ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಮಂಗಳೂರು: ಹಾಸನ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಯಾರ್ಡ್ ಮರುನಿರ್ಮಾಣಕ್ಕೆ ಅನುಕೂಲವಾಗಲು ನಾಳೆ ಡಿಸೆಂಬರ್ 14 ರಿಂದ 22ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವೆ ಹಲವು ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ರದ್ದುಗೊಳಿಸಿದೆ. ಡಿಸೆಂಬರ್ 11 ರಂದು ಪ್ರಧಾನ ಮುಖ್ಯ ಕಾರ್ಯನಿರ್ವಾಹಕ ವ್ಯವಸ್ಥಾಪಕರು, ರೈಲ್ವೆ ಸಚಿವಾಲಯವು ಡಿಸೆಂಬರ್ 14 ರಿಂದ ಡಿಸೆಂಬರ್ 18

ಮಂಗಳೂರು: ಡಿ 5: ನಿಷೇಧಿತ ಮಾದಕ ವಸ್ತುವಾದ ಮೆತಫಿಟಮೈನ್ ಮತ್ತು ಎಲ್‌ಎಸ್‌ಡಿ ಸ್ಟ್ಯಾಂಪ್‌ ಡ್ರಗ್ಸ್‌ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅರೋಪಿಗಳನ್ನು ಶಿಶಿರ ದೇವಾಡಿಗ ಹಾಗೂ ಶುಶಾನ್‌ ಎಲ್‌ ಎಂದು ಗುರುತಿಸಲಾಗಿದೆ. ಆರೋಪಿಗಳು ಉಳ್ಳಾಲ ತಾಲೂಕು ಪೆರ್ಮನ್ನೂರು ಗ್ರಾಮದ ಸಂತೋಷನಗರದ ಸಾರ್ವಜನಿಕ ರಸ್ತೆ ಬದಿಯಲ್ಲಿ

ಮಂಗಳೂರು: ನಾಲ್ಕು ತಿಂಗಳ ಮಗುವನ್ನು ನೀರು ತುಂಬಿದ ಪ್ಲಾಸ್ಟಿಕ್ ಟಬ್ ನಲ್ಲಿ ಮುಳುಗಿಸಿ ಕೊಂದ ತಾಯಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ. ಗುಜ್ಜರಕೆರೆಯ ಮುಹಮ್ಮದ್ ಉನೈಸ್ ಎಂಬವರ ಪತ್ನಿ ಫಾತಿಮಾ ರುಕಿಯಾ (23) ಮತ್ತು ನಾಲ್ಕು ತಿಂಗಳ ಮಗು ಅಬ್ದುಲ್ಲಾ ಮೃತರು ಎಂದು ಗುರುತಿಸಲಾಗಿದೆ. ಫಾತಿಮಾ ರುಕಿಯಾ

ಮಂಗಳೂರು:ನ 28: ಭಿನ್ನ ಕೋಮಿನ ಯುವಕ-ಯುವತಿ ಕೆಲಸ ಬಿಟ್ಟು ಜತೆಯಾಗಿ ಸ್ಕೂಟರ್‌ ನಲ್ಲಿ ಹೋಗುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡು ನೈತಿಕ ಪೊಲೀಸ್‌ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕಲ್ ಎಂದು ಗುರುತಿಸಲಾಗಿದೆ. ಪ್ರಕರಣದ ವಿವರ: ಮಂಗಳೂರು ಮಂಕಿ

ಕೊಲ್ಲಂ:ನ 28 : ಕೇರಳದ ಕೊಲ್ಲಂನಿಂದ ಅಪಹರಣಗೊಂಡಿದ್ದ ಆರು ವರ್ಷದ ಬಾಲಕಿ ಅಬಿಗೈಲ್ ಸಾರಾ ರೆಜಿ ಪತ್ತೆ ಸುರಕ್ಷಿತವಾಗಿ ಪತ್ತೆಯಾಗಿದ್ದಾಳೆ. ಅಪಹರಣಕಾರರು ಕೊಲ್ಲಂ ಆಶ್ರಮದ ಮೈದಾನದಲ್ಲಿ ಮಗುವನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಬಾಲಕಿಯನ್ನು ಪೊಲೀಸರು ಸದ್ಯ ನಗರ ಪೊಲೀಸ್ ಆಯುಕ್ತರ ಕೇಂದ್ರ ಕಚೇರಿಗೆ ಸ್ಥಳಾಂತರಿಸಿದ್ದಾರೆ. ತನ್ನ

ಮಂಗಳೂರು: ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಸೋತಿದ್ದರಿಂದ ಖಿನ್ನತೆಗೆ ಜಾರಿದ್ದ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪುತ್ತೂರಿನ ಸಂಪ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು ಮೃತ ವಿದ್ಯಾರ್ಥಿನಿಯನ್ನು 17 ವರ್ಷದ ನಿಶಾ ಎಂದು ಗುರುತಿಸಲಾಗಿದೆ. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ನಿಶಾ, ಎರಡು

ತುಮಕೂರು: ಬೋರ್ ವೆಲ್ ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ 33 ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಭಾನುವಾರ ನಡೆದಿದೆ. ಮೃತರನ್ನು ಬಜ್ಪೆ

ಧಾರವಾಡ:ನ 25: ಗೆಳೆಯರೊಂದಿಗೆ ಸೇರಿ ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಸ್ಥಳೀಯ ನಿವಾಸಿ ಅಶೋಕ ಶಿನ್ನೂರ ಅವರ ಪುತ್ರ, ರಾಜೀವ ಗಾಂಧಿ ಶಾಲೆಯಲ್ಲಿ ಎ‌ಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಶ್ರೇಯಸ್ ಶಿನ್ನೂರ(16 ವರ್ಷ) ಎಂದು ಗುರುತಿಸಲಾಗಿದೆ. ಸ್ನೇಹಿತನ

ಮಂಗಳೂರು: ಜಮ್ಮು- ಕಾಶ್ಮೀರದ ರಚೌರಿ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಹಾಗೂ ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಮೂಲದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್‌ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. 28ರ ಹರೆಯದ 63ನೇ ರಾಷ್ಟ್ರೀಯ ರೈಫಲ್ಸ್ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್ ಮಂಗಳೂರಿನಲ್ಲಿಯೇ ಹುಟ್ಟಿ ಬಾಲ್ಯ

ಮಂಗಳೂರು:ನ.22 : ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ರಾಜ್ಯದ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ನಿಗಮ, ಮಂಡಳಿಗಳ ಅಧ್ಯಕ್ಷರ ನೇಮಕಾತಿ, ಲೋಕಸಭಾ ಚುನಾವಣೆ ಕಡೆ ಗಮನ ಹರಿಸುತ್ತಿದೆ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರನವರು ಆಕ್ಷೇಪಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ತಯಾರಿ