ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆಯು ಸೋಮವಾರ ಬೆಳಗ್ಗೆ ನಗರದ ಪತ್ರಿಕಾಭವನದಲ್ಲಿ ಜರುಗಿತು. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಪತ್ರಿಕೆಗಳು ಜನರ ಧ್ವನಿಯಾಗಿ ಸ್ವಾತಂತ್ರ್ಯ ಪೂರ್ವದಿಂದಲೇ ಕಾರ್ಯ ನಿರ್ವಹಿಸುತ್ತ ಬಂದಿವೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಪೀಡಿತ ಪ್ರದೇಶಗಳಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಪರಿಹಾರ ಕೇಂದ್ರವನ್ನು ತೆರೆಯಲಾಗಿದ್ದು, ಭೂಕುಸಿತಕ್ಕೆ ಗುರಿಯಾಗಿರುವ ಮಂಗಳೂರು ಸಮೀಪದ ಪಂಜಿಮಗರು ಎಂಬಲ್ಲಿ ಮತ್ತೊಂದು ಪರಿಹಾರ ಕೇಂದ್ರವನ್ನು ತೆರೆಯಲಾಗಿದೆ. ಭಾರೀ ಮಳೆಯಿಂದ ಭೂಕುಸಿತ ಸಂಭವಿಸುವ ಸಾಧ್ಯತೆ ಹೆಚ್ಚಿರುವ ಸುಬ್ರಹ್ಮಣ್ಯ ಪ್ರದೇಶದಲ್ಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಭೂ ಮಾಪನ ಇಲಾಖೆಯ ಅಧಿಕಾರಿ(ಡಿಡಿಎಲ್‌ಆರ್‌) ಮತ್ತು ಇಬ್ಬರು ಸರ್ವೇಯರ್‌ಗಳ ಕಚೇರಿ ಹಾಗೂ ಮನೆಗಳಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸರು ತಪಾಸಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ನಗರದ ಡಿಡಿಎಲ್‌ಆರ್‌ ಕಚೇರಿ ಮತ್ತು ದೇರಳಕಟ್ಟೆ ಬಳಿ ಇರುವ ಉಳ್ಳಾಲದ ಸರ್ವೇಯರ್‌ ಕಚೇರಿಯಲ್ಲಿ ತಪಾಸಣೆ ನಡೆಸಲಾಗಿದೆ. ಅಲ್ಲದೆ

ಉಡುಪಿ: ಮಂಗಳೂರು ವಿಭಾಗದ ರಾಜ್ಯ ಗುಪ್ತಚರ ಇಲಾಖೆಯ ಉಪ-ನಿರ್ದೇಶಕರಾದ ಎನ್.ಎಂ.ಧರ್ಮಪ್ಪರವರು ನಿವೃತ್ತಿ ಹೊಂದಿದ್ದು,ಅವರಿಗೆ ಬಿಳ್ಕೋಡುಗೆ ಸಮಾರಂಭ ಉಡುಪಿ ಶಾರದಾ ಇಂಟರ್ ನ್ಯಾಷನಲ್ ಹೊಟೇಲ್ ಸಭಾಂಗಣದಲ್ಲಿ ಶನಿವಾರದ೦ದು ನಡೆಯಿತು. ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿದ್ದಲಿಂಗಪ್ಪ,ಮಂಗಳೂರು ನಗರ ಅಪರಾಧ ವಿಭಾಗದ ಡಿ.ಸಿ.ಪಿ ದಿನೇಶ್ ಕುಮಾರ್ ರವರು

ಉಳ್ಳಾಲ: ಜೂ.28,ಕಡಲ್ಕೊರೆತಕ್ಕೆ ಮನೆಯೊಂದು ಸಮುದ್ರ ಪಾಲಾದ ಘಟನೆ ಉಚ್ಚಿಲ ಬಟ್ಟಪಾಡಿಯಲ್ಲಿ ಗುರುವಾರ ನಡೆದಿದ್ದು, ಇನ್ನು 3 ಮನೆ ಅಪಾಯದಲ್ಲಿರುವ ಘಟನೆ ವರದಿಯಾಗಿದೆ. ಅಪಾಯದಂಚಿನಲ್ಲಿದ್ದ ಈ ಮನೆಯಲ್ಲಿ ನೆಲೆಸಿದ್ದ ಬೀಫಾತುಮ್ಮಾ ಅವರ ಕುಟುಂಬವನ್ನು ಜೂನ್ 26ರಂದೇ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಸಂಭವನೀಯ ಅಪಾಯ ತಪ್ಪಿದಂತಾಗಿದೆ. ಇನ್ನು ಈ ಪ್ರದೇಶದಲ್ಲಿ ಅಪಾಯದಂಚಿನಲ್ಲಿದ್ದ 3 ಮನೆಗಳ

