ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಮಡಿಕೇರಿ: ಕೊಡಗಿನಲ್ಲಿ ಶುಕ್ರವಾರ ಸಂಜೆ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಂಡಿದ್ದ ಎರಡು ಸಮುದಾಯದ ಭಕ್ತರು ಧರಿಸಿದ್ದ ಉಡುಪಿನ ಸಂಬಂಧ ಮನಸ್ತಾಪ ಉಂಟಾಗಿದೆ. ಕೆಲವು ಕೊಡವ ಭಕ್ತರು ಧಾರ್ಮಿಕ ಕ್ರಿಯೆಯಲ್ಲಿ ಪಾಲ್ಗೊಳ್ಳಲು ದೇವಸ್ಥಾನಕ್ಕೆ ತೆರಳುತ್ತಿದ್ದಾಗ, ಗೌಡ ಸಮುದಾಯಕ್ಕೆ ಸೇರಿದ ಸ್ಥಳೀಯರು ಅವರನ್ನು ತಡೆದಿದ್ದಾರೆ ಎನ್ನಲಾಗಿದೆ. ದೇವಾಲಯದ ಆಡಳಿತ ಮಂಡಳಿಯ ಕೆಲವರು ಕೊಡವ ಭಕ್ತರಿಗೆ ಪ್ರವೇಶವನ್ನು ನಿರಾಕರಿಸಿದರು,

ಮಂಗಳೂರು, ಡಿಸೆಂಬರ್​ 28: ಟಿಪ್ಪು ಸುಲ್ತಾನ್ ಕಾಲದ ಖಬರಸ್ತಾನ ಭೂಮಿ ಕಬಳಿಕೆ ಮಾಡಿರುವ ಆರೋಪ ಕೇಳಿಬಂದಿದ್ದು, ಮಸೀದಿ ಆಡಳಿತ ಮಂಡಳಿಯಿಂದ ಪ್ರತಿಭಟನೆ ಮಾಡಲಾಗಿದೆ. ಇದೇ ವೇಳೆ ಭೂಕಬಳಿಕೆ ಆರೋಪ ಹೊತ್ತ ಮಹಿಳೆ ಹಾಗೂ ಕುಟುಂಬದಿಂದ ರಂಪಾಟ ಮಾಡಲಾಗಿದ್ದು, ದೊಣ್ಣೆಯಿಂದ ದಾಳಿ ನಡೆಸಿ ಪ್ರತಿಭಟನಾಕಾರನ ಶರ್ಟ್ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಕಸ್ಮಿಕವಾಗಿ ಸ್ವೀಟ್ಸ್ ಮಳಿಗೆಗೆ ಬೆಂಕಿ ಹತ್ತಿಕೊಂಡು ಲಕ್ಷಾಂತರ ರೂ. ನಷ್ಟವಾದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಯಲ್ಲಿ ಸಂಭವಿಸಿದೆ. ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಳಿಗೆಯ ಮಾಲಕರು ಬಂದ್ ಮಾಡಿ ಮನೆಗೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ತಡರಾತ್ರಿ ಮಳಿಗೆಯಿಂದ ಹೊಗೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆ ಡಿಸೆಂಬರ್ 28 ಮತ್ತು 29ರಂದು ತಣ್ಣೀರುಭಾವಿ ಬೀಚ್‌ನಲ್ಲಿ ಆಯೋಜಿಸಲಾಗಿದ್ದ ಬೀಚ್ ಉತ್ಸವವನ್ನು ದ.ಕ ಜಿಲ್ಲಾಡಳಿತ ಮುಂದೂಡಿ ಪ್ರಕಟನೆ ಹೊರಡಿಸಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಇದೀಗ ಬೀಚ್

ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.28 ರಂದು 8ನೇ ವರ್ಷದ 'ಮಂಗಳೂರು ಕಂಬಳ' ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಕಂಬಳದ ಕುರಿತು ಮಾಹಿತಿ ನೀಡಿದ ಅವರು,

