ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮಂಗಳೂರು, ನವೆಂಬರ್ 23: ಕರಾವಳಿಯಲ್ಲಿರುವಷ್ಟು ಕಂಬಳದ ಕ್ರೇಝ್ ಬೇರೆಲ್ಲೂ ಕಾಣಸಿಗದು. ತುಳುನಾಡ ಜನಪದ ಕ್ರೀಡೆಯಾಗಿ ಬೆಳೆದಿರುವ ಕಂಬಳ ಇಂದು ಸಾಕಷ್ಟು ಪ್ರಸಿದ್ದಿಯನ್ನು ಪಡೆದಿದೆ. ಇಲ್ಲಿನ ರೈತಾಪಿ ಜನ ತಮ್ಮ ಕೃಷಿ ಕಾರ್ಯಗಳಿಗೆ ಬಳಸುವ ಕೋಣಗಳನ್ನು ಪಳಗಿಸಿ ಅವುಗಳನ್ನು ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಗೆದ್ದು ಪ್ರತಿಷ್ಠೆ ಮೆರೆಯುವ ತನಕ ಈ ಕ್ರೀಡೆ

ಬೆಳ್ತಂಗಡಿ:ನ.19ಪತ್ರಕರ್ತ ಭುವನೇಂದ್ರ ಪುದುವೆಟ್ಟು (42)ರವರು ಇಂದು ಕೊನೆಯುಸಿರೆಳೆದಿದ್ದಾರೆ. ಪುಡುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್

ಮಂಗಳೂರು: ಈಜುಕೊಳದಲ್ಲಿ ಮೂವರು ಯುವತಿಯರು ಮುಳುಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್​ನಲ್ಲಿ ಭಾನುವಾರ ಮಧ್ಯಾಹ್ನ ಹೊತ್ತಿಗೆ ನಡೆದಿದೆ.   ಮಂಗಳೂರು ಹೊರವಲಯ ಉಚ್ಚಿಲ ಬೀಚ್ ಬಳಿಯ ರೆಸಾರ್ಟ್​ನ ಈಜುಕೊಳದಲ್ಲಿ ಈಜಾಡುವಾಗ ಏಕಾಏಕಿ ಮುಳುಗಿ ಮೂವರು ಯುವತಿಯರು ಮೃತಪಟ್ಟಿದ್ದು, ಮೃತಪಟ್ಟವರನ್ನು ಮೈಸೂರು ಕುರುಬರಹಳ್ಳಿಯ ನಾಲ್ಕನೇ

ಮಂಗಳೂರು: ನ.15ಅಲರ್ಜಿಗೆ ಸಂಬಂಧಿಸಿದ ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ನಿಂದ ಮಂಗಳೂರಿನ ಉಪನ್ಯಾಸಕಿಯೋರ್ವರು ಮೃತಪಟ್ಟಿದ್ದು, ಸಾವಿನಲ್ಲೂ ಅವರು ಸಾರ್ಥಕತೆ ಮೆರೆದಿದ್ದಾರೆ. ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಮೃತ ದುರ್ದೈವಿ. ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದುಬಿದ್ದು

ಮಂಗಳೂರು: ನಗರದಲ್ಲಿ ತಂದೆ ಯೋರ್ವರು ತನ್ನ ಪುಟ್ಟ ಮಗುವಿನೊಂದಿಗೆ ಗುರುಪುರ ನದಿಗೆ ಹಾರಾಲು ಯತ್ನಿಸಿದ ಘಟನೆ ಸಂಭವಿಸಿದೆ‌. ಪ್ರತಿನಿತ್ಯ ಗಲಾಟೆ, ಮಾನಸಿಕ ಹಿಂಸೆ ತಾಳಲಾರದೇ ಪುಟ್ಟ ಮಗುವಿನ ಜೊತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಗುರುಪುರಕ್ಕೆ ಯುವಕನೊಬ್ಬ ಬಂದಿದ್ದಾನೆ. ಜನ ಸಂಚಾರ ಇಲ್ಲದ ಸಂದರ್ಭ ಪುಟ್ಟ ಮಗುವನ್ನು ಎತ್ತಿಕೊಂಡು ಸೇತುವೆಯ

ಖ್ಯಾತ ಸಾಂಸ್ಕೃತಿಕ ಸಂಘಟಕ ಮತ್ತು ಕೊಂಕಣಿ ನಾಟಕ ಸಭಾ ಸಂಸ್ಥೆ ಹಾಗೂ ಮಂಗಳೂರಿನ ಹೆಸರಾಂತ ಡಾನ್ ಬಾಸ್ಕೋ ಸಭಾಂಗಣದ ದೀರ್ಘಕಾಲದ ವ್ಯವಸ್ಥಾಪಕ ಬೋನಿಫಾಸ್ ಪಿಂಟೋ(62) ಅವರು ಅಲ್ಪಾವಧಿಯ ಆರೋಗ್ಯ ಸಮಸ್ಯೆಯಿಂದ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಬೋನಿಫಾಸ್ ಪಿಂಟೋ ಅವರು ತಮ್ಮ ವೃತ್ತಿಜೀವನದ ಅವಧಿಯಲ್ಲಿ 28 ವರ್ಷಗಳ ಕಾಲ ಕೆಎನ್‌ಎಸ್‌ಗೆ ವ್ಯವಸ್ಥಾಪಕರಾಗಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಡಗಬೆಳ್ಳೂರಿನ ದೇವಸ್ಥಾನವೊಂದರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬುಧವಾರ ಬಂಟ್ವಾಳ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿ ಪಾಣಾಜೆ ಗ್ರಾಮದ ಉಡ್ಡಂಗಳ ನಿವಾಸಿ ಮೊಹಮ್ಮದ್‌ ಶರೀಫ್‌ (44) ಎಂದು ತಿಳಿಯಲಾಗಿದೆ. ಈತ

ಮಂಗಳೂರು: ಕೇರಳದ ನೀಲೇಶ್ವರಂನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ ಪಟಾಕಿ ಅವಘಡದಲ್ಲಿ 150ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಆ ಪೈಕಿ 26 ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲಾ 26 ಮಂದಿ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರಲ್ಲಿ ಮೂವರು ಬರ್ನ್ ಇಂಟೆನ್ಸಿವ್ ಕೇರ್ ಯುನಿಟ್‌ಗಳಲ್ಲಿ(ಬಿಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು

ಮಂಗಳೂರು, ಅಕ್ಟೋಬರ್​ 25: ದಕ್ಷಿಣ ಕನ್ನಡ  ಜಿಲ್ಲೆಯ ಮಂಗಳೂರು ಹೊರವಲಯದ ಸುರತ್ಕಲ್​ನಲ್ಲಿ  ವಾಸವಾಗಿರುವ ಓರ್ವ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. “ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. ಮುಸ್ಲಿಂ ಸಮಾಜದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ

ಪುತ್ತೂರು: ಇಡೀ ರಾಜ್ಯ ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯತ್ತ ಗಮನ ಹರಿಸಿದ್ದರೆ ಅತ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1,697 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಕಿಶೋರ್ ಕುಮಾರ್