ವಿಟ್ಲ: ಡಿ.13,ಗಂಡ ಹೆಂಡತಿ ಜಗಳದಲ್ಲಿ ಹೆಂಡತಿಯನ್ನು ದೂಡಿ ಹಾಕಿದ ಪರಿಣಾಮ ಗಂಭೀರ ಗಾಯಗೊಂಡ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೇವಿನಗರ ನಿವಾಸಿ ಲೀಲಾ (45) ಎಂದು ಗುರುತಿಸಲಾಗಿದೆ. ಪ್ರತಿದಿನ ಕುಡಿದು ಬಂದು ಗಲಾಟೆ ಮಾಡುತಿದ್ದ ಸಂಜೀವ ಮೊನ್ನೆ ಕೂಡ ಗಲಾಟೆ ಮಾಡಿ
ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದವರು ತೀವ್ರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ಡಿಸೆಂಬರ್ 12ರಂದು ಸಂಭವಿಸಿದೆ. ಉಡುಪಿ ನೋಂದಣಿಯ ಕಾರು ಅಪಘಾತಕ್ಕೀಡಾಗಿದದು, ಕಾರಿನಲ್ಲಿದ್ದವರು ಉಡುಪಿ ಮೂಲದವರೆಂದು ತಿಳಿದುಬಂದಿರುತ್ತದೆ. ಗಾಯಾಳುಗಳನ್ನು ಸ್ಥಳೀಯರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪ ವಾಟ್ಸ್ ಆ್ಯಪ್ ಮತ್ತು ಟೆಲಿಗ್ರಾಂ ಲಿಂಕ್ ಮೂಲಕ ಕೆಲಸದ ಆಮಿಷ ತೋರಿಸಿ ಆನ್‌ಲೈನ್ ಮೂಲಕ ಕೊಣಾಜೆ ನಿವಾಸಿಯಿಂದ ಹಣ ಪಡೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು ಜಮ್ಮು ಕಾಶ್ಮೀರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿಯಲಾಗಿದೆ. ಬೆಂಗಳೂರಿನ ಜಲಸಂದ್ರ
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಆಡಂಕುದ್ರಿನ ಬಳಿ ಕಾರು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಢಿಕ್ಕಿ ಹೊಡೆದ ಕಾರು ಮತ್ತು ಓವರ್‌ಟೇಕ್ ಮಾಡುತ್ತಿದ್ದ ಇನ್ನೊಂದು ಕಾರು ಕಮರಿಗೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಸಾವನ್ನಪ್ಪಿದವರು ಸೇವಂತಿಗುಡ್ಡೆಯ ನಿವಾಸಿ ಕೃಷ್ಣಪ್ಪ ಅವರ ಪತ್ನಿ ಬೇಬಿ (65) ಎಂದು ತಿಳಿದು ಬಂದಿದೆ. ಆಡಂಕುದ್ರಿನಲ್ಲಿ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ನವೆಂಬರ್ 30 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೊದಲ ಬಾರಿಗೆ ಬಾಂಬ್ ಬೆದರಿಕೆ ಬಂದಿತ್ತು. ರಾಮೇಶ್ವರಂ ಕೆಫೆ ಸ್ಫೋಟದ ಮಾದರಿಯಲ್ಲಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಬಂದಿತ್ತು. ಈಗ ಬಂದಿರುವ ಇ-ಮೇಲ್ ಮೂಲಕ ಕಳುಹಿಸಲಾದ ಸಂದೇಶದಲ್ಲಿ ವಿಮಾನ ನಿಲ್ದಾಣದಲ್ಲಿ
