ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಪುತ್ತೂರು:ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರುನಿಂದ ಕೊಚ್ಚಿ ಯುವಕನೊರ್ವನ ಬರ್ಬರ ಹತ್ಯೆ ನಡೆಸಿದೆ. ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್‌ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್‌ ಕಲ್ಲೇಗ ಹತ್ಯೆಯಾದವರು. ಕೆಲ ಗಂಟೆಗಳ ಮೊದಲು ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್‌ ಹಾಗೂ

ಮಣಿಪಾಲ: ನ.7. ಮಣಿಪಾಲ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೋರ್ವಳು ತನ್ನ ಪ್ಲಾಟ್‌ನ 8ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹೆರ್ಗಾ ಗ್ರಾಮದ ಕೃತಿಕಾ ಎಂಬವರ ಮಗಳು ಪ್ರಜ್ಞಾ (13) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಪ್ರಜ್ಞಾ ಕಳೆದ ಕೆಲವು ದಿನಗಳಿಂದ ಮಾನಸಿಕ

ಉಡುಪಿ: ಶ್ರೀ ಪೇಜಾವರಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಪೂರ್ವಾಶ್ರಮದ ತೀರ್ಥರೂಪರೂ , ಹಿರಿಯ ಸಂಸ್ಕೃತ ಮತ್ತು ತುಳು ಭಾಷಾ ವಿದ್ವಾಂಸ ಅಂಗಡಿಮಾರು ಕೃಷ್ಣ ಭಟ್ಟರು ಭಾನುವಾರ ರಾತ್ರಿ ವಯೋಸಹಜ ಅಸ್ವಾಸ್ಥ್ಯದಿಂದ ನಿಧನರಾಗಿದ್ದಾರೆ . (105 ವರ್ಷ) ತುಳು ಭಾಷೆಯ ಸೌರ ಪಂಚಾಂಗವನ್ನು ಅತ್ಯಂತ ಶ್ರದ್ಧೆಯಿಂದ ಅನೇಕ ವರ್ಷಗಳಿಂದ ರಚಿಸಿ ಪ್ರಕಟಿಸುತ್ತಿದ್ದರು

ಮೂಡಿಗೆರೆ:ನ,4.ಧರ್ಮಸ್ಥಳಕ್ಕೆ ಹೊರಟ್ಟಿದ್ದ ಪ್ರವಾಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ.ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು ಐವರು ಗಂಭೀರ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ ಬೆಂಗಳೂರಿನಿಂದ ಹೊರಟ್ಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಇಂದು ಬೆಳಗ್ಗೆ ಸುಮಾರು 4.45 ರ ಹೊತ್ತಿಗೆ ಮೂಡಿಗೆರೆ ತಾಲೂಕಿನ

ಮಂಗಳೂರು:ನ.3: ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಂಡು ಹಲವು ತಿಂಗಳುಗಳೇ ಕಳೆದಿವೆ. ಈ ಬಾರಿಯ ಸರ್ವೆಯಲ್ಲಿ ನೇತ್ರಾವತಿ ಹಾಗೂ ಫಲ್ಗುಣಿ ನದಿಯಲ್ಲಿ ಮರಳು ದಿಬ್ಬಗಳನ್ನು ಹೊಸದಾಗಿ ಗುರುತಿಸಿಲಾಗಿದೆ. ಈ ಕುರಿತ ವರದಿಯನ್ನು ಜಿಲ್ಲಾಡಳಿತದ ಹಂತದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಪೂರೈಸಿ ವರದಿಯನ್ನು ಕೆಸಿಝಡ್‌ಎಂಎ ಗೆ ಕಳುಹಿಸಲಾಗಿದ್ದರೂ ನಿಗದಿತ ಸಮಯದೊಳಗೆ ಸಭೆ ನಡೆಸಿ

