ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಹೈದರಾಬಾದ್: ಪುಷ್ಪ-2: ದಿ ರೂಲ್ ಸಿನಿಮಾದ ಪ್ರೀಮಿಯರ್ ಶೋ ವೇಳೆಯಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದ ಮಹಿಳೆಯ ಕುಟುಂಬಕ್ಕೆ ರೂ. 25 ಲಕ್ಷ ಆರ್ಥಿಕ ನೆರವನ್ನು ನಟ ಅಲ್ಲು ಅರ್ಜುನ್ ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋ ಫೋಸ್ಟ್ ಮಾಡಿರುವ ಅಲ್ಲು ಅರ್ಜುನ್, ಈ ನೋವಿನ

ಹೈದರಾಬಾದ್: ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ

ನಿತೇಶ್ ತಿವಾರಿ ನಿರ್ದೇಶನದ ಬಹು ನಿರೀಕ್ಷಿತ 'ರಾಮಾಯಣ' ಚಿತ್ರದಲ್ಲಿ ಸೀತಾ ಪಾತ್ರ ಮಾಡುತ್ತಿರುವ ನಟಿ ಸಾಯಿ ಪಲ್ಲವಿ, ಪಾತ್ರಕ್ಕಾಗಿ ಸಸ್ಯಾಹಾರವನ್ನು ಮಾತ್ರ ಸೇವಿಸುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ವದಂತಿಗಳ ವಿರುದ್ಧ ಅವರು ಕಿಡಿಕಾರಿದ್ದು, ಅನಗತ್ಯವಾಗಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕಾನೂನು ಮೂಲಕ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ

ಗ್ವಾಲಿಯರ್: ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ 2: ದಿ ರೂಲ್ ವೀಕ್ಷಣೆ ವೇಳೆ ಚಿತ್ರಮಂದಿರದ ಕ್ಯಾಂಟೀನ್ ಮಾಲೀಕನೊಬ್ಬ ಪ್ರೇಕ್ಷಕನ ಕಿವಿ ಕಚ್ಚಿ, ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಭಾನುವಾರ ಇಂದರ್‌ಗಂಜ್ ಪ್ರದೇಶದ ಕೈಲಾಶ್ ಟಾಕೀಸ್‌ನಲ್ಲಿ ಈ ಘಟನೆ ನಡೆದಿದೆ. ಚಿತ್ರದ ಇಂಟರ್ವಲ್ ಸಮಯದಲ್ಲಿ ಪ್ರೇಕ್ಷಕ

ಕಪೂರ್ ಕುಟುಂಬದ ಪ್ರಮುಖ ಸದಸ್ಯರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ ಕಪೂರ್ 100ನೇ ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಜೊತೆಗೆ ಒಂದು ಅಮೂಲ್ಯ ಉಡುಗೊರೆಯನ್ನೂ ನೀಡಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ಕಪೂರ್ ಕುಟುಂಬ ಕೊಟ್ಟಿರುವ ಕೊಡುಗೆ ಅಪಾರವಾದುದು. ಈಗ ಹೆಮ್ಮರವಾಗಿ ಬೆಳೆದಿರುವ ಬಾಲಿವುಡ್​ಗೆಅಡಿಪಾಯ ಹಾಕಿದ್ದೆ ಕಪೂರ್ ಕುಟುಂಬದ ಪೃಥ್ವಿರಾಜ್ ಕಪೂರ್. ಪೃಥ್ವಿರಾಜ್

ನಟಿ ರಚಿತಾ ರಾಮ್ ಮತ್ತು ನಟ ಸತೀಶ್ ನೀನಾಸಂ ಅವರು ಮತ್ತೆ ಒಂದಾಗಿದ್ದರೆ. ‘ಅಯೋಗ್ಯ’ ಸಿನಿಮಾದಲ್ಲಿ ಜನರನ್ನು ರಂಜಿಸಿದ್ದ ಅವರು ಈಗ ‘ಅಯೋಗ್ಯ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಕ್ಸ್ ಆಫೀಸ್​ನಲ್ಲಿ ಸೂಪರ್ ಹಿಟ್ ಆದ ‘ಅಯೋಗ್ಯ’ ಸಿನಿಮಾ ಬಿಡುಗಡೆಯಾಗಿ 6 ವರ್ಷ ಕಳೆದಿದೆ. ಈಗ ‘ಅಯೋಗ್ಯ 2’ ಚಿತ್ರ ಸೆಟ್ಟೇರಿದೆ. ಬೆಂಗಳೂರಿನ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನು ಕೆಲವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿ ನಡೆಯುತ್ತಿದ್ದು, ಕಳೆದ ಕೆಲ ದಿನಗಳಲ್ಲಿ ದರ್ಶನ್, ಪವಿತ್ರಾ ಗೌಡ ಹಾಗೂ ದರ್ಶನ್​ರ ಕಾರು ಚಾಲಕನ ಪರವಾಗಿ ವಕೀಲರುಗಳು ತಮ್ಮ ವಾದಗಳನ್ನು ಮಂಡಿಸಿದ್ದಾರೆ. ಇಂದು (ಡಿಸೆಂಬರ್ 06) ತನಿಖಾಧಿಕಾರಿಗಳ

ನಟಿ ರಮ್ಯಾ ಅವರು ಸಿನಿಮಾವನ್ನು ಬಿಟ್ಟರೂ ಅವರನ್ನು ಸಿನಿಮಾ ಬಿಡುತ್ತಿಲ್ಲ. ಹೌದು, ರಮ್ಯಾ ನಟಿಸಿರುವ ಒಂದು ಸಿನಿಮಾ ಈಗ ಬಿಡುಗಡೆ ಸಜ್ಜಾಗಿದೆ. ಇದನ್ನು ಹೊಸ ಸಿನಿಮಾ ಎನ್ನಬೇಕೋ ಅಥವಾ ಹಳೇ ಸಿನಿಮಾ ಎನ್ನಬೇಕು ಎಂಬುದು ಪ್ರೇಕ್ಷಕರಿಗೆ ಬಿಟ್ಟಿದ್ದು. ಯಾಕೆಂದರೆ, ಈ ಸಿನಿಮಾ ಸೆಟ್ಟೇರಿದ್ದು ಹಲವು ವರ್ಷಗಳ ಹಿಂದೆ. ಒಂದಷ್ಟು ಕಾರಣಗಳಿಂದ ಈ

ಉಡುಪಿ :  ರಾಗ ತಪಸ್ವಿ, ಗಾನ ಯೋಗಿ ಎಂದೆ ಪ್ರಸಿದ್ಧರಾಗಿದ್ದ ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ತಿಮ್ಮಯ್ಯ ಹೆಗಡೆ (94) ಡಿ.1ರಂದು ನಿಧನರಾದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕತರಾದ ಇವರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಶಿರಸಿ ಸಮೀಪದ ಬಾಳೆಹದ್ದದಲ್ಲಿ ಜನಿಸಿದ ಕೃಷ್ಣ ಭಾಗವತರು ಏಳು ದಶಕಗಳಿಗೂ ಅಧಿಕ

ಅನಾರೋಗ್ಯದ ಕಾರಣದಿಂದ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ಅವರು ರೆಗ್ಯುಲರ್​ ಬೇಲ್​ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಅದೇ ರೀತಿ, ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್ ಮುಂತಾದ ಆರೋಪಿಗಳು ಕೂಡ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಹೈಕೋರ್ಟ್​ನಲ್ಲಿ ವಾದ-ಪ್ರತಿವಾದ ನಡೆಯುತ್ತಿದೆ. ಸದ್ಯಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು