ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಮಂಗಳೂರು: ಕಳೆದ ಕೆಲವು ದಿನಗಳಿಂದ ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬ್ಯಾಂಕ್ ಲಾಕರ್‌ಗಳಿಗೆ ಬೇಡಿಕೆ ಹೆಚ್ಚಿದ್ದು, ಈ ಪ್ರದೇಶದಲ್ಲಿ ಮತ್ತೆ ಮನೆಗಳ್ಳತನ ಮತ್ತು ಕಳ್ಳತನ ಪ್ರಕರಣಗಳು ನಡೆಯುತ್ತಿರುವುದು ಇದಕ್ಕೆ ಕಾರಣ ಎನ್ನಲಾಗಿದೆ. ಹೊಸ ಲಾಕರ್‌ಗಳನ್ನು ತೆರೆಯುವುದು ಮತ್ತು ವಿಚಾರಣೆಯ ಜೊತೆಗೆ, ಗ್ರಾಹಕರಿಂದ ಈಗಿರುವ ಲಾಕರ್‌ಗಳ ಕಾರ್ಯಾಚರಣೆಯೂ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.

ಉಪ್ಪಿನಂಗಡಿ: ಜು. 13:ಬೈಕ್‌ ಹಾಗೂ ಪಿಕಪ್‌ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ಶುಕ್ರವಾರ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಕೊಲ್ಪೆಯಲ್ಲಿ ನಡೆದಿದೆ. ಮಂಗಳೂರು ಕೋಡಿಕ್ಕಲ್‌ ನಿವಾಸಿ ಪ್ರಣಮ್‌ ಕೋಟ್ಯಾನ್‌ (23) ಮೃತ ದುರ್ದೈವಿ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ

ಬಂಟ್ವಾಳ:ಜು 13ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ‌ ಪ್ರಮಾಣ ಕೊಂಚ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1ಮೀ.ನಷ್ಟಿದೆ. ನೇತ್ರಾವತಿ ನದಿಯಲ್ಲಿ 8 ಮೀ. ಅಪಾಯಕಾರಿ ಮಟ್ಟವಾಗಿದ್ದು, 8.5ಮೀ. ತಲುಪಿದರೆ ಪಾಣೆಮಂಗಳೂರಿನ ಆಲಡ್ಕ ಭಾಗದಲ್ಲಿ ಪ್ರವಾಹದ ನೀರು ಮನೆಯೊಳಗೆ ನುಗ್ಗುತ್ತದೆ. ಮಲೆನಾಡು ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿರುವ ಪರಿಣಾಮ ನೀರಿನ ಮಟ್ಟ ಹೆಚ್ಚಳಗೊಂಡಿದೆ. ತುಂಬೆ

ಮಂಗಳೂರು, ಜು 12; ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಕಚೇರಿಯನ್ನು ಜುಲೈ 12 ರಂದು ಶುಕ್ರವಾರ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಆರ್‌ಎಸ್‌ಎಸ್‌ನ ಪ್ರಮುಖರಾದ ಕಲ್ಲಡ್ಕ ಪ್ರಭಾಕರ ಭಟ್, ತುಳುನಾಡು ಹಿಂದುತ್ವದ ನಾಡು, ಈ ಸ್ಥಳದಲ್ಲಿ ನಾವು ದೈವವನ್ನು ಆರಾಧಿಸುತ್ತೇವೆ, ದೇವರ ದಯೆ ಮತ್ತು

ಮಂಗಳೂರು, ಜುಲೈ 11: ನಗರದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ  ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಸ್​ಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿಗೆ  ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಲಾಗಿದೆ.

ಮಂಗಳೂರು:ಜುಲೈ 10, ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜತೆ ಇರುವುದು ಪತ್ತೆಯಾಗಿದೆ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಯುವತಿ ಕಾಣೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ  ದೂರು ದಾಖಲಾಗಿತ್ತು. ಈ ಪ್ರಕರಣದ ಕಾರ್ಯಚರಣೆ ನಡೆಸಿದ ಪಾಂಡೇಶ್ವರ ಠಾಣಾ ಪೊಲೀಸರು, ನಾಪತ್ತೆಯಾಗಿದ್ದ ಯುವತಿಯನ್ನು ಪತ್ತೆ ಮಾಡಿದ್ದಾರೆ. ಆದ್ರೆ,

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಅಂಗಡಿಗೆ ತೆರಳಿದ್ದ 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಟೈಲರೊಬ್ಬನನ್ನು ಬಂಟ್ವಾಳ ಪೋಲೀಸರು ಬಂಧಿಸಿರುವ ಘಟನೆ ಸಂಭವಿಸಿದೆ ಬಂಧಿತ ಆರೋಪಿಯನ್ನು ಬ್ರಹ್ಮರಕೂಟ್ಲು ನಿವಾಸಿಯಾಗಿರುವ ಧರ್ಮರಾಜ್ ಯಾನೆ ಧರ್ಮ (40) ಗುರುತಿಸಲಾಗಿದೆ. ವೃತ್ತಿಯಲ್ಲಿ ಟೈಲರ್ ಕೆಲಸ ಮಾಡಿಕೊಂಡಿರುವ ಈತ, ತನ್ನ

ಮಂಗಳೂರು: ನಿನ್ನೆ ಬಂಧನವಾಗಿದ್ದ ನಗರದಲ್ಲಿ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದ ಚಡ್ಡಿ ಗ್ಯಾಂಗ್ ಸದಸ್ಯರು ಪೊಲೀಸರ ಕೈಯಿಂದಲೇ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಈ ವೇಳೆ ಪೊಲೀಸರು ಇಬ್ಬರ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ನಿನ್ನೆ(ಮಂಗಳವಾರ) ಚಡ್ಡಿ ಗ್ಯಾಂಗ್‌ನ ನಾಲ್ವರನ್ನು ಸಕಲೇಶಪುರದಲ್ಲಿ ಬಂಧಿಸಿ ಮಂಗಳೂರಿಗೆ

ತಾಲೂಕಿನ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಸಮೀಪದ ನೆಲ್ಯಪಲ್ಕೆ ಎಂಬಲ್ಲಿ ಶನಿವಾರ ಬೀಸಿದ ಗಾಳಿಯ ರಭಸಕ್ಕೆ ವಾಣಿಜ್ಯ ಕಟ್ಟಡದ ಮುಂಭಾಗ ಹಾಕಲಾಗಿದ್ದ ಸಿಮೆಂಟ್ ಶೀಟ್‌ಗಳು ಹಾರಿ ಹೋಗಿವೆ. ಜತೆಗೆ ಎರಡು ಮನೆಗಳ ಮೇಲೆ ಮರದ ದಿಮ್ಮಿಗಳು ಬಿದ್ದು ಛಾವಣಿಗೆ ಹಾನಿಯಾಗಿದೆ. ಗಾಳಿಯ ವೇಗ ಕಡಿಮೆಯಾದಂತೆ ಹೆಚ್ಚಿನ ಹಾನಿಯನ್ನು ತಪ್ಪಿಸಲಾಯಿತು. ನೆಲ್ಯಪಲ್ಕೆಯಲ್ಲಿ ಶನಿವಾರ ಬೆಳಗ್ಗೆಯಿಂದ

ದಕ್ಷಿಣ ಕನ್ನಡ, ಜು.06: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆರಾಯ ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಅದರಂತೆ  ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧಿಸಿ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಪ್ರವಾಸೋದ್ಯಮ ಸಂಬಂಧ