ಮಂಗಳೂರು, ಡಿಸೆಂಬರ್ 25: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ವಂಚಿಸಿದ ಆರೋಪಿ. 500 ನಕಲಿ
ಮಂಗಳೂರು:ಡಿಸೆಂಬರ್ 20: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6ನೇ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್(55) ಬಂಧಿತ ಆರೋಪಿ. ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನದಲ್ಲಿ ಬಂಧಿಸಲಾಗಿದೆ. ಈತನ ಪತ್ತೆಗಾಗಿ ಎನ್ಐಎ ಅಧಿಕಾರಿಗಳು
ಬಂಟ್ವಾಳ:ಡಿ.19: ಬೆಂಗಳೂರಿನಿಂದ ಮಂಗಳೂರಿಗೆ ಹೂ ತರುತ್ತಿದ್ದ ಟೆಂಪೋ ಟ್ರಾವೆಲರ್ ಪಲ್ಟಿಯಾದ ಘಟನೆ ಫರಂಗಿಪೇಟೆಯಲ್ಲಿ ಗುರುವಾರ ಮುಂಜಾನೆ 7ಗಂಟೆಯ ವೇಳೆ ನಡೆದಿದೆ. ಅಡ್ಯಾರ್ ನಲ್ಲಿ ಕಾರ್ಯಕ್ರಮ ನಿಮಿತ್ತ ಹೂ ಅಲಂಕಾರ ನಡೆಸುವುದಕ್ಕಾಗಿ ಬೆಂಗಳೂರಿನಿಂದ ಅಲಂಕಾರಿಕ ಹೂ ತುಂಬಿಸಿಕೊಂಡು ಹೊರಟಿದ್ದ ಟ್ರಾವೆಲರ್ ಫರಂಗಿಪೇಟೆ ಬರುವಷ್ಟರಲ್ಲಿ ಟಯರ್ ಬ್ಲಾಸ್ಟ್ ಆಗಿ ಘಟನೆ ನಡೆದಿದೆ ಎಂದು
ದಕ್ಷಿಣ ಕನ್ನಡ : ಮಂಗಳೂರು ತಾಲೂಕು ತೆಂಕ ಎಡಪದವು ಗ್ರಾಮದ ಶಿಬ್ರಿಕೆರೆ ಗಣೇಶ್ ಮಿಲ್ ಬಳಿ ಇರುವ ಒಳ ರಸ್ತೆಯಲ್ಲಿ ನಡೆದುಕೊಂಡು ಮಧ್ಯಾಹ್ನ ವೇಳೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯ ಬಳಿ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿ ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋದ ಘಟನೆಗೆ ಸಂಬಂಧಿಸಿ
ಮಂಗಳೂರು:ಡಿ.15: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟೀಯ ಸಂಸ್ಥೆ 2023ನೇ ವರ್ಷದಲ್ಲಿ ರಾಷ್ಟ್ರ ಮಟ್ಟದಲ್ಲಿ ನೀಡುವ 'ಮೆಸೇಂಜರ್ ಆಫ್ ಪೀಸ್ ಸ್ಟಾರ್ ಅವಾರ್ಡ್' ಪ್ರಶಸ್ತಿಗೆ ಕರ್ನಾಟಕದ 8 ಮಂದಿ ಆಯ್ಕೆಯಾಗಿದ್ದು, ಈ ಪೈಕಿ ಮೂವರು ದ.ಕ. ಜಿಲ್ಲೆಯವರು. ವಯಸ್ಕರ ವಿಭಾಗದಲ್ಲಿ ದ.ಕ. ಜಿಲ್ಲಾ ಸ್ಕೌಟ್ಸ್-ಗೈಡ್ಸ್ ಕೋಶಾಧಿಕಾರಿ ನವೀನ್ ಚಂದ್ರ ಅಂಬೂರಿ,
