37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಬೀಜಿಂಗ್: ಕೋವಿಡ್ ಬಳಿಕ ಮತ್ತೊಂದು ಮಹಾಮಾರಿ ಆತಂಕ ಶುರುವಾಗಿದ್ದು, ಕೋವಿಡ್ ವೈರಸ್ ಪತ್ತೆಯಾಗಿದ್ದ ಅದೇ ಚೀನಾದಲ್ಲಿ ಇದೀಗ ಬಾವಲಿ ಮೂಲಕ ಮನಷ್ಯರಿಗೆ ಹರಡುವ HKU5-CoV-2 ಎಂಬ ವೈರಾಣು ಪತ್ತೆಯಾಗಿದೆ. ಹೌದು.. COVID-19 ಸಾಂಕ್ರಾಮಿಕ ರೋಗಕ್ಕೆ ಕಾರಣವಾದ ವೈರಸ್‌ನಂತೆಯೇ, ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಅಪಾಯವನ್ನು ಹೊಂದಿರುವ ಹೊಸ ಕೊರೊನಾವೈರಸ್ ಚೀನಾದಲ್ಲಿ ಪತ್ತೆಯಾಗಿದೆ. ಈ ಬಗ್ಗೆ

ನವದೆಹಲಿ: ಮಹಾ ಕುಂಭಮೇಳದಲ್ಲಿ ನೈರ್ಮಲ್ಯ ಸೌಲಭ್ಯಗಳು ಅಸಮರ್ಪಕವಾಗಿರುವುದರಿಂದ ಲಕ್ಷಾಂತರ ಜನ ಗಂಗಾ ನದಿಯ ದಡದಲ್ಲಿ ಬಯಲು ಮಲವಿಸರ್ಜನೆ ಮಾಡಲು ಕಾರಣವಾಗಿದೆ ಎಂಬ ಆರೋಪದ ಮೇಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(NGT) ಇತ್ತೀಚೆಗೆ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ನಿಪುನ್ ಭೂಷಣ್ ಎಂಬವರು ಉತ್ತರ ಪ್ರದೇಶ ಸರ್ಕಾರದಿಂದ 10 ಕೋಟಿ ರೂ.

ಹೈದರಾಬಾದ್: ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ) ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಶನಿವಾರ ಛಾವಣಿಯ ಒಂದು ಭಾಗ ಕುಸಿದು ಕನಿಷ್ಠ ಆರು ಕಾರ್ಮಿಕರು ಸಿಲುಕಿರುವ ಶಂಕೆ ಸಾಧ್ಯತೆಯಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ನಿರ್ಮಾಣ ಕಂಪನಿಯ ತಂಡ ಸುರಂಗದೊಳಗೆ ಹೋಗಿದ್ದು, ಪರಿಶೀಲಿಸುತ್ತಿದೆ ಎಂದು ಅವರು ಹೇಳಿದರು. ಕಂಪನಿ ನೀಡಿದ ಮಾಹಿತಿಯ ಪ್ರಕಾರ

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪ್ರತಾಪ್ ಸಿಂಹ ವಿರುದ್ಧ ಮೈಸೂರು ಯುವ ಕಾಂಗ್ರೆಸ್‌ ಮುಖಂಡ ಸೈಯದ್‌ ಅಬ್ರರ್ ನೀಡಿದ ದೂರಿನ ಅನ್ವಯ ಉದಯಗಿರಿ

ಬೆಳಗಾವಿ: ಮರಾಠಿ ಮಾತನಾಡದ ನಿರ್ವಾಹಕನ ಮೇಲೆ ಪುಂಡರು ಹಲ್ಲೆ ನಡೆಸಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು, ಈ ಬಾರಿ ಹಲ್ಲೆಗೊಳಗಾದ ನಿರ್ವಾಹಕನ ವಿರುದ್ಧವೇ POCSO ಪ್ರಕರಣ ದಾಖಲಿಸಲಾಗಿದೆ. ಹೌದು.. ಬೆಳಗಾವಿಯ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ನಿರ್ವಾಹಕನ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಈಗ ನಿರ್ವಾಹಕ