ಮಂಗಳೂರು, ಡಿಸೆಂಬರ್​ 25: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ವಂಚಿಸಿದ ಆರೋಪಿ. 500 ನಕಲಿ

ಮಂಗಳೂರು:ಡಿಸೆಂಬರ್​ 20: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6ನೇ ಆರೋಪಿಯನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್(55) ಬಂಧಿತ ಆರೋಪಿ. ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನದಲ್ಲಿ ಬಂಧಿಸಲಾಗಿದೆ. ಈತನ ಪತ್ತೆಗಾಗಿ ಎನ್​ಐಎ‌ ಅಧಿಕಾರಿಗಳು

ಬಂಟ್ವಾಳ:ಡಿ.19: ಬೆಂಗಳೂರಿನಿಂದ ಮಂಗಳೂರಿಗೆ ಹೂ ತರುತ್ತಿದ್ದ ಟೆಂಪೋ ಟ್ರಾವೆಲರ್ ಪಲ್ಟಿಯಾದ ಘಟನೆ ಫರಂಗಿಪೇಟೆಯಲ್ಲಿ ಗುರುವಾರ ಮುಂಜಾನೆ 7ಗಂಟೆಯ ವೇಳೆ ನಡೆದಿದೆ. ಅಡ್ಯಾರ್ ನಲ್ಲಿ ಕಾರ್ಯಕ್ರಮ ನಿಮಿತ್ತ ಹೂ ಅಲಂಕಾರ ನಡೆಸುವುದಕ್ಕಾಗಿ ಬೆಂಗಳೂರಿನಿಂದ ಅಲಂಕಾರಿಕ ಹೂ ತುಂಬಿಸಿಕೊಂಡು ಹೊರಟಿದ್ದ ಟ್ರಾವೆಲರ್ ಫರಂಗಿಪೇಟೆ ಬರುವಷ್ಟರಲ್ಲಿ ಟಯರ್ ಬ್ಲಾಸ್ಟ್ ಆಗಿ ಘಟನೆ ನಡೆದಿದೆ ಎಂದು

ದಕ್ಷಿಣ ಕನ್ನಡ : ಮಂಗಳೂರು ತಾಲೂಕು ತೆಂಕ ಎಡಪದವು ಗ್ರಾಮದ ಶಿಬ್ರಿಕೆರೆ ಗಣೇಶ್‌ ಮಿಲ್‌ ಬಳಿ ಇರುವ ಒಳ ರಸ್ತೆಯಲ್ಲಿ ನಡೆದುಕೊಂಡು ಮಧ್ಯಾಹ್ನ ವೇಳೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯ ಬಳಿ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿ ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋದ ಘಟನೆಗೆ ಸಂಬಂಧಿಸಿ

ಮಂಗಳೂರು:ಡಿ.15: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟೀಯ ಸಂಸ್ಥೆ 2023ನೇ ವರ್ಷದಲ್ಲಿ ರಾಷ್ಟ್ರ ಮಟ್ಟದಲ್ಲಿ ನೀಡುವ 'ಮೆಸೇಂಜರ್ ಆಫ್ ಪೀಸ್ ಸ್ಟಾರ್ ಅವಾರ್ಡ್' ಪ್ರಶಸ್ತಿಗೆ ಕರ್ನಾಟಕದ 8 ಮಂದಿ ಆಯ್ಕೆಯಾಗಿದ್ದು, ಈ ಪೈಕಿ ಮೂವರು ದ.ಕ. ಜಿಲ್ಲೆಯವರು. ವಯಸ್ಕರ ವಿಭಾಗದಲ್ಲಿ ದ.ಕ. ಜಿಲ್ಲಾ ಸ್ಕೌಟ್ಸ್-ಗೈಡ್ಸ್ ಕೋಶಾಧಿಕಾರಿ ನವೀನ್ ಚಂದ್ರ ಅಂಬೂರಿ,