ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮಂಗಳೂರು: ಕರಾವಳಿ ಭಾಗದ ಕನ್ನಡದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ (64ವ) ಮಂಗಳೂರಿನಲ್ಲಿ ಶುಕ್ರವಾರ ನಸುಕಿನ ಜಾವ ನಿಧನ ಹೊಂದಿದ್ದಾರೆ. ಪತ್ರಕರ್ತ, ರಂಗಭೂಮಿ ಹಾಗೂ ಚಲನಚಿತ್ರ ನಟ, ಕಾರ್ಯಕ್ರಮ ನಿರೂಪಕರಾಗಿ ಹೆಸರು ಮಾಡಿದ್ದ ಮನೋಹರ ಪ್ರಸಾದ್ ಸ್ವತಃ ಉತ್ತಮ ಕತೆಗಾರ ಹಾಗೂ ಕವಿ ಕೂಡ ಆಗಿದ್ದರು. 'ಉದಯವಾಣಿ' ಪತ್ರಿಕೆಯ ಮಂಗಳೂರು ಬ್ಯೂರೋದ

ಮಂಗಳೂರು: ಆಳ ಸಮುದ್ರ ಮೀನುಗಾರಿಕೆಯಲ್ಲಿ ರಿಬ್ಬನ್ ಮೀನು ಅಥವಾ ಪಾಂಬೋಲ್ ಮೀನು ಹಿಡಿಯುವುದಕ್ಕೆ ಸಂಬಂಧಿಸಿದಂತೆ ಘರ್ಷಣೆ ಉಂಟಾಗಿರುವುದು ಅಂತಾರಾಜ್ಯ ವಿವಾದಕ್ಕೆ ಕಾರಣವಾಗಿದೆ. ತಮಿಳುನಾಡಿನ ಮೀನುಗಾರರು ಮಂಗಳೂರು ಬೋಟ್ ಗಳ ಮೇಲೆ ದಾಳಿ ನಡೆಸಿದ್ದಾರೆ. ಅಕ್ರಮ ಮೀನುಗಾರಿಕೆ ಆರೋಪ: ತಮಿಳುನಾಡಿನ 18 ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ ಮೀನುಗಳ ಸಂಖ್ಯೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ, ಊಟಕ್ಕೆ ಬಳಕೆ

ಮಂಗಳೂರು, ಫೆ 27 : ಕರ್ನಾಟಕ ಜಾನಪದ ಪರಿಷತ್, ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಇವರ ಸಹಯೋಗದೊಂದಿಗೆ ಜಾನಪದ ಕಡಲೋತ್ಸವ ಕಾರ್ಯಕ್ರಮ ಪಣಂಬೂರು ಬೀಚ್‍ನಲ್ಲಿ ಮಾರ್ಚ್ 1 ರಿಂದ 3ರ ವರೆಗೆ ನಡೆಯಲಿದೆ. ಮಾರ್ಚ್ 1 ರಂದು ಸಂಜೆ 6.30ಕ್ಕೆ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಹೋಟ್ ಕಾರ್ಯಕ್ರಮ

ಮಂಗಳೂರು: ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ(86) ನಿಧನರಾಗಿದ್ದಾರೆ. ಮೂಲತ ಕಾಸರಗೋಡಿನ ಕೂಡ್ಲುವಿನವರಾದ ಕೂಡ್ಲು ತಿಮ್ಮಪ್ಪ ಗಟ್ಟಿ ಪ್ರಾಧ್ಯಾಪಕರಾಗಿ ದುಡಿದವರು. ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದರು. ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ 22 ಜುಲೈ 1938ರಲ್ಲಿ ಜನನ. ತಂದೆ ಧೂಮಪ್ಪ ಗಟ್ಟಿ.

ಪಡುಬಿದ್ರಿ: ಫೆ 18: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ನೂತನ ನವೀಕೃತ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಭಾನುವಾರ ಪೂರ್ವಾಹ್ನ 10 ಗಂಟೆಗೆ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ವೈ ಸುಧೀರ್‌ ಕುಮಾರ್  ವಹಿಸಿದ್ದರು. ಹೆಜಮಾಡಿ ಪೇಟೆಯಿಂದ ಹೆಜಮಾಡಿ ಶಾಖೆಯಯವರೆ ಗಣ್ಯರನ್ನು ಮೆರವಣಿಗೆಯಲ್ಲಿ ಕರೆ

ಮಂಗಳೂರು: ಫೆ 12, ಲೋಕಸಭಾ ಚುನಾವಣೆಗೆ ಸಿದ್ಧತೆಗಳು ಮುಂದುವರೆದಿದ್ದು, ಈ ತಿಂಗಳ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷವೂ ಈ ಬಾರಿ ರಾಜ್ಯದಲ್ಲಿ ೨೦ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ, ಇದು

ಸುಳ್ಯ,:ಫೆ 09. ಯಾರೂ ಇಲ್ಲದ ಸಂದರ್ಭ ಬಳಸಿ, ಹಾಡುಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಸಹಿತ ಹಣ ಕಳ್ಳತನ ನಡೆಸಿದ ಘಟನೆ ಸಂಪಾಜೆಯ ಬೈಲಿನಲ್ಲಿ ಫೆ.08 ರಂದು ನಡೆದಿದೆ. ಸಂಪಾಜೆ ಬೈಲಿನ ಕನ್ಯಾನ ವಿಜಯ ಅವರ ಮನೆಗೆ ಕಳ್ಳರು ನುಗ್ಗಿ ಕಳ್ಳತನ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಅವರು ಬೆಳಿಗ್ಗೆ ಕಲ್ಲುಗುಂಡಿಯ

ಮಂಗಳೂರು:ಫೆ 04.ನಿಗೂಢ ಕೆಲಸಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಅನುಮಾನಾಸ್ಪ ನಡೆ ಬಗ್ಗೆ ಖಚಿತ ಮಾಹಿತಿ ಪಡೆದ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮ ಸಿಮ್​ಗಳ ಸಾಗಾಟ ದಂಧೆ ಬಗ್ಗೆ ಬೆಳಕಿಗೆ ಬಂದಿದೆ.ಬಂಧಿತ ಆರೋಪಿಗಳಾದ ರಮೀಝ್

ಬೆಳ್ತಂಗಡಿ, ಫೆ 04, ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದಾಗಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರು ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಉಜಿರೆ ಸಮೀಪ ಭಾನುವಾರ ಮಧ್ಯಾಹ್ನ ನಡೆದಿದೆ. ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದ