ತುಮಕೂರು, ಮಾ.23: ತುಮಕೂರು(Tumakuru)ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಮೂವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದವರು ಎಂದು ತಿಳಿದು ಬಂದಿದ್ದು, ಇಸಾಕ್(56), ಸಾಹುಲ್(45) ಹಾಗೂ ಇಮ್ತಿಯಾಜ್(34) ಮೃತರು. ಇದೀಗ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸುತ್ತಿದ್ದು, ಬಳಿಕ ಪೊಲೀಸರು ಕುಟುಂಬಸ್ಥರಿಗೆ ಮೃತದೇಹಗಳನ್ನು
ಮ೦ಗಳೂರು:ಸೌದಿ ಅರೇಬಿಯಾದ ತಾಯಿಫ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಹಳೆಯಂಗಡಿ ಮೂಲದ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಕತಾರ್ ನಿಂದ ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುತ್ತಿದ್ದ ಹಳೆಯಂಗಡಿ ಮೂಲದ ದಂಪತಿಗಳು ಹಾಗೂ ನಲ್ವತು ದಿನದ ಹಸುಗೂಸು ಸೇರಿದಂತೆ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಕಾರಿನಲ್ಲಿದ್ದ ಇನ್ನೊಂದು ಮಗು
ಮೂಡುಬಿದ್ರೆ:ಮಾ.15: ಕಲ್ಲಮುಂಡ್ಕೂರು ಸರ್ಕಾರಿ ಅನುದಾನಿತ ಶಾಲೆಯ ಅಧ್ಯಾಪಕರೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ಆರೋಪದಲ್ಲಿ ಪ್ರಕರಣ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಶಾಲೆಯ ಸಹ ಅಧ್ಯಾಪಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಗುರುವ ಮೊಗೇರಾ ಎಂದು ಗುರುತಿಸಲಾಗಿದೆ. ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಅಧ್ಯಾಪಕ ಗುರುವ ಮೊಗೇರಾ ಅವರು
ದಕ್ಷಿಣ ಕನ್ನಡ, ಮಾ.14: ಕಳೆದ 2023 ಡಿಸೆಂಬರ್ 24 ರಂದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತರ್ಚಿಹಾಳ ಗ್ರಾಮದ ಮಲ್ಲಪ್ಪನವರ ಎಂಬುವವರ ಪುತ್ರ ಮನೋಜ್ ಎಂಬಾತ ಜಿಲ್ಲೆಯ ಮೂಡಬಿದ್ರೆಯಲ್ಲಿರುವ(Mudbidri)ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಾಸ್ಟೇಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಇದರ ಬೆನ್ನಲ್ಲೇ ಇದೀಗ ಮತ್ತೊಬ್ಬ ವಿದ್ಯಾರ್ಥಿ ಕೋಲಾರ ಮೂಲದ ಸಂಜಯ್ ಭುವನ್ (16)
ಸುಳ್ಯ:ಮಾ,10:ಗೋಬಿ ಮಂಚೂರಿ ಖಾದ್ಯದ ಬಗ್ಗೆ ಪರೀಕ್ಷೆ ನಡೆಸುವಂತೆ ಹೇಳಲಾಗಿತ್ತು. ಅದರಂತೆ ಪರೀಕ್ಷೆ ನಡೆಸಲಾಗಿದ್ದು, ವರದಿಯನ್ನು ಪರಿಶೀಲನೆ ನಡೆಸಿ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದನ್ನು ಸೋಮವಾರ ತಿಳಿಸುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲೂ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ನಿಷೇಧ
ಧರ್ಮಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳದ 60ವರ್ಷ ಪ್ರಾಯದ ಲತಾ ಕಳೆದ 50ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು. ಇಂದು ಶಿವರಾತ್ರಿಯಂದು ಧರ್ಮಸ್ಥಳದ ಆನೆ ಶಿವೈಕ್ಯವಾಗಿದೆ. ಲತಾ ಹೆಸರಿನ ಆನೆ ಇಂದು ಮೃತಪಟ್ಟಿದೆ. ಧರ್ಮಸ್ಥಳ ಧರ್ಮಾಧಿಕಾರಿಗಳ ಅಚ್ಚುಮೆಚ್ಚಿನ ಆನೆ ಭಕ್ತಾದಿಗಳಿಗೂ ಯಾವುದೇ ತೊಂದರೆ ನೀಡದೆ ಏನನ್ನೂ ಅಪೇಕ್ಷಿಸದೇ ಇದ್ದ ಲತಾ ಶುಕ್ರವಾರ
ಉಡುಪಿ:ಮಹತೋಭಾರ ಉಡುಪಿಯ ಅಜ್ಜಯ್ಯ ಎಂದೇ ಖ್ಯಾತಿಯ ಶ್ರೀಮದನಂತೇಶ್ವರ ದೇವರ ವಾರ್ಷಿಕ ಉತ್ಸವಕ್ಕೆ ಪರ್ಯಾಯ ಶ್ರೀಪುತ್ತಿಗೆ ಉಭಯ ಶ್ರೀಪಾದರಿಂದ ದೇವತಾ ಸನ್ನಿಧಿಯಲ್ಲಿ ಪ್ರಾರ್ಥನೆ ಮೂಲಕ ಚಾಲನೆ, ಅಂಕುರಾರೋಪಣೆಕಾರ್ಯಕ್ರಮವು ಗುರುವಾರದ೦ದು ಸಾಯ೦ಕಾಲ ನೆರವೇರಿಸಲಾಯಿತು.
ಮಂಗಳೂರು: ಕಡಬದ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ಕಡಬದಲ್ಲಿ ಸೋಮವಾರ ಕಿಡಿಗೇಡಿಯಿಂದ ಆ್ಯಸಿಡ್ ದಾಳಿಗೊಳಗಾಗಿ ನಗರದ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ
ಮಂಗಳೂರು:ಮಾ.5: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆ್ಯಸಿಡ್ ದಾಳಿ ಸಂತ್ರಸ್ತ ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಮಂಗಳವಾರ ಭೇಟಿ ನೀಡಿ ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಆ್ಯಸಿಡ್ ದಾಳಿ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ತಕ್ಷಣ ತಲಾ 4