ಬೆಂಗಳೂರು: ಮಾನವ ಮತ್ತು ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಸಂರಕ್ಷಿತಾರಣ್ಯ ಪ್ರದೇಶಗಳಲ್ಲಿ ಸಫಾರಿ ಟ್ರಿಪ್ ಖಡಿತಕ್ಕೆ ಸಚಿವ ಈಶ್ವರ್ ಖಂಡ್ರೆ ಮಹತ್ವದ ಆದೇಶ ನೀಡಿದ್ದಾರೆ. ಹೌದು.. ದೇಶದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತಾರಣ್ಯ ಪ್ರದೇಶಗಳಲ್ಲಿನ ಸಫಾರಿಯ ಟ್ರಿಪ್
ಬುಸಾನ್: ಹಲವು ತಿಂಗಳುಗಳಿಂದ ನಡೆಯುತ್ತಿರುವ ವ್ಯಾಪಾರ ಉದ್ವಿಗ್ನತೆಯ ನಂತರ ವಿಶ್ವದ ಎರಡು ದೊಡ್ಡ ಆರ್ಥಿಕ ರಾಷ್ಟ್ರಗಳ ನಡುವಿನ ಸಂಬಂಧವನ್ನು ಸ್ಥಿರಗೊಳಿಸುವ ಪ್ರಯತ್ನದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಗುರುವಾರ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡುತ್ತಿದ್ದಾರೆ. ಅಮೆರಿಕ ಅಧ್ಯಕ್ಷರಾಗಿ ಎರಡನೇ ಬಾರಿ ಅಧಿಕಾರ ವಹಿಸಿಕೊಂಡ ನಂತರ ಟ್ರಂಪ್ ಅವರು
ನವದೆಹಲಿ: ಮ್ಯಾನ್ಮಾರ್‌ನಿಂದ ಥೈಲ್ಯಾಂಡ್‌ಗೆ ಪರಾರಿಯಾಗಿರುವ 500 ಭಾರತೀಯರನ್ನು ದೇಶಕ್ಕೆ ವಾಪಾಸ್ ಕರೆತರಲು ಪ್ರಯತ್ನಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಇತ್ತೀಚಿನ ದಿನಗಳಲ್ಲಿ ಮ್ಯಾನ್ಮಾರ್‌ನಿಂದ ಥೈಲ್ಯಾಂಡ್‌ಗೆ ಬಂದ ನಂತರ ಹಲವಾರು ಭಾರತೀಯ ಪ್ರಜೆಗಳನ್ನು ಥಾಯ್ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯ ದೃಢಪಡಿಸಿದೆ. ಮ್ಯಾನ್ಮಾರ್‌ನಿಂದ ಥೈಲ್ಯಾಂಡ್‌ಗೆ ಸುಮಾರು 500 ಮಂದಿ ಭಾರತೀಯರು ಅಕ್ರಮವಾಗಿ ಪ್ರವೇಶಿಸಿದ್ದು,
ಉಡುಪಿ:ಮ೦ಗಳವಾರದ೦ದು ನಡೆದ ಉಡುಪಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಗರಸಭೆಯ ನಾಮನಿರ್ದೇಶಕ ಸದಸ್ಯರಾದ ಸುರೇಶ್ ಶೆಟ್ಟಿ ಬನ್ನಂಜೆ ಪ್ರಶ್ನಿಸಿದ್ದಾರೆ. ಉಡುಪಿ ನಗರಸಭೆಯಲ್ಲಿ ನಡೆದಂತಹ ಸಾಮಾನ್ಯ ಸಭೆಯಲ್ಲಿ ನಗರಸಭಾ ಸದಸ್ಯರಾದ ಸುರೇಶ್ ಶೆಟ್ಟಿ ಬನ್ನಂಜೆ ಇವರು ಮಾತನಾಡಿ ನಿರಂತರವಾಗಿ ಬನ್ನಂಜೆ ಹಾಗೂ ಶಿರಿಬೀಡು ವಾರ್ಡಿನಲ್ಲಿ ರಾಜ ಕಾಲುವೆಯಲ್ಲಿ ನಿರಂತರವಾಗಿ ಒಳ ಚರಂಡಿಯ ನೀರು
ಕಲಬುರಗಿ: ನವೆಂಬರ್ 2 ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ತನ್ನ ಪಥ ಸಂಚಲನ ನಡೆಸುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕರೆಯಲಾಗಿದ್ದ ಶಾಂತಿ ಸಮಿತಿ ಸಭೆಯು ವಾಗ್ವಾದ ಮತ್ತು ಗೊಂದಲದಲ್ಲಿ ಕೊನೆಗೊಂಡಿತು, ಸಂಘವನ್ನು ವಿರೋಧಿಸುವ ಸಂಘಟನೆಗಳು ಒಂದೇ ದಿನ ಮತ್ತು ಒಂದೇ ಸಮಯದಲ್ಲಿ ತಮ್ಮ ಮೆರವಣಿಗೆಗಳನ್ನು ನಡೆಸಲು ನಿಶ್ಚಯಿಸಿರುವುದೇ ಇದಕ್ಕೆ ಕಾರಣವಾಗಿದೆ. ಕಲಬುರಗಿ ಉಪ
