರು ತಮ್ಮ ದೇಶಕ್ಕೆ ಗಡಿ ದಾಟಲು ಆಗಮಿಸುತ್ತಿರುವ ಪಾಕಿಸ್ತಾನಿ ಪ್ರಜೆಗಳ ದಾಖಲೆಗಳನ್ನು ಪರಿಶೀಲಿಸುತ್ತಿರುವುದು) ಜೈಪುರ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ ಸಂಬಂಧ ಮತ್ತಷ್ಟು ಹಳಸಿದ್ದು, ಉಭಯ ರಾಷ್ಟ್ರಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯು ಅಸಂಖ್ಯಾತ ಸಾಮಾನ್ಯ ಜನರ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಉಗ್ರರ ದಾಳಿ ಬಳಿಕ ಕಠಿಣ ನಿಲುವು ತಳೆದ
ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿ ಘಟನೆ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಬಂಧ ಮತ್ತಷ್ಟು ಹಳಸಿದ್ದು, ಇದರ ನಡುವಲ್ಲೇ ಭಾರತದ ವಿರುದ್ಧವಾಗಿ ದ್ವೇಷ ಹಾಗೂ ನಕಲಿ ಸುದ್ದಿ ಪ್ರಸಾರ ಮಾಡುತ್ತಿರುವ ಪಾಕಿಸ್ತಾನದ 17 ಯೂಟ್ಯೂಬ್ ಚಾನೆಲ್ ಗಳನ್ನು ಕೇದ್ರ ಸರ್ಕಾರ ಬ್ಲಾಕ್ (ನಿಷೇಧ) ಮಾಡಿದೆ ಎಂದು ತಿಳಿದುಬಂದಿದೆ. ಕೋಮು
ಶ್ರೀನಗರ, ಏಪ್ರಿಲ್ 28: ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್(Pahalgam)ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರವಾಸಿಗರು ಆ ಪ್ರದೇಶಕ್ಕೆ ಕುದುರೆ ಮೂಲಕ ಬಂದಿದ್ದಾರೆ. ಹಾಗಾದರೆ ಈ ಉಗ್ರರು ಹೇಗೆ ಬಂದ್ರು ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತದೆ. ಪಹಲ್ಗಾಮ್ಗೆ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪ್ರಗತಿ ಶತ್ರುಗಳ ಕಣ್ಣು ಕೆಂಪಗಾಗುವಂತೆ ಮಾಡಿದ್ದು, ಇದರಿಂದಾಗಿ ನಾಶಪಡಿಸಲು ಹತಾಶ ಪ್ರಯತ್ನ ನಡೆಸುತ್ತಿದ್ದಾರೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಾನುವಾರ ಹೇಳಿದರು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭೀಕರ ದಾಳಿಯನ್ನು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಉಲ್ಲೇಖಿಸಿದ ಪ್ರಧಾನಿ ಮೋದಿಯವರು, ಉಗ್ರರ
ಶ್ರೀನಗರ:ಏ.27 .ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ತನಿಖೆಯ ಹೊಣೆಯನ್ನು ಕೇಂದ್ರ ಗೃಹಸಚಿವಾಲಯ ಎನ್‌ಐಎ ಹೆಗಲಿಗೆ ವಹಿಸಿದೆ.ಈ ದಾಳಿಯ ತನಿಖೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸಿದ್ದು, ಪ್ರಕರಣ ದಾಖಲಿಸಿಕೊಂಡು ಅಧಿಕೃತವಾಗಿ ತನಿಖೆ ಶುರುಮಾಡಲಿದೆ ಎಂದು ವರದಿಗಳು ತಿಳಿಸಿವೆ. ಮೂಲಗಳ ಪ್ರಕಾರ, ತನಿಖೆಗೆ ನಿಯೋಜಿಲ್ಪಟ್ಟ ಎನ್‌ಐಎ ತಂಡ
ಇಸ್ಲಾಮಾಬಾದ್:ಏಪ್ರಿಲ್ 27: ಝೇಲಂ ನದಿಯ ನೀರಿನ ಮಟ್ಟ ಹಠಾತ್ತನೆ ಏರಿಕೆಯಾದ ನಂತರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಪ್ರವಾಹ ಎಚ್ಚರಿಕೆ ನೀಡಲಾಗಿದೆ. ಹಟ್ಟಿಯನ್ ಬಾಲಾ ಪ್ರದೇಶದಲ್ಲಿ ಆಡಳಿತವು ನೀರಿನ ತುರ್ತು ಪರಿಸ್ಥಿತಿ ಘೋಷಿಸಿದ್ದು, ಸ್ಥಳೀಯ ನಾಗರಿಕರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ. ಸ್ಥಳೀಯ ನಿವಾಸಿಗಳ ಪ್ರಕಾರ, ಝೇಲಂ
ನವದೆಹಲಿ, ಏಪ್ರಿಲ್ 24: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನಕ್ಕೆ ತಿರುಗೇಟು ನೀಡಿತ್ತು. ಸಿಂಧೂ ಜಲ ಒಪ್ಪಂದ ರದ್ದು, ಭಾರತ-ಪಾಕ್ ಗಡಿ ಬಂದ್, ಪಾಕಿಸ್ತಾನೀಯರಿಗೆ ವೀಸಾ ರದ್ದು ಸೇರಿದಂತೆ ಹಲವು ಕ್ರಮಗಳನ್ನು ಭಾರತ ತೆಗೆದುಕೊಂಡಿತ್ತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ಇಂದು ಕೆಲವು ನಿರ್ಣಯಗಳನ್ನು
ಬಿಹಾರ: 'ಇಂದು ಬಿಹಾರದ ಈ ಮಣ್ಣಿನಲ್ಲಿ ನಿಂತು ಇಡೀ ಜಗತ್ತಿಗೆ ಹೇಳುತ್ತಿದ್ದೇನೆ, ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಪತ್ತೆಹಚ್ಚಿ, ಗುರುತಿಸಿ ಶಿಕ್ಷಿಸಲಿದೆ. ಈ ಭೂಮಿಯ ತುದಿಯವರೆಗೆ ಹಿಂಬಾಲಿಸುತ್ತೇವೆ. ಭಾರತದ ಚೈತನ್ಯವು ಭಯೋತ್ಪಾದನೆಯಿಂದ ಎಂದಿಗೂ ಮುರಿಯುವುದಿಲ್ಲ. ಭಯೋತ್ಪಾದನೆಗೆ ಶಿಕ್ಷೆಯಾಗದೆ ಉಳಿಯುವುದಿಲ್ಲ. ಈ ದೇಶದ ಜನರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಲು
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉದ್ಧಂಪುರ ಜಿಲ್ಲೆಯ ದುಡು-ಬಸಂತ್‌ಗರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಉಗ್ರರೊಂದಿಗೆ ನಡೆಸುತ್ತಿರುವ ಎನ್‌ಕೌಂಟರ್‌ನಲ್ಲಿ ಸೇನಾ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಹುತಾತ್ಮ ಯೋಧನನ್ನು ಗಣ್ಯ 6 PARA (ವಿಶೇಷ ಪಡೆ) ಘಟಕದ ಹವಾಲ್ದಾರ್ ಜಂತು ಅಲಿ ಶೇಖ್ ಎಂದು ಗುರುತಿಸಲಾಗಿದೆ. ಅವರ ಅದಮ್ಯ ಧೈರ್ಯ ಮತ್ತು ಶೌರ್ಯವನ್ನು ಎಂದಿಗೂ ಮರೆಯಲಾಗುವುದಿಲ್ಲ"