ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಹೈದರಾಬಾದ್:ಡಿ.01 ,ಇಂದು ಬೆಳಿಗ್ಗೆ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಉನ್ನತ ಕಮಾಂಡರ್ ಸೇರಿದಂತೆ ಏಳು ಮಾವೋವಾದಿಗಳು ಹತರಾಗಿದ್ದಾರೆ. ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಪೊಲೀಸ್ ಮಾಹಿತಿದಾರರು ಎಂಬ ಶಂಕೆಯಲ್ಲಿ ಇಬ್ಬರು ಬುಡಕಟ್ಟು ಯುವಕರನ್ನು ಹತ್ಯೆಗೈದ ಒಂದು ವಾರದ ನಂತರ ಈ ಘಟನೆ ನಡೆದಿದೆ. ಗ್ರೇಹೌಂಡ್ಸ್ ಕೂಂಬಿಂಗ್ ಕಾರ್ಯಾಚರಣೆಯ ಸಮಯದಲ್ಲಿ ಮಾವೋವಾದಿ ಗುಂಪನ್ನು ಗುರುತಿಸಿ

ಕಂಟೈನರ್ ನ ಬ್ರೇಕ್ ಲೈನರ್ ಜಾಮ್ ಆಗಿ ಬೆಂಕಿ ಕಾಣಿಸಿಕೊಂಡು ಟಯರ್ ಮೇಲ್ಗಡೆ ಹೊತ್ತಿ ಉರಿದಿದ್ದು ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ಬಪ್ಪನಾಡು ಸೇತುವೆ ಬಳಿ ನಡೆದಿದೆ. ಪಡುಬಿದ್ರೆ ನಂದಿಕೂರು ಕೈಗಾರಿಕಾ ಪ್ರದೇಶದ ಬ್ರೈಟ್ ಫ್ಲೆಕ್ಸ್ ಕಂಪನಿಯಿಂದ ಮಂಗಳೂರು ಬಂದರ್ ಕಡೆಗೆ

ಫೆಂಗಲ್ ಚಂಡಮಾರುತತೀವ್ರತೆ ಪಡೆದುಕೊಂಡಿದೆ. ಚೆನ್ನೈನಲ್ಲಿ ಭಾರಿ ಮಳೆಯಿಂದಾಗಿ ವಿಮಾನ ಮತ್ತು ರೈಲು ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಮಳೆಯ ಅಬ್ಬರದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 10ಕ್ಕೂ ಹೆಚ್ಚು ಆಗಮನ ಮತ್ತು ನಿರ್ಗಮನ ರದ್ದುಗೊಳಿಸಲಾಗಿದೆ. ಇಂಡಿಯೋ ತನ್ನ ಎಲ್ಲಾ ಆಗಮನ ಮತ್ತು ನಿರ್ಗಮನ ವಿಮಾನ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇದರೊಂದಿಗೆ ಅಬುದಾಬಿಯಿಂದ

ಬಳ್ಳಾರಿ, ನವೆಂಬರ್​ 30: ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರು ಮೃತಪಟ್ಟಿದ್ದಾರೆ. ನಾಲ್ವರಲ್ಲಿ ಬಳ್ಳಾರಿ ತಾಲೂಕಿನ ಬಾಣಾಪುರ ಗ್ರಾಮದ ನಂದಿನಿ ಎಂಬುವರು ನವೆಂಬರ್​ 09 ರಂದು ಹೆರಿಗೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ನವೆಂಬರ್​ 12 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಅಂದು ಮಧ್ಯರಾತ್ರಿ ಮೃತಪಟ್ಟಿದ್ದು, ದುರ್ದೈವದ

ಚಿಕ್ಕಮಗಳೂರು, ನವೆಂಬರ್​ 30: ಪಶ್ಚಿಮಘಟ್ಟ ಪ್ರದೇಶಗಳಲ್ಲಿ ನಕ್ಸಲ್​​ (Naxal) ಚಟುವಟಿಕೆ ಕಂಡು ಬಂದ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆಯಿಂದ (ANF) ಕೂಂಬಿಂಗ್ ಮುಂದುವರೆದಿದೆ. ​ಕರ್ನಾಟಕದ‌ ಐವರು ನಕ್ಸಲರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸುತ್ತಿನಗುಡ್ಡ, ಕಿಗ್ಗಾ, ಕೆರೆಕಟ್ಟೆ ಅರಣ್ಯದಲ್ಲಿ ಓಡಾಡಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ, ಹುಡಕಾಟ ನಡೆದಿದೆ. ಉಡುಪಿ, ಚಿಕ್ಕಮಗಳೂರು,

