ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಸುಳ್ಯ:ಏ 14. ಮಾಣಿ - ಮೈಸೂರು ರಾ.ಹೆದ್ದಾರಿಯ ಸಂಪಾಜೆ ಬಳಿ ಕೆ.ಎಸ್.ಆರ್ ಟಿ. ಸಿ ಹಾಗೂ ಕಾರೊಂದರ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ಭೀಕರ ಘಟನೆ ನಡೆದಿದೆ. ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿ ನಗರದಲ್ಲಿ ದಾಖಲಾಗಿದ್ದ 3 ಶೂಟೌಟ್‌ ಪ್ರಕರಣಗಳಲ್ಲಿ ಬನ್ನಂಜೆರಾಜ ನನ್ನು ಖುಲಾಸೆಗೊಳಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ ಎಂದು ತಿಳಿದು ಬಂದಿದೆ. 2000ನೇ ಇಸವಿಯಲ್ಲಿ ಬಂಟ್ಸ್‌ ಹಾಸ್ಟೆಲ್‌ ನಿವಾಸಿ ಇರವಿನ್‌ ಪಿಂಟೋ ಮತ್ತು ಅವರ ಪತ್ನಿ ರಾತ್ರಿ

ಮೂಡುಬಿದಿರೆ:ಏ 07. ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ (78ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ಜಿಲ್ಲೆಯ ಹಲವಾರು ದೈವಸ್ಥಾನಗಳಲ್ಲಿ ದೈವಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರನನ್ನು

ಮಂಗಳೂರು:ಏ 04. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏ.4ರ ಮಂಗಳವಾರ ಭಗವಾನ್ ಮಹಾವೀರ ಜಯಂತಿಯನ್ನು ನಗರದ ತುಳು ಭವನದಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್ ಅವರು ಮಹಾವೀರರ ಪಂಚತತ್ವಗಳಾದ ಅಹಿಂಸಾ, ಸತ್ಯ, ಆಸ್ತೇಯ, ಬ್ರಹ್ಮಚಾರ್ಯ, ಅಪರಿಗ್ರಹ ಆಧ್ಯಾತ್ಮಿಕ

ಸುರತ್ಕಲ್: ಕುಳಾಯಿ ಗ್ರಾಮದ ಮಾನಸ (22ವರ್ಷ) ಇದೇ ಮಾ.25 ರಿಂದ ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. 5 ಅಡಿ ಎತ್ತರ, ಬಿಳಿ ಮೈ ಬಣ್ಣ, ಕಪ್ಪು ಕೂದಲು, ಎಣ್ಣೆ ಕಪ್ಪು ಮೈಬಣ್ಣ, ತೆಳ್ಳಗಿನ ಶರೀರ, ಬಲ ಕೈಯಲ್ಲಿ ನವೀಲು ಗರಿಯ

ಮಂಗಳೂರು:ಏ 01. ಮಂಗಳೂರಿನಲ್ಲಿ ನಾಲ್ವರು ಸಾಮಾಜಿಕ ಹೋರಾಟಗಾರರಿಗೆ ನೀಡಿದ್ದ ಪೊಲೀಸ್ ಭದ್ರತಾ ಸಿಬ್ಬಂದಿ ಸೇವೆಯನ್ನು ಹಿಂಪಡೆಯಲಾಗಿದೆ. ವಿಚಾರವಾದಿ ಮತ್ತು ಸಾಮಾಜಿಕ ಹೋರಾಟಗಾರ ನರೇಂದ್ರ ನಾಯಕ್, ಬಿಜೆಪಿ ಮಾಜಿ ನಾಯಕ ಸತ್ಯಜಿತ್ ಸುರತ್ಕಲ್, ಬಿಜೆಪಿ ಮುಖಂಡರಾದ ರಹೀಮ್‌ ಉಚ್ಚಿಲ, ಮತ್ತು ಜಗದೀಶ್ ಶೇಣವ. ಈ ನಾಲ್ವರು ಸಾಮಾಜಿಕ ಹೋರಾಟಗಾರರಿಗೆ ನೀಡಿದ್ದ ಭದ್ರತಾ

ಕಾಸರಗೋಡು:ಮಾ 31. ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ ಚೆರ್ವತ್ತೂರು ಕೊವ್ವಲ್‌‌ನಲ್ಲಿ ನಡೆದಿದೆ. ನೀಲೇಶ್ವರ ಚಾಯೋತ್ ನ ದೀಪಕ್ (33) ಮತ್ತು ಕನ್ನಾಟಿಪಾರೆಯ ಶೋಭಿತ್ (27) ಮೃತ ಪಟ್ಟವರು. ದೀಪಕ್ ಖಾಸಗಿ ಬಸ್ಸಿನ ಚಾಲಕರಾಗಿದ್ದರು. ಶೋಭಿತ್ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು.

ಮಂಗಳೂರು:ಮಾ 31.ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್‌‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ದೇವೇಂದ್ರ (46) ಅವರ ಪತ್ನಿ ಮತ್ತು 2 ಮಕ್ಕಳು ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು, ಪಕ್ಕದಲ್ಲೇ ಡೆತ್ ನೋಟು ಕೂಡ

ಕಾಸರಗೋಡು:ಮಾ 28. ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ. ಮಂಜೇಶ್ವರ ಕುಂಜತ್ತೂರಿನ ಆದಿಲ್ ಮೃತಪಟ್ಟವನು.ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಆದಿಲ್ ಕುಂಬಳೆಯ ಮಹಾತ್ಮ ಕಾಲೇಜಿನ ವಿದ್ಯಾರ್ಥಿಯಾಗಿದ್ದ. ಪರೀಕ್ಷೆ ಬರೆದು ಮರಳುತ್ತಿದ್ದಾಗ ಟಿಪ್ಪರ್ ಲಾರಿ

ಮಂಗಳೂರು:ಮಾ 28. ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಬಳಿ ನಡೆದಿದೆ. ಮಧ್ಯರಾತ್ರಿ ಸುಮಾರು 2 ಗಂಟೆ ಹೊತ್ತಿಗೆ ಐಸ್ ಕ್ರೀಮ್ ದಾಸ್ತಾನು ಕೊಠಡಿಗೆ ಆರಂಭದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಅದು ಸನಿಹದಲ್ಲಿದ್ದ ವಾಹನಕ್ಕೂ ತಗುಲಿ ವಾಹನ ಹಾಗೂ