ನೆಲಮಂಗಲ, ಜನವರಿ 30: ತಮ್ಮ ವಿಶೇಷ ಡ್ರೆಸ್ ಕೋಡ್ನಲ್ಲಿ ಕಳ್ಳತನಕ್ಕಿಳಿಯುವ ಮೂಲಕ ಚಡ್ಡಿ ಗ್ಯಾಂಗ್ ಜನರಲ್ಲಿ ಸಾಕಷ್ಟು ಭಯ ಹುಟ್ಟಿಸಿತ್ತು. ಇದೀಗ ಇದೇ ರೀತಿಯಾಗಿ ಬೆಂಗಳೂರಿಗೆ ನಟೋರಿಯಸ್ ಗರುಡ ಗ್ಯಾಂಗ್ (Garuda Gang) ಎಂಟ್ರಿ ಕೊಟ್ಟಿದೆ. ಈ ಗ್ಯಾಂಗ್ ಸದಸ್ಯರ ಮೇಲೆ ಬೇರೆ ಬೇರೆ ಠಾಣೆಯಲ್ಲಿ ಸಾಕಷ್ಟು ಪ್ರಕರಣಗಳಿವೆ
ಪ್ರಯಾಗರಾಜ್:ಜ.30: ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯ ಮಹಾಕುಂಭ ಮೇಳ ನಡೆಯುವ ಪ್ರದೇಶದ ಸೆಕ್ಟರ್ 22 ಪ್ರದೇಶದಲ್ಲಿ ಇಂದು ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಪೆಂಡಾಲ್‌ಗಳು ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದು, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಉಂಟಾದ ಬಗ್ಗೆ ವರದಿಯಾಗಿಲ್ಲ. ಹಿರಿಯ ಅಧಿಕಾರಿಗಳು
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್
ಲಖನೌ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸೀತಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಗುರುವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಸದ ರಾಕೇಶ್ ರಾಥೋಡ್ ಅವರನ್ನು ಇಂದು ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾಗಲೇ ಬಂಧಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ತನ್ನ ಮೇಲೆ ಲೈಂಗಿಕ ದೌರ್ಜನ್ಯ
ಬೆಂಗಳೂರು, ಜನವರಿ 29: ಮೈಸೂರು ರಾಜಮನೆತನ ಮತ್ತು ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದ್ದು, ಬೆಂಗಳೂರು ಅರಮನೆ ಆಸ್ತಿ ವಿಚಾರದಲ್ಲಿ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದಾರೆ. ಆ ಮೂಲಕ 472 ಎಕರೆ ಮತ್ತು 16 ಗುಂಟೆ ಬೆಂಗಳೂರು ಅರಮನೆಯ ಭೂಮಿ ಬಳಕೆ ಮತ್ತು
ವಾಷಿಂಗ್ಟನ್: ಪಿಎಸ್ ಎ ನಿರ್ವಹಣೆಯ ಅಮೆರಿಕನ್ ಏರ್ಲೈನ್ಸ್ ವಾಣಿಜ್ಯ ವಿಮಾನ ನಿನ್ನೆ ರಾತ್ರಿ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಿಲಿಟರಿ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಪೊಟೊಮ್ಯಾಕ್ ನದಿಗೆ ಬಿದ್ದು ವಿಮಾನದಲ್ಲಿದ್ದ ಎಲ್ಲಾ 64 ಮಂದಿ ಮೃತಪಟ್ಟಿರುವ ಶಂಕೆಯಿದೆ, ಈಗಾಗಲೇ ಇಬ್ಬರ ಮೃತದೇಹಗಳನ್ನು ರಕ್ಷಣಾ ಕಾರ್ಯ ತಂಡ ಹೊರತೆಗೆದಿದೆ. ನದಿಯಿಂದ
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಕಾಲ್ತುಳಿತ ಉಂಟಾಗಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಘಟನೆ ನಡೆದ ಬಳಿಕ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ವಿವಿಐಪಿ ಪಾಸ್ಗಳನ್ನು ರದ್ದುಗೊಳಿಸಲಾಗಿದೆ. ತಕ್ಷಣವೇ ಜಾರಿಗೆ ಬರುವಂತೆ ಐದು ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ. ಇನ್ನುಮುಂದೆ ಯಾವುದೇ ಬಗೆಯ ವಾಹನಗಳನ್ನು ಒಳಗೆ ಬಿಡುವುದಿಲ್ಲ.
ಉಡುಪಿಯ ಇತಿಹಾಸ ಪ್ರಸಿದ್ಧ ದೇವಸ್ಥಾನಗಳಲ್ಲಿ ಒ೦ದಾದ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವು ವಿಜೃ೦ಭಣೆಯಿ೦ದ ಜರಗಲಿದೆ. ಈ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ
ಮೈಸೂರು, (ಜನವರಿ 28): ಮುಡಾ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿದೆ. ಈವರೆಗಿನ ತನಿಖೆಯ ವರದಿಯನ್ನ ಲೋಕಾಯುಕ್ತ ಪೊಲೀಸರು ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದ್ದಾರೆ. ಆದ್ರೆ, ಲೋಕಾಯುಕ್ತ ತನಿಖೆಗೆ ಆಕ್ಷೇಪ ವ್ಯಕ್ತಪಡಿಸಿರೋ ದೂರುದಾರ ಸ್ನೇಹಮಯಿ ಕೃಷ್ಣ, ಪ್ರಕರಣವನ್ನ ಸಿಬಿಐಗೆ ನೀಡಬೇಕೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಮಂಗಳವಾರ ಬೆಳಗ್ಗೆ ನಡೆದ ಜೈನ ನಿರ್ವಾಣ ಉತ್ಸವದಲ್ಲಿ ವೇದಿಕೆ ಕುಸಿದು 5 ಮಂದಿ ಸಾವನ್ನಪ್ಪಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜೈನ ಸನ್ಯಾಸಿಗಳ ಸಮ್ಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡೂಗಳನ್ನು ಅರ್ಪಿಸುವ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು