ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮಂಗಳೂರು: ಕಳೆದ ವರ್ಷ ಕೊಲೆಯಾದ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿ, ಹಿಂದೂ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು (Praveen Nettaru) ಕನಸಿನ ಮನೆ ಸಿದ್ಧವಾಗಿದ್ದು, ನಾಳೆ ನೂತನ ಮನೆಯ ಗೃಹ ಪ್ರವೇಶ ನೆರವೇರಲಿದೆ. ಜಿಲ್ಲಾ ಬಿಜೆಪಿ ವತಿಯಿಂದ ಸುಳ್ಯ ತಾಲೂಕಿನ ನೆಟ್ಟಾರುವಿನಲ್ಲಿ ಐದೇ ತಿಂಗಳಲ್ಲಿ ವಿಶಾಲವಾದ ಸುಂದರ ಮನೆ

ಮಂಗಳೂರು: ಕಾಂಗ್ರೆಸ್ ಮುಖಂಡ ಗಂಗಾಧರ ಗೌಡ ಅವರ ಎರಡು ವಸತಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ಶಿಕ್ಷಣ ಸಂಸ್ಥೆಯ ಮೇಲೆ ಆದಾಯ ತೆರಿಗೆ ಇಲಾಖೆ ಸೋಮವಾರ ದಾಳಿ ನಡೆಸಿದೆ. ಈ ಶಿಕ್ಷಣ ಸಂಸ್ಥೆಯು ಗಂಗಾಧರಗೌಡ ಅವರ ಪುತ್ರ ರಂಜನ್ ಗೌಡ ಅವರಿಗೆ ಸೇರಿದ್ದಾಗಿದೆ. ಗಂಗಾಧರಗೌಡರು 2018 ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ಗೆ

ಬೆಳ್ತಂಗಡಿ; ಏ 23 . ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ದೇವಕಿಯವರ ಪುತ್ರಿ ಕೌಶಲ್ಯ ಮೃತಪಟ್ಟ ನವವಿವಾಹಿತೆ. ಇನ್ನು ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ

ಮುಂಬೈ: ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಕುಟುಂಬ ಸಮೇತ ಭೇಟಿ ನೀಡಿದರು. ಬಾಲಿವುಡ್ ನಟಿ ಮತ್ತು ಉದ್ಯಮಿ ತಮ್ಮ ಮಕ್ಕಳಿಗೆ ತಮ್ಮ ಮಂಗಳೂರಿನ ಪರಂಪರೆ ಮತ್ತು ಸಂಸ್ಕೃತಿಯನ್ನು ಪರಿಚಯಿಸಲು ಬಯಸುತ್ತಾರೆ. ನನಗೆ ತುಂಬಾ ಹೆಮ್ಮೆಯಿದೆ ಎಂದು ಹೇಳಿದ್ದಾರೆ. ಶಿಲ್ಪಾ ಭಾನುವಾರ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ತಮ್ಮ ತಾಯಿ,

ಉಪ್ಪಿನಂಗಡಿ:ಏ, 22. ರಸ್ತೆ ಅಪಘಾತಕ್ಕೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಇದೀಗ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕಳಂಜಿಬೈಲ್ ನಿವಾಸಿ ಜಾಫರ್ (35) ಎಂದು ಗುರುತಿಸಲಾಗಿದೆ. ಈದುಲ್ ಫಿತ್ರ್ ಸಂಭ್ರಮದಲ್ಲಿ ನೆಂಟರಸ್ಥರ ಮನೆಗೆ ತನ್ನ ಎರಡು ಮಕ್ಕಳ ಜತೆ ತೆರಳುತ್ತಿದ್ದ ಜಾಫರ್ ರವರ ಸ್ಕ್ಯೂಟರ್ ಗೆ ರಾಂಗ್ ಸೈಡ್

ಕಾಸರಗೋಡು:ಏ, 22. ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಹಿತ ದಂಪತಿ ಸೇರಿದಂತೆ ನಾಲ್ವರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೇಲ್ಪರಂಬ ದ ಅಬೂಬಕ್ಕರ್ (35), ಪತ್ನಿ ಅಮೀನಾ ಅಸರ್ (23), ಬೆಂಗಳೂರಿನ ಸೂರಜ್ (32) ಮತ್ತು ಎ.ಕೆ ವಸೀಮ್ (32) ಎಂದು ಗುರುತಿಸಲಾಗಿದೆ. ಬಂಧಿತರಿಂದ 150 ಗ್ರಾಂ

ಸುಳ್ಯ:ಏ, 21. 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಲಾ ವಿಭಾಗದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ವಂಶಸ್ಥರಾದ ಮಂಜುಶ್ರೀ ಕೆದಂಬಾಡಿ ಅವರು ಪಿಯು ಪರೀಕ್ಷೆಯಲ್ಲಿ 591 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಮಂಜುಶ್ರೀ ಕೆದಂಬಾಡಿ ಸುಳ್ಯದ ಉಬೇರಡ್ಕದ ತೀರ್ಥರಾಮ ಕೆದಂಬಾಡಿ

ಮಂಗಳೂರು:ಏ 20. ಜೆಸಿಬಿಯಿಂದ ಮಣ್ಣು ಅಗೆತದ ವೇಳೆ ಮಣ್ಣು ಕುಸಿದು ಜೆಸಿಬಿಯ ಮೇಲೆ ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಸಂಭವಿಸಿದೆ. ಜೆಸಿಬಿಯ ಚಾಲಕ ಝಾರ್ಖಂಡ್‌ ಕೊಸಾರ್‌ ಅನ್ಸಾರಿ (22) ಮೃತರು. ಇನ್ನು ಮಣ್ಣು ಅಗೆತದ ವೇಳೆ ನಿಂತಿದ್ದ

ಉಡುಪಿ:ಏ 19 . ಶಿವಮೊಗ್ಗ ಮತ್ತು ಮಂಗಳೂರು ವಿಭಾಗದ ಮಹಿಳಾ ಕಾರ್ಯಗಾರವು ಎಪ್ರಿಲ್ 21 ರಂದು ಉಡುಪಿ ಜಿಲ್ಲಾ ಬಿಜಪಿ ಕಚೇರಿಯಲ್ಲಿ ನಡೆಯಲಿದೆ ಎಂದು ರಾಜ್ಯ ಮಹಿಳಾ ಕಾರ್ಯದ ಸಹ ಸಂಚಾಲಕಿಯಾದ ಶ್ಯಾಮಲಾ ಕುಂದರ್ ತಿಳಿಸಿದರು. ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಕಾರ್ಯಕರ್ತರು

ಕಡಬ:ಏ 18. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಕೆಲವರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಕಾರು ಕುಕ್ಕೆ ಕಡೆ ಹಾಗೂ ತೂಫನ್ ಧರ್ಮಸ್ಥಳ ಕಡೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