ಲಕ್ನೋ: ಪ್ರಯಾಗ್‌ರಾಜ್‌ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 5 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ. ಲಾರಿ ಮತ್ತು ಕ್ರೂಸರ್‌ ನಡುವೆ ಇಂದು ಬೆಳಗ್ಗೆ ಮಿರಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ. 5 ಮಂದಿ ಸಾವನ್ನಪ್ಪಿದ್ದು 7 ಮಂದಿ ಗಾಯಗೊಂಡಿದ್ದಾರೆ. ಬೀದರ್ ನಗರದ

ವಾಷಿಂಗ್ಟನ್: ಅಮೆರಿಕ ಸೆನೆಟ್ ಡೊನಾಲ್ಡ್ ಟ್ರಂಪ್ ಅವರ ನಿಷ್ಠಾವಂತ ಕಾಶ್ ಪಟೇಲ್ ಅವರನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (FBI) ನಿರ್ದೇಶಕರಾಗಿ ಮತ ಚಲಾಯಿಸುವ ಮೂಲಕ ಆಯ್ಕೆ ಮಾಡಿದೆ. ಸೆನೆಟ್‌ನಲ್ಲಿ 51-49 ಮತಗಳ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾಶ್ ಪಟೇಲ್ ಅವರನ್ನು ಎಫ್‌ಬಿಐನ ಒಂಬತ್ತನೇ ನಿರ್ದೇಶಕರನ್ನಾಗಿ ದೃಢಪಡಿಸಿದರು. ಪಟೇಲ್

ಉಡುಪಿ: ಸಗ್ರಿಚಕ್ರತೀರ್ಥ ಶ್ರೀ ಉಮಾಮಹೇಶ್ವರದೇವಸ್ಥಾನದಲ್ಲಿ ಧ್ವಜಪ್ರತಿಷ್ಠೆ, ರಥಸರ್ಮಪಣೆ, ಸ್ವಾಗತ ಗೋಪುರದ ಉದ್ಘಾಟನೆ, ಬ್ರಹ್ಮಕಲಶೋತ್ಸವ,ರಥೋತ್ಸವ,ಶೈವೋತ್ಸವ ಕಾರ್ಯಕ್ರಮವು ಫೆ.20ರಿ೦ದ 24ರವರೆಗೆ ವಿಜೃ೦ಭಣೆಯಿ೦ದ ಜರಗಲಿದೆ. ಈ ಪ್ರಯುಕ್ತ ಫೆ.19ಬುಧವಾರದ ಸ೦ಜೆ 4ಗ೦ಟೆಗೆ ದೊಡ್ಡಣ್ಣಗುಡ್ಡೆಯ ಶ್ರೀಪ೦ಚ ಧೂಮಾವತಿ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯಲ್ಲಿ ಸಲ್ಲಿಸಿದ ಬಳಿಕ ಭವ್ಯ ಹಸಿರು ಹೊರೆಕಾಣಿಕೆಯ ಮೆರವಣಿಗೆಗೆ ಮಾಹೆಯ ಮಾಜಿ ರಿಜಿಸ್ಟರ್ ಗುರುಮದ್ವರಾವ್

ದೆಹಲಿ:ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಜ್ಞಾನೇಶ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. 26 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿರುವ ಜ್ಞಾನೇಶ್ ಕುಮಾರ್ ಅವರ ಅಧಿಕಾರಾವಧಿ 2029ರ ಜನವರಿ 26 ರವರೆಗೆ ಇರಲಿದೆ. ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಕುಮಾರ್, ರಾಷ್ಟ್ರ ನಿರ್ಮಾಣದ ಮೊದಲ ಹೆಜ್ಜೆ ಮತದಾನ.

ವಾಷಿಂಗ್ಟನ್ : ಭಾರತ ಬಳಿ ಸಾಕಷ್ಟು ಹಣ ಇರುವಾಗ , ನಾವೇಕೆ ಭಾರತಕ್ಕೆ 21 ಮಿಲಿಯನ್ ಡಾಲರ್‌ ಗಳನ್ನು ನೀಡಬೇಕು? ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರಶ್ನಿಸಿದ್ದಾರೆ. ಫ್ಲೋರಿಡಾದಲ್ಲಿರುವ ತನ್ನ ನಿವಾಸ ಮಾರ್-ಎ-ಲಾಗೊದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಭಾರತಕ್ಕೆ 21 ಮಿಲಿಯನ್ ಡಾಲರ್‌ಗಳನ್ನು ಏಕೆ ನೀಡುತ್ತಿದ್ದೇವೆ? ಅವರ