ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಉಡುಪಿ ಶ್ರೀ ಶೀರೂರು ಮೂಲ ಮಠ ದಲ್ಲಿ" ರಾಮನವಮಿ"ಯ ಪ್ರಯುಕ್ತ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ದೀಪ ಬೆಳಗಿಸಿ ಉದ್ಘಾಟಿಸಿದರು. ದಿವಾನರಾದ ಉದಯ ಕುಮಾರ ಸರಳತ್ತಾಯ,ಪಾರುಪತ್ಯದಾರರಾದ ಶ್ರೀಶ ಭಟ್ ಕಡೆಕಾರ್ ಉಪಸ್ಥಿತರಿದ್ದರು.

ಮಂಗಳೂರು; ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್. ಪದ್ಮರಾಜ್‌ ಅವರು ಚುನಾವಣಾ ಅಧಿಕಾರಿಗಳಿಗೆ ತಮ್ಮ ನಾಮ ಪತ್ರವನ್ನು ಸಲ್ಲಿಸಿದ್ದಾರೆ. ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಬೃಹತ್ ಮೆರವಣಿಗೆ ನಡೆಸಿ ತಮ್ಮ ಉಮೇದ್ವಾರಿಕೆಯನ್ನು ಸಲ್ಲಿಸಿದ್ದಾರೆ. ಮೆರವಣಿಗೆ ಆರಂಭಕ್ಕೂ ಮೊದಲು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಾಮಪತ್ರಕ್ಕೆ ಪೂಜೆ

ಬಂಟ್ವಾಳ: ಮಾ 31. ವಂಚನೆ ಆರೋಪ ಎದುರಿಸುತ್ತಿದ್ದ ಯುವಕನೋರ್ವನ ಮೃತದೇಹ ಬಂಟ್ವಾಳದ ವಾಮದಪದವಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವಕನದ್ದು ಆತ್ಮಹತ್ಯೆ ಎನ್ನಲಾಗುತ್ತಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ಯುವಕನ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ವಾಮದಪದವು ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ ಆತ್ಮಹತ್ಯೆ ಮಾಡಿಕೊಂಡ ಯುವಕ. ಪದ್ಮನಾಭ ಸಾಮಂತನ ವಿರುದ್ಧ ಕಳೆದರಡು ದಿನಗಳ

ಮಂಗಳೂರು: ನಗರದ ಮುಡಿಪು ಸಮೀಪ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಕಡವಿನಬಳಿ ಸಮೀಪದ ನೇತ್ರಾವತಿ ನದಿಯಲ್ಲಿ ತಾಯಿ ಹಾಗೂ ಒಂದು ವರ್ಷದ ಮಗುವಿನ ಮೃತದೇಹ ರಾತ್ರಿ ಪತ್ತೆಯಾಗಿದೆ.‌ ತಾಯಿಯು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೈದಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಮೃತ ಮಹಿಳೆಯನ್ನು ನಾಗರಾಜ್ ಎಂಬವರ ಪತ್ನಿ ಚೈತ್ರಾ( 30) ಎಂದು

ಮಂಗಳೂರು:ಮಾ .28: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಸೀಫುಡ್ ಫ್ಯಾಕ್ಟರಿಯಲ್ಲಿ ಗುರುವಾರ ಮಾ.28ರಂದು ಇಂದು ಬೆಳಗ್ಗೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಅವಘಡದಿಂದ ಬೈಕಂಪಾಡಿಯಲ್ಲಿರುವ ಸೀ ಫುಡ್ ಫ್ಯಾಕ್ಟರಿ ಸಂಪೂರ್ಣ ಭಸ್ಮವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳುವುದನ್ನ ತಪ್ಪಿಸಿದರು. ಬೆಂಕಿಯಿಂದ ಹಾನಿಗೊಳಗಾದ ಪ್ರಮಾಣವನ್ನು

ಬೆಳ್ತಂಗಡಿ:ಮಾ,26: ತನ್ನ 9 ತಿಂಗಳ ಮಗುವಿನೊಂದಿಗೆ ತಾಯಿ ಸಹಿತ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತ್ತಡ್ಕದಲ್ಲಿ ನಡೆದಿದೆ. ಕಳೆಂಜ ಗ್ರಾಮದ ಕಾರ್ಯತ್ತಡ್ಕ ನಿವಾಸಿ ವೆಂಕಪ್ಪ ಗೌಡರ ಪತ್ನಿ ಜಯಶ್ರೀ (29) ಹಾಗೂ ನವರ ಪುತ್ರಿ ರುಷಿಕಾ( 9 ತಿಂಗಳು) ನಾಪತ್ತೆಯಾದವರು. ಮಾ.22 ರಂದು ರಾತ್ರಿ ಜಯಶ್ರೀ ರೂಮಿನಲ್ಲಿ

ಉಡುಪಿ, ಮಾ.26: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ(Bramavara) ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ನಡೆದಿದೆ. ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಮೃತ ರ್ದುದೈವಿಗಳು. ಮೀನು ಹಿಡಿಯಲೆಂದು ಇಂದು(ಮಾ.26) ಬೆಳಿಗ್ಗೆ ನಾಗರ

ತುಮಕೂರು, ಮಾ.23: ತುಮಕೂರು(Tumakuru)ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಮೂವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದವರು ಎಂದು ತಿಳಿದು ಬಂದಿದ್ದು, ಇಸಾಕ್(56), ಸಾಹುಲ್(45) ಹಾಗೂ ಇಮ್ತಿಯಾಜ್(34) ಮೃತರು.  ಇದೀಗ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸುತ್ತಿದ್ದು, ಬಳಿಕ ಪೊಲೀಸರು ಕುಟುಂಬಸ್ಥರಿಗೆ ಮೃತದೇಹಗಳನ್ನು

ಮ೦ಗಳೂರು:ಸೌದಿ ಅರೇಬಿಯಾದ ತಾಯಿಫ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಹಳೆಯಂಗಡಿ ಮೂಲದ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಕತಾರ್ ನಿಂದ ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುತ್ತಿದ್ದ ಹಳೆಯಂಗಡಿ ಮೂಲದ ದಂಪತಿಗಳು ಹಾಗೂ ನಲ್ವತು ದಿನದ ಹಸುಗೂಸು ಸೇರಿದಂತೆ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಕಾರಿನಲ್ಲಿದ್ದ ಇನ್ನೊಂದು ಮಗು