ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬೆಂಗಳೂರು: ಹಾಸನ ಹಾಲಿ ಸಂಸದ ಪ್ರಜ್ವಲ್​ ರೇವಣ್ಣ ಮತ್ತು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೆಚ್​ಡಿ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಯಾರ ವಿರುದ್ಧವಾಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಹೆಚ್ ಡಿ ರೇವಣ್ಣ ಮತ್ತು ಪ್ರಜ್ವಲ್

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ ಪ್ರಸಾದ್ (V Srinivasa Prasad) (76 ವ) ನಿಧನ ಹೊಂದಿದ್ದಾರೆ. ಮಧ್ಯರಾತ್ರಿ 1.20ರ ಸುಮಾರಿಗೆ ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಬಹು ಅಂಗಾಂಗ ವೈಫಲ್ಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ

ಕಲಬುರಗಿ: ಕೇಂದ್ರ ಸರ್ಕಾರದಿಂದ ಬಿಡುಗಡೆಗೊಂಡಿರುವ ಬರ ಪರಿಹಾರ ಮೊತ್ತ ಬಹಳ ಕಡಿಮೆಯಾಗಿದೆ. ನಾವು ಕೇಳಿದ್ದು 18, 172 ಕೋಟಿ ರೂಪಾಯಿ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿನಲ್ಲಿಯೇ ಕೇಳಿದ್ದೆವು. ಕರ್ನಾಟಕದಲ್ಲಿ ಬರದಿಂದ ಆಗಿರುವ ಒಟ್ಟು ಬೆಳೆ ನಷ್ಟ 35 ಸಾವಿರ ಕೋಟಿ ರೂಪಾಯಿಗಳಷ್ಟು. ರಾಜ್ಯದ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ಬರೊಬ್ಬರಿ 1 ಕಿ.ಮೀ ವರೆಗೂ ರಸ್ತೆಗಳಲ್ಲಿನ ಭೂಮಿ ಮುಳುಗಡೆಯಾಗಿ 30ಮನೆಗಳು ಹಾನಿಗೊಳಗಾಗಿದೆ. ಗುರುವಾರ ಸಂಜೆಯಿಂದ ಜಮ್ಮು ಮತ್ತು ಕಾಶ್ಮೀರದ ರಂಬಾನ್-ಗೂಲ್ ರಸ್ತೆಯಲ್ಲಿ ಸುಮಾರು 1 ಕಿ.ಮೀ.ನಷ್ಟು ಪ್ರದೇಶದಲ್ಲಿ ಭೂಮಿ ಮುಳುಗಡೆಯಾಗಿದೆ. ಜಮ್ಮು ಮತ್ತು ಕಾಶ್ಮೀರದ ರಾಂಬನ್‌ನಿಂದ 6 ಕಿಮೀ

ಕೋಲ್ಕತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದಿದ್ದು, ಘಟನೆಯಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಿಎಂ ಮಮತಾ ಬ್ಯಾನರ್ಜಿ ಅವರು ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತಿ ಸೀಟ್​​​ನಲ್ಲಿ ಕುಳಿತುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ತಕ್ಷಣ ಅವರ ಬಳಿಗೆ

ಡೋಡೋಮಾ,ಏ.26: ತಾಂಜಾನಿಯಾದಲ್ಲಿ ಕಳೆದ ವಾರದಿಂದ ಭಾರೀ ಮಳೆಯಾಗುತ್ತಿದ್ದು, , ಪ್ರವಾಹ ಮತ್ತು ಭೂಕುಸಿತದಿಂದ ಜನತೆ ತತ್ತರಿಸಿದ್ದಾರೆ. ದೇಶದಲ್ಲಿ ಇದುವರೆಗೂ 155 ಜನರು ಸಾವಿಗೀಡಾಗಿದ್ದು, 236 ಮಂದಿ ಗಾಯಗೊಂಡಿದ್ದಾರೆ. ಪೂರ್ವ ಆಫ್ರಿಕಾದಾದ್ಯಂತ ತೀವ್ರವಾದ ಮಳೆ ಮುಂದುವರಿದಿದೆ. ಎಲ್ ನಿನೋ ಹವಾಮಾನದ ಮಾದರಿಯು ಭಾರೀ ಮಳೆಗೆ ಕಾರಣವಾಗಿದೆ. ಇದರಿಂದಾಗಿ ಪ್ರವಾಹ ಹೆಚ್ಚಾಗಿದೆ. ರಸ್ತೆಗಳು,

ಚಾಮರಾಜನಗರ, (ಏಪ್ರಿಲ್ 26): ಲೋಕಸಭಾ ಚುನಾವಣೆ  ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ ಮೊದಲ ಹಂತದ ಮತದಾನ  ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದರೆ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿದೆ. ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಿರುವ ಘಟನೆ ನಡೆದಿದೆ. ಮೂಲ ಸೌಕರ್ಯವನ್ನು ಕಲ್ಪಿಸಲಾಗಿಲ್ಲ

ಬೀದರ್: ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಅನೇಕ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆ. ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದ್ದೇವೆ. ಆಕೆಯ ಕುಟುಂಬಕ್ಕೆ ಶೀಘ್ರವೇ ನ್ಯಾಯ ಒದಗಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೀದರ್ ನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನೇಹಾ ಹತ್ಯೆ ಪ್ರಕರಣವನ್ನು

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಂಗಸಂದ್ರದ ಮಣಿಪಾಲ್​ ಕಂಟ್ರಿ ರೋಡ್​​ನಲ್ಲಿರುವ ಟಿಂಬರ್​ ಯಾರ್ಡ್​ನಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕೋಟ್ಯಾಂತರ ರುಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಬೆಂಕಿ ಮೊದಲು ಟಿಂಬರ್​ ಯಾರ್ಡ್​ನಲ್ಲಿ ಕಾಣಿಸಿಕೊಂಡಿದೆ, ಬಳಿಕ ಲೋವಬಲ್​ ಸ್ಪೋರ್ಟ್​​ ಹೆಸರಿನ ಗಾರ್ಮೆಂಟ್ಸ್​​​​​​​ ಕಟ್ಟಡ, ವಾಹನ ವಾಶ್​​ ಕೇಂದ್ರಕ್ಕೂ ಹಬ್ಬಿದೆ. ಗಾರ್ಮೆಂಟ್ಸ್​​​​​ ಫ್ಯಾಕ್ಟರಿಗೆ

ಬೆಂಗಳೂರು: ಬಡಗು ತಿಟ್ಟು ಯಕ್ಷಗಾನದ ಖ್ಯಾತ ಭಾಗವತ, ತೆಂಕುತಿಟ್ಟಿನಲ್ಲೂ ಹೆಸರು ಗಳಿಸಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿರುವ ಸುಬ್ರಹ್ಮಣ್ಯ ಧಾರೇಶ್ವರ ಅವರು ಇಂದು ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ಪುತ್ರನ ಮನೆಯಲ್ಲಿದ್ದ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ನಸುಕಿನ ಜಾವ ಇಹಲೋಕ ತ್ಯಜಿಸಿದರು. ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. 46 ವರ್ಷಗಳ