ಜಮೀರ್ ಪುತ್ರ ಝೈದ್ ಖಾನ್ ಅವರು ‘ಬನಾರಸ್’ ಸಿನಿಮಾ ಮೂಲಕ ಎಲ್ಲರ ಗಮನ ಸೆಳೆದರು. ಈಗ ಅವರು ಮುಂದಿನ ಚಿತ್ರದ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ‘ಕಲ್ಟ್’ ಎಂದು ಟೈಟಲ್ ಇಡಲಾಗಿದ್ದು, ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈಗ ಚಿತ್ರತಂಡ ಎಡವೊಟ್ಟೊಂದನ್ನು ಮಾಡಿಕೊಂಡಿದ್ದು, ಇದಕ್ಕೆ ಸಂಬಂಧಿಸಿ ಕೇಸ್ ಕೂಡ

ಮೈಸೂರು, ನವೆಂಬರ್ 30: ಪಕ್ಷದ ವಿರುದ್ಧ ಸದಾ ಹೇಳಿಕೆಗಳನ್ನು ನೀಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಣದ ಆಕ್ರೋಶ ತೀವ್ರಗೊಂಡಿದೆ. ಯತ್ನಾಳ್​ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಬಿಸಾಕಿ, ಅವರದ್ದು ಮುಖವಾಡದ ಹಿಂದುತ್ವ ಎಂದು ಮೈಸೂರಿನಲ್ಲಿ ಪಕ್ಷದ ಕಾರ್ಯಕರ್ತರು, ವಿಜಯೇಂದ್ರ ಬಣದ ನಾಯಕರು ಆಗ್ರಹಿಸಿದ್ದಾರೆ.

ಬೆಂಗಳೂರು, ನವೆಂಬರ್​ 28: ಬೆಂಗಳೂರಿನಲ್ಲಿ ಉಗ್ರ ಕೃತ್ಯಗಳಿಗೆ ಸ್ಫೋಟಕ ಸಂಗ್ರಹಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರವಾಂಡದಲ್ಲಿ ತಲೆಮರೆಸಿಕೊಂಡಿದ್ದ ಲಷ್ಕರ್-ಎ-ತೊಯ್ಬಾದ ಸದಸ್ಯನಾಗಿದ್ದ ಸಲ್ಮಾನ್ ರೆಹಮಾನ್ ಖಾನ್ ​ ಅನ್ನು ಬಂಧಿಸಿರುವುದಾಗಿ ಸಿಬಿಐ ಮಾಧ್ಯಮ ಪ್ರಕಟಣೆಯ ಮೂಲಕ ಮಾಹಿತಿ ನೀಡಿದೆ. ಜೊತೆಗೆ ಆತನನ್ನು ಭಾರತಕ್ಕೆ ಹಸ್ತಾಂತರ ಮಾಡಲಾಗಿದೆ. ಸಿಬಿಐನ ಜಾಗತಿಕ ಕಾರ್ಯಾಚರಣೆ ಘಟಕ ಮತ್ತು ಎನ್ಐಎ

ರಾಮನಗರ, ನವೆಂಬರ್ 28: ಮಾನವ ಕುಲವೇ ಬೆಚ್ಚಿಬೀಳುವಂಥ ಆಘಾತಕಾರಿ ಕೃತ್ಯವೊಂದು ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಆಗತಾನೆ ಜನಿಸಿರುವ ಶಿಶುವೊಂದನ್ನು ಶೌಚಾಲಯದ ಗುಂಡಿಗೆ ಹಾಕಿ ಫ್ಲಶ್ ಮಾಡಲಾಗಿದೆ. ಬುಧವಾರ ರಾತ್ರಿ ನಡೆದ ಈ ಅಮಾನವೀಯ ವಿದ್ಯಮಾನ ಇಂದು ಬೆಳಕಿಗೆ ಬಂದಿದ್ದು, ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾರೋಹಳ್ಳಿಯ ಆಸ್ಪತ್ರೆಯಲ್ಲಿ

ನಾಗಪಟ್ಟಿಣಂ(ತಮಿಳು ನಾಡು): ಫೆಂಗಲ್ ಚಂಡಮಾರುತದ ಪ್ರಭಾವದಿಂದ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸತತ ಎರಡನೇ ದಿನವೂ ತಮಿಳು ನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿಯ ತಗ್ಗು ಮತ್ತು ದುರ್ಬಲ ಪ್ರದೇಶಗಳಲ್ಲಿ ವಾಸಿಸುವ 1,200 ಕ್ಕೂ ಹೆಚ್ಚು ಜನರನ್ನು ಆಶ್ರಯ ಮತ್ತು ತಾತ್ಕಾಲಿಕ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ನಾಗಪಟ್ಟಣಂನಲ್ಲಿ, ಜಿಲ್ಲೆಯ 12 ಶಿಬಿರಗಳಲ್ಲಿ 371 ಕುಟುಂಬಗಳ