ಮಂಗಳೂರು: ಭಾರೀ ಮಳೆಗೆ ಕರಾವಳಿಯ ಉಳ್ಳಾಲ ಬಳಿ ಮನೆ ಕುಸಿದು ನಾಲ್ವರು ಮೃತಪಟ್ಟ ಬೆನ್ನಲ್ಲೇ ಭಾರೀ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಪ್ರವಹಿಸಿ ಇಬ್ಬರು ಬಲಿಯಾದ ದಾರುಣ ಘಟನೆ ಮಂಗಳೂರಿನ ಪಾಂಡೇಶ್ವರ ರೊಸಾರಿಯೋ ಚರ್ಚ್ ಹಿಂಬದಿ ಗುರುವಾರ ಮುಂಜಾನೆ ನಡೆದಿದೆ. ಮೃತರು ಆಟೋ ಚಾಲಕರಾಗಿದ್ದು ರಾಜು(52) ಮತ್ತು

ಮಂಗಳೂರು, ಜೂನ್ 26: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ  ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಬುಧವಾರ ಬೆಳಗ್ಗೆ ನಾಲ್ವರು‌ ದುರ್ಮರಣ ಹೊಂದಿದ್ದಾರೆ. ಈ ಪ್ರದೇಶದಲ್ಲಿ ರಾತ್ರಿ ಇಡೀ ಭಾರಿ ಮಳೆ ಸುರಿದಿತ್ತು. ಇದರಿಂದಾಗಿ ಅಬೂಬಕ್ಕರ್ ಎಂಬವರ ಮನೆಯ ಗೋಡೆ ಕುಸಿದುಬಿದ್ದಿದೆ. ಮನೆಯೊಳಗಿದ್ದ ಯಾಸಿರ್ (45),

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್ ಲಾರಿಯೊಂದು ಹೆದ್ದಾರಿ ಬದಿಯ ಚರಂಡಿಗೆ ಬಿದ್ದಿದ್ದು, ಲಾರಿಯ ಕಂಟೈನರ್ ಹೆದ್ದಾರಿಯಲ್ಲಿ ಅಡ್ಡಲಾಗಿ ತಿರುಗಿ ನಿಂತ ಘಟನೆ ಉಪ್ಪಿನಂಗಡಿ ಬಳಿಯ ಕೂಟೇಲು ಎಂಬಲ್ಲಿ ಇಂದು ನಡೆದಿದೆ. ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿರುದ್ಧ ದಿಕ್ಕಿನಲ್ಲಿ

ಮಂಗಳೂರು, ಜೂನ್.25: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್ ಕುಟುಂಬ ಸಮೇತ ಭೇಟಿ ನೀಡಿ ಮಹಾಪೂಜೆ, ಆಶ್ಲೇಷ ಬಲಿ ಪೂಜೆಯಲ್ಲಿ ಭಾಗಿಯಾದರು. ಕುಟುಂಬ ಸಮೇತರಾಗಿ ಆಗಮಿಸಿದ ಡಿಕೆ ಶಿವಕುಮಾರ್ ಅವರು ಆನೆ ಬಳಿ ಆಶೀರ್ವಾದ ಪಡೆದರು. ಸುಬ್ರಹ್ಮಣ್ಯ ದೇವಾಲಯದ ಆಡಳಿತ

ಮಂಗಳೂರು: ಮಂಗಳೂರು ಹೊರವಲಯದಲ್ಲಿರುವ ಪಾವೂರು ಉಳಿಯ ದ್ವೀಪವು ಅಕ್ರಮ ಮರಳು ದಂಧೆಯಿಂದಾಗಿ ನಿಧಾನವಾಗಿ ಕಣ್ಮರೆಯಾಗುತ್ತಿದ್ದು, ಪರಿಣಾಮ ಈ ಪ್ರದೇಶದಲ್ಲಿ ಮೂರು ತಲೆಮಾರುಗಳಿಂದ ವಾಸವಿರುವ 50ಕ್ಕೂ ಅಧಿಕ ಕುಟುಂಬಗಳು ಭಯ, ಆತಂಕದಲ್ಲೇ ಜೀವನ ಸಾಗಿಸುವಂತಾಗಿದೆ. ದ್ವೀಪ ಉಳಿಸಿ, ಜನತೆಯ ಬದುಕು ರಕ್ಷಿಸಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಕಥೋಲಿಕ್ ಸಭಾ ಮಂಗಳೂರು ಪ್ರದೇಶ್,