ನವದೆಹಲಿ: ಭಾರತ ತನ್ನ ಸ್ವಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳಿಗೆ ಸಹಿ ಹಾಕುವುದಿಲ್ಲ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಮೆರಿಕ ಜೊತೆಗಿನ ವ್ಯಾಪಾರ ಒಪ್ಪಂದ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಅಮೆರಿಕ ಜೊತೆಗಿನ ಮಹತ್ವದ ವ್ಯಾಪಾರ ಒಪ್ಪಂದ ಕುರಿತು ಭುಗಿಲೆದ್ದಿರುವ ಚರ್ಚೆಗಳ ಕುರಿತು ಇದೇ ಮೊದಲ ಬಾರಿಗೆ ಮಾತನಾಡಿರುವ ಕೇಂದ್ರ ವಾಣಿಜ್ಯ
ಬೆಂಗಳೂರು: ಮಾಜಿ ಬಿಗ್ಬಾಸ್ ಸ್ಪರ್ಧಿ, ನಟಿ ದಿವ್ಯಾ ಸುರೇಶ್ ವಿರುದ್ಧ ದೂರು ದಾಖಲಾಗಿದೆ. ಅಕ್ಟೋಬರ್ 04 ರಂದು ನಟಿ ದಿವ್ಯಾ ಸುರೇಶ್ ಕಾರಿನಲ್ಲಿ ಅಪಘಾತ ಮಾಡಿ ಸ್ಥಳದಿಂದ ಪರಾರಿ ಆಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಕ್ಟೋಬರ್ 04 ರಂದು ಕಿರಣ್, ಅನುಷಾ, ಅನಿತಾ ಎಂಬವರು ಬೈಕ್‌ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದರು. ಈ
ಹೈದರಾಬಾದ್: ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಇಂದು ಶುಕ್ರವಾರ ಮುಂಜಾನೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡು ಪ್ರಾಥಮಿಕ ವರದಿಗಳ ಪ್ರಕಾರ, ಕನಿಷ್ಠ 21 ಜನರು ಮೃತಪಟ್ಟಿದ್ದಾರೆ, ಬಸ್ಸಿನಲ್ಲಿ 42 ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ. ಕರ್ನೂಲು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರ ಚಿನ್ನತೇಕೂರು ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು, ಖಾಸಗಿ
ಮಂಗಳೂರು, ಅಕ್ಟೋಬರ್ 21: ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ ಹಲವರು ಅಸ್ವಸ್ಥಗೊಂಡಿದ್ದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಿನ್ನೆ ನಡೆದಿತ್ತು. ಅಶೋಕ ಜನಮನ ಕಾರ್ಯಕ್ರಮದಲ್ಲಿ ಸಿಎಂ ಭಾಗಿ ವೇಳೆ ನೂಕು ನುಗ್ಗಲು ಉಂಟಾದ ಕಾರಣ ಕೆಲವರು ಅಸ್ವಸ್ಥಗೊಂಡಿದ್ದರು. ಈ ಬಗ್ಗೆ ದಕ್ಷಿಣ ಕನ್ನಡ ಪೊಲೀಸ್
ಮುಂಬೈ: ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಆರು ವರ್ಷದ ಬಾಲಕ ಸೇರಿ ನಾಲ್ವರು ಮೃತಪಟ್ಟಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನವಿ ಮುಂಬೈನ ವಾಶಿಯಲ್ಲಿರುವ ರಹೇಜಾ ಕಾಂಪ್ಲೆಕ್ಸ್‌ನಲ್ಲಿ ಬೆಳಗಿನ ಜಾವ 2 ಗಂಟೆಗೆ ಈ