ಮಂಗಳೂರು, (ಡಿಸೆಂಬರ್ 03): ಫೆಂಗಲ್ ಚಂಡಮಾರುತದ ಪರಿಣಾಮ ಮಂಗಳೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಇದರಿಂದ ಫೆಂಗಾಲ್ ಜನರನ್ನು ಕಂಗಾಲ್ ಮಾಡಿದ್ದು, ಅಪಾರ ಪ್ರಮಾಣದ ನೀರಿನಿಂದ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿದೆ. ಹೆದ್ದಾರಿ ಬದಿ ಗೇಲ್ ಗಾಸ್ ಕಂಪನಿ ಅಗೆದಿದ್ದ ಹೊಂಡದಲ್ಲಿ ನೀರು ತುಂಬಿ ಕೂಳೂರು ಬಳಿ ಮಂಗಳೂರು ಟು ಉಡುಪಿ ಸಂಪರ್ಕದ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಭಾರೀ ಮಳೆಯಿಂದಾಗಿ ಬಜ್ಪೆ ಸಮೀಪದ ಅದ್ಯಪಾಡಿಯಲ್ಲಿ ಭೂಕುಸಿತ ಉಂಟಾಗಿದೆ. ಬಜ್ಪೆ -ಅದ್ಯಪಾಡಿಯ ಸಂಪರ್ಕ ಕಡಿತವಾಗಿದೆ. ಅದ್ಯಪಾಡಿಯಲ್ಲಿ ಉಂಟಾಗಿರುವ ಭೂಕುಸಿತಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ. ಮಂಗಳೂರು ವಿಮಾನ ನಿಲ್ದಾಣ ಕೆಳಭಾಗದ
ಕಂಟೈನರ್ ನ ಬ್ರೇಕ್ ಲೈನರ್ ಜಾಮ್ ಆಗಿ ಬೆಂಕಿ ಕಾಣಿಸಿಕೊಂಡು ಟಯರ್ ಮೇಲ್ಗಡೆ ಹೊತ್ತಿ ಉರಿದಿದ್ದು ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ಬಪ್ಪನಾಡು ಸೇತುವೆ ಬಳಿ ನಡೆದಿದೆ. ಪಡುಬಿದ್ರೆ ನಂದಿಕೂರು ಕೈಗಾರಿಕಾ ಪ್ರದೇಶದ ಬ್ರೈಟ್ ಫ್ಲೆಕ್ಸ್ ಕಂಪನಿಯಿಂದ ಮಂಗಳೂರು ಬಂದರ್ ಕಡೆಗೆ
ಪುತ್ತೂರು: ಪುತ್ತೂರಿನ ಹಿರಿಯ ಸಾಮಾಜಿಕ ಧುರೀಣ, ಮಾಡನ್ನೂರು ಗ್ರಾಮದ ಅಮ್ಚಿನಡ್ಕ ನಿವಾಸಿ ಮಾಡನ್ನೂರು ಕೊಚ್ಚಿ ಮರ್ಹೂಂ ಅಬ್ದುಲ್ ಖಾದರ್ ಹಾಜಿಯವರ ಪುತ್ರ ಕೆ.ಕೆ.ಕುಂಞಿ ಅಹ್ಮದ್ ಹಾಜಿ(87) ವಯೋಸಹಜ ಅನಾರೋಗ್ಯದಿಂದ ಶನಿವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು. ಮಾಡನ್ನೂರು ಜುಮಾ ಮಸೀದಿಯ ಮತ್ತು ಅಮ್ಚಿನಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯಲ್ಲಿ ಹಲವಾರು ವರ್ಷಗಳ ಕಾಲ
ಉಡುಪಿ:ನ್ಯಾಯಾಧೀಶರುಗಳಾಗಿ ನೇಮಕಗೊಂಡು ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ವಕೀಲರ ಸಂಘದ ಮಾಜಿ ಸದಸ್ಯರಾದ ಶ್ರೀ ಶುಕ್ಲಾಕ್ಷ ಪಾಲನ್, ಶ್ರೀಮತಿ ಪಂಚಾಕ್ಷರಿ, ಶ್ರೀ ಕಿರಣ್ ಕಿಣಿ, ಶ್ರೀ ಕೃಷ್ಣಪ್ರಸಾದ್ , ಶ್ರೀ ಶ್ರೀಧರ ಭಟ್ , ಶ್ರೀ ಎಲ್.ಎನ್. ಭಟ್ , ಶ್ರೀಮತಿ ಭಾಮಿನಿ, ಶ್ರೀಮತಿ ಸುಜಾತಾ