ಹಾವೇರಿ, ನವೆಂಬರ್ 23: ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್ನ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು ಸಾಧಿಸಿದ್ದಾರೆ. ಅಜ್ಜಂಪೀರ್ ಖಾದ್ರಿ
ನವದೆಹಲಿ: ನ.19100 ಕೋಟಿ ಮೊತ್ತದ ಬೃಹತ್ ಸೈಬರ್ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ಚೀನಾ ಪ್ರಜೆಯೊಬ್ಬನನ್ನು ದೆಹಲಿಯಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿ ಫಾಂಗ್ ಚೆಂಜಿನ್ ವಾಟ್ಸಾಪ್ ಗುಂಪುಗಳ ಮೂಲಕ ಆನ್‌ಲೈನ್ ಸ್ಟಾಕ್ ಟ್ರೇಡಿಂಗ್ ಹಗರಣಗಳಲ್ಲಿ ಭಾಗಿಯಾಗಿದ್ದನು. ಸಂತ್ರಸ್ತರಲ್ಲಿ ಒಬ್ಬರಾದ ಸುರೇಶ್ ಕೋಳಿಚಿಯಿಲ್ ಅಚ್ಯುತನ್ ಅವರು
ವಾಷಿಂಗ್ಟನ್:ನ.19ಇದೇ ಮೊದಲ ಬಾರಿಗೆ ಇಸ್ರೋ ಸಂಸ್ಥೆ ವಿಶ್ವದ ಶ್ರೀಮಂತ ಉದ್ಯಮಿ ಎಲೋನ್ ಮಸ್ಕ್ ಮಾಲೀಕತ್ವದ ಸ್ಪೇಸ್‌ಎಕ್ಸ್ ಕಂಪನಿಯ ರಾಕೆಟ್ ಬಳಸಿ ಉಪಗ್ರಹವನ್ನು ಕಕ್ಷೆಗೆ ಸೇರಿಸಿ ಯಶಸ್ಸಿಯಾಗಿದೆ. ಇಸ್ರೋದ ಜಿಸ್ಯಾಟ್ -20 ಸಂವಹನ ಉಪಗ್ರಹವನ್ನು ಹೊತ್ತುಕೊಂಡಿದ್ದ ಸ್ಪೇಸ್‌ಎಕ್ಸ್‌ನ ಫಾಲ್ಕನ್ 9 ರಾಕೆಟ್ ಭಾರತೀಯ ಕಾಲಮಾನ ಸೋಮವಾರ ರಾತ್ರಿ 23:45ಕ್ಕೆ ಅಮೆರಿಕದ ಫ್ಲೋರಿಡಾ
ಲಖನೌ: ಉತ್ತರ ಭಾರತದಲ್ಲಿ ದಟ್ಟ ಮಂಜು ಮುಂದುವರೆದಿರುವಂತೆಯೇ ಉತ್ತರ ಪ್ರದೇಶದ ನೋಯ್ಡಾದಲ್ಲಿ ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, 12 ವಾಹನಗಳು ಢಿಕ್ಕಿಯಾಗಿ 2 ಪ್ರತ್ಯೇಕ ಅವಘಡಗಳಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ನೋಯ್ಡಾದ ಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಸರಣಿ ಅಪಘಾತ ನಡೆದಿದ್ದು,
ಚಿತ್ರದುರ್ಗ: ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಬಳಿ ಅಕ್ರಮವಾಗಿ ಒಳನುಸುಳುವಿಕೆ ಮತ್ತು ನೆಲೆಸಿದ್ದಕ್ಕಾಗಿ ನವೆಂಬರ್ 18 ರಂದು 6 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಶೇಕ್ ಸೈಫುರ್ ರೋಹಮಾನ್, ಮುಹಮ್ಮದ್ ಸುಮನ್ ಹುಸೇನ್ ಅಲಿ, ಮಜರುಲ್, ಅಜೀಜುಲ್ ಶೇಕ್, ಮುಹಮ್ಮದ್ ಸಾಕಿಬ್ ಸಿಕ್ದರ್ ಮತ್ತು ಸನೋವರ್ ಹೊಸೈನ್ ಬಂಧಿತರು. ನವೆಂಬರ್ 18
ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದ್ದು, ಈ ವೇಳೆ ಮೋಸ್ಟ್ ವಾಂಟೆಡ್ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದಾನೆಂದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಳೆದ ಕೆಲವು ದಿನಗಳಿಂದ ಹೆಬ್ರಿ-ಕಾರ್ಕಳ ಪ್ರದೇಶದಲ್ಲಿ ನಕ್ಸಲರ ಓಡಾಟ ಹೆಚ್ಚಾಗಿತ್ತು.
-:ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಶುಭಕೋರುವ:-
ನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆ ಇಂದಿನ ಅಗತ್ಯವಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಹೇಳಿದರು. ಭಾನುವಾರ ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಉದ್ಘಾಟಿಸಿ ಮಾತನಾಡಿದರು. ನ್ಯಾಯಾಂಗದ ಪ್ರಕ್ರಿಯೆಗಳು ವರ್ಚುವಲ್ ಮೂಲಕ ನಡೆಸುವುದರಿಂದ ಕಕ್ಷಿದಾರರಿಗೆ ಪಾರದರ್ಶಕತೆ ತೋರ್ಪಡಿಸುವುದರ ಜೊತೆಗೆ
ಡೆನ್ಮಾರ್ಕ್‌ನ ವಿಕ್ಟೋರಿಯಾ ಕ್ಜೇರ್ ಅವರು 73 ನೇ ವಿಶ್ವ ಸುಂದರಿ 2024 ರ ವಿಜೇತರಾಗಿದ್ದಾರೆ. ಡೆನ್ಮಾರ್ಕ್‌ಗೆ ಮೊದಲ ವಿಶ್ವ ಸುಂದರಿ ಕಿರೀಟ ಇದು. ಮೆಕ್ಸಿಕೋದ ಮರಿಯಾ ಫೆರ್ನಾಂಡಾ ಬೆಲ್ಟ್ರಾನ್ ಮತ್ತು ನೈಜೀರಿಯಾದ ಸಿನಿದಿಮ್ಮಾ ಅಡೆಟ್ಶಿನಾ ಕ್ರಮವಾಗಿ ಮೊದಲ ಮತ್ತು ಎರಡನೇ ರನ್ನರ್ ಅಪ್ ಆಗಿದ್ದಾರೆ. ಭಾರತದ ರಿಯಾ ಸಿಂಘಾ
ಉಡುಪಿ:ನ.17ಹಿಟ್ ಆ್ಯಂಡ್ ರನ್ ನಡೆಸಿ ಆಟೋ ಚಾಲಕನ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಪುತ್ರ ಪ್ರಜ್ವಲ್ ಶೆಟ್ಟಿಯನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬೆಳಪುವಿನ ಮಿಲಿಟರಿ ಕಾಲೊನಿಯಲ್ಲಿ ನವೆಂಬರ್ 11 ರಂದು ನಡೆದಿದ್ದ ಈ ಅಪಘಾತದಲ್ಲಿ ಆಟೋ