ಕಾಸರಗೋಡು:ಜಿಲ್ಲೆಯಲ್ಲಿ ಬುಧವಾರ , ಗುರುವಾರ ಬೀಸಿದ ಸುಂಟರಗಾಳಿ ಹಾಗೂ ಮಳೆಗೆ ಅಪಾರ ಹಾನಿ ಉಂಟಾಗಿದ್ದು , ಹಲವು ಮರಗಳು , ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದ್ದು, ವಾಹನ ಮನೆಗಳಿಗೆ ಹಾನಿ ಉಂಟಾಗಿದೆ. ನಿಲುಗಡೆ ಗೊಳಿಸಿದ್ದ ವಾಹನಗಳ ಮೇಲೂ ಮರಗಳು ಉರುಳು ಬಿದ್ದಿವೆ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ.
ಮಂಗಳೂರು: ಕರಾವಳಿಯಲ್ಲಿ ಮಳೆಯ ಅವಾಂತರ ಮುಂದುವರಿದಿದೆ ಭಾರಿ ಗಾಳಿ ಮಳೆಗೆ ಮನೆ ಕುಸಿದು ಬಾಲಕ ಮೃತಪಟ್ಟಿರುವ ಘಟನೆ ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ನಡೆದಿದೆ. ಮೃತ ಬಾಲಕನ್ನು ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಎಂದು ಗುರುತಿಸಲಾಗಿದೆ. ಭಾರಿ ಗಾಳಿ-ಮಳೆಗೆ ಮನೆಯ ಮೇಲೆ ತಡೆಗೋಡೆ
ರೈಲಿನ ಎಸಿ ಬೋಗಿಯೊಳಗೆ ನೀರು ಹರಡಿದ ಘಟನೆ ಮಂಗಳೂರು - ಮನ್ಮಾಡ್ ಮಂಗಳದ್ವೀಪ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ನಲ್ಲಿ ನಡೆದಿದೆ. ಇದರಿಂದಾಗಿ ಮಂಗಳೂರಿನಿಂದ ಶಿರಡಿಗೆ ತೆರಳುತ್ತಿದ್ದ 95 ಮಂದಿ ಪ್ರಯಾಣಿಕರಿದ್ದ ಕೋಚ್ ಬಿ6 ಎಸಿ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷದಿಂದ ರೈಲಿನಲ್ಲಿ ಈ ಸಮಸ್ಯೆ ಉಂಟಾಗಿದೆ. ತಾಂತ್ರಿಕ ದೋಷದಿಂದಾಗಿ ಕೋಚ್ನಲ್ಲಿ ಜಲಪಾತದಂತೆ ನೀರು ಸುರಿದಿದೆ.
ಉಪ್ಪಿನಂಗಡಿ: ಕೆಎಸ್ಆರ್ ಟಿಸಿ ಐರಾವತ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ತಕ್ಷಣ ಸ್ಥಳೀಯ ಯುವಕರ ಕಾರ್ಯಾಚರಣೆಯಿಂದ ಬೆಂಕಿ ಆರಿಸಲಾಗಿದ್ದು ಹೆಚ್ಚಿನ ಅನಾಹುತ ತಪ್ಪಿಸಿದ ಘಟನೆ ಉಪ್ಪಿನಂಗಡಿ ಹಳೆಗೇಟು ಬಳಿ ಜು.18ರ ಗುರುವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ – ಮಂಗಳೂರಿಗೆ ಹೋಗುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು
ಮಂಗಳೂರು: ಕಳೆದ ಕೆಲವು ದಿನಗಳಿಂದ ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬ್ಯಾಂಕ್ ಲಾಕರ್ಗಳಿಗೆ ಬೇಡಿಕೆ ಹೆಚ್ಚಿದ್ದು, ಈ ಪ್ರದೇಶದಲ್ಲಿ ಮತ್ತೆ ಮನೆಗಳ್ಳತನ ಮತ್ತು ಕಳ್ಳತನ ಪ್ರಕರಣಗಳು ನಡೆಯುತ್ತಿರುವುದು ಇದಕ್ಕೆ ಕಾರಣ ಎನ್ನಲಾಗಿದೆ. ಹೊಸ ಲಾಕರ್ಗಳನ್ನು ತೆರೆಯುವುದು ಮತ್ತು ವಿಚಾರಣೆಯ ಜೊತೆಗೆ, ಗ್ರಾಹಕರಿಂದ ಈಗಿರುವ ಲಾಕರ್ಗಳ ಕಾರ್ಯಾಚರಣೆಯೂ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.
ಉಪ್ಪಿನಂಗಡಿ: ಜು. 13:ಬೈಕ್ ಹಾಗೂ ಪಿಕಪ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಶುಕ್ರವಾರ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಕೊಲ್ಪೆಯಲ್ಲಿ ನಡೆದಿದೆ. ಮಂಗಳೂರು ಕೋಡಿಕ್ಕಲ್ ನಿವಾಸಿ ಪ್ರಣಮ್ ಕೋಟ್ಯಾನ್ (23) ಮೃತ ದುರ್ದೈವಿ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ
ಬಂಟ್ವಾಳ:ಜು 13ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಕೊಂಚ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1ಮೀ.ನಷ್ಟಿದೆ. ನೇತ್ರಾವತಿ ನದಿಯಲ್ಲಿ 8 ಮೀ. ಅಪಾಯಕಾರಿ ಮಟ್ಟವಾಗಿದ್ದು, 8.5ಮೀ. ತಲುಪಿದರೆ ಪಾಣೆಮಂಗಳೂರಿನ ಆಲಡ್ಕ ಭಾಗದಲ್ಲಿ ಪ್ರವಾಹದ ನೀರು ಮನೆಯೊಳಗೆ ನುಗ್ಗುತ್ತದೆ. ಮಲೆನಾಡು ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿರುವ ಪರಿಣಾಮ ನೀರಿನ ಮಟ್ಟ ಹೆಚ್ಚಳಗೊಂಡಿದೆ. ತುಂಬೆ
ಮಂಗಳೂರು, ಜು 12; ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಕಚೇರಿಯನ್ನು ಜುಲೈ 12 ರಂದು ಶುಕ್ರವಾರ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಆರ್ಎಸ್ಎಸ್ನ ಪ್ರಮುಖರಾದ ಕಲ್ಲಡ್ಕ ಪ್ರಭಾಕರ ಭಟ್, ತುಳುನಾಡು ಹಿಂದುತ್ವದ ನಾಡು, ಈ ಸ್ಥಳದಲ್ಲಿ ನಾವು ದೈವವನ್ನು ಆರಾಧಿಸುತ್ತೇವೆ, ದೇವರ ದಯೆ ಮತ್ತು
ಮಂಗಳೂರು, ಜುಲೈ 11: ನಗರದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಸ್ಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಲಾಗಿದೆ.
ಮಂಗಳೂರು:ಜುಲೈ 10, ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜತೆ ಇರುವುದು ಪತ್ತೆಯಾಗಿದೆ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಯುವತಿ ಕಾಣೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದ ಕಾರ್ಯಚರಣೆ ನಡೆಸಿದ ಪಾಂಡೇಶ್ವರ ಠಾಣಾ ಪೊಲೀಸರು, ನಾಪತ್ತೆಯಾಗಿದ್ದ ಯುವತಿಯನ್ನು ಪತ್ತೆ ಮಾಡಿದ್ದಾರೆ. ಆದ್ರೆ,