ಮೂಡಬಿದಿರೆ:ಅ.31. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಮಿಜಾರುಗುತ್ತು ಆನಂದ ಆಳ್ವ ಇಂದು ಮ೦ಗಳವಾರದ೦ದು ನಿಧನ ಹೊಂದಿದ್ದಾರೆ. 106 ವರ್ಷ ಪ್ರಾಯದ ಆನಂದ ಆಳ್ವ ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರಿಯಾಶೀಲರಾಗಿ ಗುರುತಿಸಿಕೊಂಡಿದ್ದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ

ಮೂಡುಬಿದಿರೆ : ಅ.31.ಹಿರಿಯ ಪತ್ರಕರ್ತ, ಸಾಹಿತಿ, ಸಂಘಟಕ ಶೇಖರ ಅಜೆಕಾರು (54) ಅವರು ಹೃದಯಾಘಾತದಿಂದ ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಕಾರ್ಕಳ ತಾಲೂಕಿನ ಅಜೆಕಾರು ಗ್ರಾಮದ ನಿವಾಸಿಯಾಗಿರುವ ಶೇಖರ ಅಜೆಕಾರು ಅವರು ಮಕ್ಕಳ ಸಾಹಿತ್ಯದ ಕುರಿತು ಹೆಚ್ಚು ಆಸಕ್ತಿ ವಹಿಸಿ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುತ್ತಿದ್ದರು. ಅಲ್ಲದೆ ಗ್ರಾಮೋತ್ಸವದ ಮೂಲಕ ವಿವಿಧ

ಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಸಜೀಪ ಮೂಡ ಗ್ರಾಮದ ಸುಭಾಷ್ ನಗರದ ನಿವಾಸಿ ನೌಸೀನ್ (22) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು

ಉಡುಪಿ:ವಿಜಯದಶಮಿಯಂದು ಮಡಿಕೇರಿ ದಸರಾ ಕಾರ್ಯಕ್ರಮದಲ್ಲಿ ಉಡುಪಿಯ ಭಾರ್ಗವಿ ನೃತ್ಯ ತಂಡ ನಿರ್ದೇಶಕ ಶ್ರೀಕಾಂತ್ ಉಪಾಧ್ಯ ಅವರನ್ನು ಇದೇ ಸಂದಭ೯ ಕನಾ೯ಟಕ ವಿಧಾನಸಭಾಧ್ಯಕ್ಷ ಯು,ಟಿ.ಖಾದರ್, ಸಚಿವರಾದ ಎನ್.ಎಸ್.ಬೋಸರಾಜು, ಮಡಿಕೇರಿ ಶಾಸಕ ಡಾ.ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜ, ಮಡಿಕೇರಿ ದಸರಾ ಸಮಿತಿ ಅಧ್ಯಕ್ಷೆ, ನಗರಸಭೆಯ ಅಧ್ಯಕ್ಷೆ ಅನಿತಾಪೂವಯ್ಯ , ದಸರಾ ಸಾಂಸ್ಕೖತಿಕ

ಮಂಗಳೂರು:ಅ 26: ದುಬೈಯ ಸಲಾವುದ್ದೀನ್ ಎಂಬಲ್ಲಿ ಕರಾವಳಿ ಮೂಲದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ. ಮೃತರನ್ನು ಕೂಳೂರು ಪಂಜಿಮೊಗರು ವಿದ್ಯಾನಗರ ನಿವಾಸಿ ಮುಹಮ್ಮದ್ ಎಂಬವರು ಪುತ್ರ ಅಖ್ತರ್(27) ಎಂದು ಗುರುತಿಸಲಾಗಿದೆ. ಅಖ್ತರ್ ಕಳೆದ 7 ತಿಂಗಳಿನಿಂದ ದುಬೈಯಲ್ಲಿ ದುಡಿಯುತ್ತಿದ್ದರು. ಭಾನುವಾರ ಕರ್ತವ್ಯ ಮುಗಿಸಿ ರೂಮಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