ಚಿಕ್ಕೋಡಿ/ಅಥಣಿ: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ (58) ಎಂಬವರನ್ನು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದಲ್ಲಿ ಅಣ್ಣಪ್ಪ ಬಸಪ್ಪ ನಿಂಬಾಳರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅಣ್ಣಪ್ಪ ಖೀಳೆಗಾಂವ್ ಕೃಷಿ ಪತ್ತಿನ
ಬೆಂಗಳೂರು: ಕರ್ನಾಟಕದಲ್ಲಿ 'ಮೋದಿ ಅಲೆ' ಇಲ್ಲ. ಹೀಗಾಗಿ ಕಾಂಗ್ರೆಸ್ ಆರಾಮದಾಯಕವಾಗಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪ ಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ. ಬಿಜೆಪಿ ತನ್ನ ನಾಲ್ಕು ವರ್ಷಗಳ ಆಡಳಿತದಲ್ಲಿ ರಾಜ್ಯದಲ್ಲಿ ಏನನ್ನೂ ಮಾಡಿಲ್ಲ ಮತ್ತು ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ
ವಯನಾಡ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ನಾಮಪತ್ರ ಸಲ್ಲಿಸಿದರು. ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಚುನಾವಣಾಧಿಕಾರಿಯೂ ಆಗಿರುವ ವಯನಾಡ್ ಜಿಲ್ಲಾಧಿಕಾರಿಗೆ ಇಂದು
ನವದೆಹಲಿ: ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಬುಧವಾರ ತೀರ್ಪು ಕಾಯ್ದಿರಿಸಿದೆ. ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕ
ತೈಪೆ, ತೈವಾನ್: ಬುಧವಾರ ಮುಂಜಾನೆ ಪ್ರಬಲ ಭೂಕಂಪವು ಇಡೀ ತೈವಾನ್ ದ್ವೀಪವನ್ನು ನಡುಗಿಸಿದೆ. ಘಟನೆಯಲ್ಲಿ ಇದುವರೆಗೆ 4 ಜನರು ಮೃತಪಟ್ಟಿದ್ದಾರೆ. ದಕ್ಷಿಣ ನಗರದಲ್ಲಿ ಕಟ್ಟಡಗಳು ಕುಸಿದು ದಕ್ಷಿಣ ಜಪಾನಿನ ದ್ವೀಪಗಳಲ್ಲಿ ಸುನಾಮಿಯನ್ನು ಸೃಷ್ಟಿಸಿವೆ ಎಂದು ವರದಿಯಾಗಿವೆ. ಭೂಕಂಪದಿಂದ ಬೃಹತ್ ಕಟ್ಟಡಗಳು ವಾಲುವ ದೃಶ್ಯ, ಹಲವು ಕಟ್ಟಡಗಳು ನೆಲಸಮವಾಗುತ್ತಿರುವ ದೃಶ್ಯ ವಿಡಿಯೊದಲ್ಲಿ
ಮಂಡ್ಯ: ಸಕ್ಕರೆ ನಾಡು ಮಂಡ್ಯ ಬಿಟ್ಟು ಬೇರೆ ಕಡೆ ನನ್ನ ರಾಜಕೀಯ ಜೀವನವಿಲ್ಲ, ಮಂಡ್ಯ ಮಣ್ಣಿನ ಸೊಸೆಯಾಗಿ ಜಿಲ್ಲೆಯ ಜನರ ಕೈಬಿಡಲು ನಾನು ಇಷ್ಟಪಡುವುದಿಲ್ಲ. ಈ ಮಂಡ್ಯದ ಋಣ ಮತ್ತು ಈ ಮಂಡ್ಯದ ಜನವನ್ನು ನಾನು ಎಂದೆಂದಿಗೂ ಬಿಡುವುದಿಲ್ಲ ಎಂದು ಪ್ರಮಾಣ ಮಾಡಿ ಹೇಳುತ್ತೇನೆ ಎಂದು ಸಂಸದೆ ಸುಮಲತಾ ಪುನರುಚ್ಛರಿಸಿದ್ದಾರೆ.
ಬೆಂಗಳೂರು: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ '400 ಪಾರ್' (400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ) ಗುರಿಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಪಕ್ಷದ ಹಿರಿಯ ನಾಯಕ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಜೊತೆ ಇಂಡಿಯಾ ಬ್ಲಾಕ್ ನ್ನು ಹೋಲಿಸಲು ಸಾಧ್ಯವೇ ಇಲ್ಲ.
ನವದೆಹಲಿ: :ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮಂಗಳವಾರ 17 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ರೆಡ್ಡಿ ಅವರನ್ನು ಕಡಪಾ ಕ್ಷೇತ್ರದಿಂದ ಕಣಕ್ಕಿಳಿಸಿದ. ಒಡಿಶಾದ ಎಂಟು ಅಭ್ಯರ್ಥಿಗಳು, ಆಂಧ್ರಪ್ರದೇಶದ ಐದು ಅಭ್ಯರ್ಥಿಗಳು, ಬಿಹಾರದ ಮೂವರು ಮತ್ತು ಪಶ್ಚಿಮ ಬಂಗಾಳದ ಒಬ್ಬ ಅಭ್ಯರ್ಥಿ ಸೇರಿದಂತೆ
ನವದೆಹಲಿ: ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಎಪಿ ಸಂಸದ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಅವರು ಸಲ್ಲಿಸಿದ್ದ ಅರ್ಜಿಗೆ ಜಾರಿ ನಿರ್ದೇಶನಾಲಯ
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಚಂಡಮಾರುತ ಅಪ್ಪಳಿಸಿದ್ದು, ಈ ವೇಳೆ ಕನಿಷ್ಠ 4 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾನುವಾರ ಚಂಡಮಾರುತ ಭಾರಿ ಹಾನಿಯನ್ನುಂಟುಮಾಡಿದ್ದು, ಘಟನೆಯಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 70 ಜನರು ಗಾಯಗೊಂಡಿದ್ದಾರೆ. ಮೃತರನ್ನು ಸೆಂಪಾರಾದ ದಿಜೇಂದ್ರ ನಾರಾಯಣ ಸರ್ಕಾರ್