ಬೆಳ್ತಂಗಡಿ:ಮಾ.21. ದ್ವಿಚಕ್ರ ವಾಹನದ ಮೇಲೆ ದೊಡ್ಡ ಗಾತ್ರದ ಮಾವಿನ ಮರದ ಕೊಂಬೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ದಾರುಣ ಘಟನೆ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಸಮೀಪದ ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಜಾರಿಗೆಬೈಲು ಎಂಬಲ್ಲಿ ಮಾ.20ರಂದು ರಾತ್ರಿ 8 ಗಂಟೆಗೆ ನಡೆದಿದೆ. ಬೆಳಾಲು ಪೆರಿಯಡ್ಕ ಸಮೀಪದ ಕರ್ಪುದ ಗುಡ್ಡೆ ನಿವಾಸಿ
ಮಂಗಳೂರು:ಮಾ.14,ನಾಟಕ ರಂಗ ಹಾಗೂ ತುಳು ಚಿತ್ರರಂಗದಲ್ಲಿ ಪ್ರಚಂಡ ಕುಳ್ಳನಾಗಿ ಗುರುತಿಸಿಕೊಂಡಿದ್ದ ಕಲಾವಿದ ವಿವೇಕ್ ಮಾಡೂರು (52) ಅವರು ಮಾಡೂರಿನ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತ ವಿವೇಕ್ ಅವರು ಪತ್ನಿ ವೇದಾವತಿ ಜೊತೆ ಉಳ್ಳಾಲ ತಾಲೂಕಿನ ಮಾಡೂರಿನ ಸಹೋದರನ ಮನೆಯಲ್ಲಿ ವಾಸವಾಗಿದ್ದರು. ಈ ಹಿಂದೆ ಟೆಲಿಫೋನ್ ಎಸ್ ಟಿಡಿ ಬೂತ್ ನಡೆಸುತ್ತಿದ್ದ
ಮಂಗಳೂರು : ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಯಾರಾಗಲಿರುವ "ವೈಲ್ಡ್ ಟೈಗರ್ ಸಫಾರಿ" ಸಿನಿಮಾದ ಮುಹೂರ್ತ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಕದ್ರಿ ದೇವಸ್ಥಾನದಲ್ಲಿ ಜರುಗಿತು. ಬಳಿಕ ಮಾಧ್ಯಮಗಳ ಜೊತೆ ಮಾತಾಡಿದ ಚಿತ್ರದ ನಿರ್ದೇಶಕ ಚಂದ್ರಮೌಳಿ ಅವರು, ”ಕ್ಷಣಕ್ಷಣಕ್ಕೂ ಕುತೂಹಲ ಕೆರಳಿಸುವ ಕಥಾಹಂದರವನ್ನು ಈ ಸಿನಿಮಾ ಹೊಂದಿದ್ದು ಸಿನಿಮಾದ ಮುಹೂರ್ತ ಕಾರ್ಯಕ್ರಮ ಇಂದು
ಮಂಗಳೂರು: ಕರಾವಳಿ ಕರ್ನಾಟಕದ ಹಲವು ಭಾಗಗಳಲ್ಲಿ ಬುಧವಾರದಿಂದ ಬಿಸಿಗಾಳಿ ಆವರಿಸಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಎರಡು ದಿನ 'ಯೆಲ್ಲೂ' ಅಲರ್ಟ್ ಘೋಷಿಸಿದೆ. ಬುಧವಾರ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿತ್ತು. ಇದು ಮಾರ್ಚ್ 3 ರವರೆಗೆ ಇರುತ್ತದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ ಎರಡು ದಿನಗಳ
ಮಂಗಳೂರು: ನಗರದಲ್ಲಿ ನಾಲ್ಕು ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಮಂಗಳೂರಿನ ಪಾನ್ ಮಸಾಲಾ,ಸುಪಾರಿ ಮತ್ತು ಇತರ ಗುಟ್ಕಾ ಉತ್ಪನ್ನಗಳ ವ್ಯವಹಾರಗಳನ್ನು ನಡೆಸುತ್ತಿರುವ ನಾಲ್ಕು ಟ್ರೇಡಿಂಗ್ ಕಂಪೆನಿಗಳ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಟ್ರೇಡಿಂಗ್
ಮಂಗಳೂರು, ಫೆ.12: ಸಂತ ಅಲೋಶಿಯಸ್ ಯುನಿವರ್ಸಿಟಿಯ ಕಂಪ್ಯೂಟರ್ ಅನಿಮೇಶನ್ ಮುಖ್ಯಸ್ಥರಾದ ಸಂತೋಷ್ ನೋಟಗಾರ್ ಅವರು ಇಂಡೋನೇಷಿಯಾದ ಬಾಲಿಯಲ್ಲಿ ಫೆ.14 ರಿಂದ ಫೆ.16 ರವರೆಗೆ ನಡೆಯುವ ವಿಕಿ ಸೋರ್ಸ್ ಸಮ್ಮೇಳನಕ್ಕೆ ಆಯ್ಕೆಯಾಗಿದ್ದಾರೆ. ಪ್ರಸ್ತುತ ಅವರು ವಿಕಿಪೀಡಿಯ ಏಷ್ಯನ್ ಮಾಸಿಕದ ದಕ್ಷಿಣ ಏಷ್ಯಾದ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ನೇತೃತ್ವದಲ್ಲಿ ದಕ್ಷಿಣ ಏಷ್ಯಾದಲ್ಲಿ ಒಂದು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಿದ್ದ ಕಂಕನಾಡಿ ಪೊಲೀಸ್ ಸ್ಟೇಷನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹರೀಶ್ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಹರೀಶ್ ಅವರು ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕು ಗಾಯನ ಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ಬುಧವಾರ
ಪಡನ್ನಾಕ್ಕಾಡ್ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಪಳಯ ಕಡಪ್ಪುರಂ ಮೂಲದ ಆಶಿಕ್ ಮತ್ತು ತನ್ವೀರ್ ಎಂದು ಗುರುತಿಸಲಾಗಿದೆ. ರಾತ್ರಿ 9.00 ರ ಸುಮಾರಿಗೆ ಈ ಘಟನೆ ನಡೆದಿದೆ. ಕಾಞಂಗಾಡ್ ನಿಂದ ಬರುತ್ತಿದ್ದ ಟ್ರಕ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಅಲ್ಲದೆ
ಬೆಳ್ತಂಗಡಿ; ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಇವರಿಗೆ ಧರ್ಮಸ್ಥಳ ಗ್ರಾಮದ ಸ.ನಂ.61/1ಎರಲ್ಲಿ ಸೆಕಾರದಿಂದ ಮಂಜೂರಾಗಿದ್ದ 7.59 ಎಕ್ರೆ ಜಮೀನು ಮಂಜೂರಾತಿ ಆದೇಶವನ್ನು ರದ್ದು ಪಡಿಸಿಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯವು ಆದೇಶ ನೀಡಿದೆ. ದಾಖಲೆಗಳ ಮತ್ತು ಕಾನೂನಿನ ಆಧಾರದಲ್ಲಿ ಜಮೀನು ಮಂಜೂರಾಗಿರುವುದನ್ನು ರದ್ದುಪಡಿಸಿ 2025 ಜ.21 ರಂದು ಆದೇಶ ನೀಡಿದ್ದು,