ಮಂಗಳೂರು:ಡಿ. 15: ಅಯ್ಯಪ್ಪ ಸ್ವಾಮಿಯ ಭಕ್ತರಿಗೆ ಸ್ವಾಮಿಯ ಮಹಿಮೆಯ ಪ್ರತ್ಯಕ್ಷ್ಯ ದರ್ಶನವಾಗುತ್ತದೆ ಎನ್ನುವ ಹಲವು ಸುದ್ಧಿಗಳು ಎಲ್ಲೆಡೆ ಕೇಳಿ ಬರುತ್ತದೆ. ಇದೇ ಕಾರಣಕ್ಕಾಗಿಯೇ ಅಯ್ಯಪ್ಪ ಸ್ವಾಮಿಯ ಪ್ರಮುಖ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತೆ. ಇಂತಹದೊಂದು ಪವಾಡ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ
ಮಂಗಳೂರು: ಯಕ್ಷಗಾನದ ಮೊದಲ ಮಹಿಳಾ ಭಾಗವತರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ, ತಮ್ಮ ಕಂಠ ಸಿರಿಯಿಂದಲೇ ಕರಾವಳಿಯಲ್ಲಿ ಮನೆಮಾತಾಗಿದ್ದ ಲೀಲಾವತಿ ಬೈಪಾಡಿತ್ತಾಯ (77) ಅವರು ಶನಿವಾರ ನಿಧನರಾಗಿದ್ದಾರೆ. ವೃತ್ತಿನಿರತ ಯಕ್ಷಗಾನ ತಂಡಗಳೊಂದಿಗೆ ತಿರುಗಾಟ ನಡೆಸಿ ಇತಿಹಾಸ ನಿರ್ಮಿಸಿದ ಲೀಲಾವತಿ ಬೈಪಾಡಿತ್ತಾಯ ಅವರು ಕ್ಷೇತ್ರದ ಮಹಿಳೆಯರ ಹಾದಿ ಹಿಡಿದವರು. ಅವರ ಗಮನಾರ್ಹ 40 ವರ್ಷಗಳ
ವಿಟ್ಲ: ಡಿ.13,ಗಂಡ ಹೆಂಡತಿ ಜಗಳದಲ್ಲಿ ಹೆಂಡತಿಯನ್ನು ದೂಡಿ ಹಾಕಿದ ಪರಿಣಾಮ ಗಂಭೀರ ಗಾಯಗೊಂಡ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೇವಿನಗರ ನಿವಾಸಿ ಲೀಲಾ (45) ಎಂದು ಗುರುತಿಸಲಾಗಿದೆ. ಪ್ರತಿದಿನ ಕುಡಿದು ಬಂದು ಗಲಾಟೆ ಮಾಡುತಿದ್ದ ಸಂಜೀವ ಮೊನ್ನೆ ಕೂಡ ಗಲಾಟೆ ಮಾಡಿ
ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದವರು ತೀವ್ರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ಡಿಸೆಂಬರ್ 12ರಂದು ಸಂಭವಿಸಿದೆ. ಉಡುಪಿ ನೋಂದಣಿಯ ಕಾರು ಅಪಘಾತಕ್ಕೀಡಾಗಿದದು, ಕಾರಿನಲ್ಲಿದ್ದವರು ಉಡುಪಿ ಮೂಲದವರೆಂದು ತಿಳಿದುಬಂದಿರುತ್ತದೆ. ಗಾಯಾಳುಗಳನ್ನು ಸ್ಥಳೀಯರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪ ವಾಟ್ಸ್ ಆ್ಯಪ್ ಮತ್ತು ಟೆಲಿಗ್ರಾಂ ಲಿಂಕ್ ಮೂಲಕ ಕೆಲಸದ ಆಮಿಷ ತೋರಿಸಿ ಆನ್‌ಲೈನ್ ಮೂಲಕ ಕೊಣಾಜೆ ನಿವಾಸಿಯಿಂದ ಹಣ ಪಡೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು ಜಮ್ಮು ಕಾಶ್ಮೀರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿಯಲಾಗಿದೆ. ಬೆಂಗಳೂರಿನ ಜಲಸಂದ್ರ