ಉಡುಪಿ:ಇತಿಹಾಸ ಪ್ರಸಿದ್ಧ ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಾನುವಾರದ೦ದು ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಲಕ್ಷತುಳಸಿ ಅರ್ಚನೆಯ ಕಾರ್ಯಕ್ರಮವು ಬಹಳ ಅದ್ದೂರಿಯಿ೦ದ ನಡೆಸಿ ನ೦ತರ ಮಧ್ಯಾಹ್ನ ಶ್ರೀದೇವರಿಗೆ ವಿಶೇಷ ಹೂವಿನ ಅಲ೦ಕಾರದೊ೦ದಿಗೆ ಮಹಾಪೂಜೆಯು ನಡೆಸಲಾಯಿತು.ಅಪಾರ ಮ೦ದಿ ಭಕ್ತರು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.
ಧರ್ಮಸ್ಥಳ:,ಜು 13. ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿ , ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಧರ್ಮಸ್ಥಳ ಪೊಲೀಸ್ ರಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಸಕ್ರಿಯ ಬಿಜೆಪಿ ಕಾರ್ಯಕರ್ತರಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಿಂದ ಮೂಡುಶೆಡ್ಡೆಗೆ ಹೋಗುವ ಮಾರ್ಗದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವ ರೌಡಿಶೀಟರ್ ಸಹಿತ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ರೌಡಿಶೀಟರ್‌ಮೂಡುಶೆಡ್ಡೆಯ ಮೊಹಮ್ಮದ್ ಶಾರೂಕ್(27) ಮತ್ತು ತೋಕೂರಿನ ಜಗದೀಶ್(45) ಬಂಧಿತ ಆರೋಪಿಗಳು ಎಂದು ತಿಳಿಯಲಾಗಿದೆ. ಇವರಿಂದ 4 ಗ್ರಾಂ
ಉಡುಪಿ:ಜು 10. ಇಲ್ಲಿನ ಸಂತೆಕಟ್ಟೆ ಬಳಿ ನಿರ್ಮಾಣವಾಗುತ್ತಿದ್ದ ಅಂಡರ್ ಪಾಸ್ ನಿರ್ಮಾಣ ಪ್ರದೇಶದಲ್ಲಿ ಸರ್ವೀಸ್ ರಸ್ತೆ ಕುಸಿದು ಸುಮಾರು 350ಕ್ಕೂ ಹೆಚ್ಚು ಮನೆ , ಹಾಗೂ ಅಂಗಡಿ ಮುಂಗಟ್ಟುಗಳಿಗೆ ರಸ್ತೆಯೇ ಇಲ್ಲದಂತಾಗಿದೆ. ಅಂಡರ್‌ಪಾಸ್ ನಿರ್ಮಾಣದ ಸನಿಹವಿದ್ದ ತಡೆಗೋಡೆ ಜುಲೈ 10 ರ ಸೋಮವಾರ ಬೆಳಿಗ್ಗೆ ಭಾಗಶಃ ಕುಸಿದಿದೆ. ಇದರಿಂದಾಗಿ ಸರ್ವಿಸ್
ಕಾರವಾರ (ಉತ್ತರ ಕನ್ನಡ): ರಾಜ್ಯದಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ 21 ಮಂದಿ ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದ್ದಾರೆ. ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿ ಇಬ್ಬರು ಮೃತಪಟ್ಟ ಸಂಬಂಧ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮಕ್ಕೆ ಭೇಟಿ ನೀಡಿದ
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ 40 ಶಾಸಕರು ಮತ್ತು ಉದ್ಧವ್ ಠಾಕ್ರೆ ಬಣದ 14 ಶಾಸಕರಿಗೆ ತಮ್ಮ ವಿರುದ್ಧದ ಅನರ್ಹತೆ ಅರ್ಜಿಗಳಿಗೆ ಉತ್ತರ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಶನಿವಾರ ಹೇಳಿದ್ದಾರೆ. ಕೇಂದ್ರ ಚುನಾವಣಾ ಆಯೋಗದಿಂದ ಶಿವಸೇನೆಯ ಸಂವಿಧಾನದ
ಮುಂಬೈ: ಮಹಾರಾಷ್ಟ್ರ ಸರ್ಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದ್ದು, ಮುಖ್ಯಮಂತ್ರಿ ಏಕನಾಥ ಶಿಂದೆಯವರಿಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ಶಿವಸೇನಾದ ಉದ್ಧವ್ ಠಾಕ್ರೆ ಬಣದ ಆದಿತ್ಯ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರ ಸಂಪುಟ ವಿಸ್ತರಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಉದ್ಧವ್ ಠಾಕ್ರೆ ಪಾಳೆಯದ ಸದಸ್ಯ ಆದಿತ್ಯ ಠಾಕ್ರೆ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನೇತೃತ್ವದಲ್ಲಿ
ಉಡುಪಿ:ಜು 6. ಭಾರೀ ಮಳೆಯಿಂದ ತತ್ತರಿಸಿರುವ ಉಡುಪಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಶುಕ್ರವಾರ ಬಜೆಟ್ ಮುಗಿದ ಕೂಡಲೇ ಉಡುಪಿಗೆ ತೆರಳುವೆ ಎಂದರು. ಎಲ್ಲಾ ಅಧಿಕಾರಿಗಳ ಸಭೆ ನಡೆಸಿ
ಉಡುಪಿ: ಜಿಲ್ಲೆಯಾದ್ಯಂತ ಗುರುವಾರವೂ ಧಾರಾಕಾರ ಮಳೆ ಸುರಿಯುತ್ತಿದೆ.ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ವಿವಿಧೆಡೆಗಳಲ್ಲಿ ನೀರು ತುಂಬಿದ್ದು, ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳಿಸಲಾಗಿದೆ. ಆ ಕಾರ್ಯಕ್ಕೆ ಕೆಲವೆಡೆಗಳಲ್ಲಿ ಬೋಟುಗಳನ್ನು ಬಳಸಲಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮರವಂತೆ, ಉದ್ಯಾವರ, ಪಡುಕರೆ, ಕಾಪು ಮೊದಲಾದೆಡೆಗಳಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ. ಮಳೆಯೊಂದಿಗೆ ವೇಗದ ಗಾಳಿ ಬೀಸುವ
ಕರಾವಳಿ ಕರ್ನಾಟಕದಲ್ಲಿ (Coastal Karnataka) ಮಳೆಯ ಅಬ್ಬರ ಮುಂದುವರಿದಿದೆ. ಬುಧವಾರ ಬೆಳಿಗ್ಗೆ ವರೆಗೆ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಜುಲೈ 4 ರಿಂದ ಜುಲೈ