ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ನಲ್ಲಿ ಜಗದೀಶ್ ಶೆಟ್ಟರ್ ಅವರು 100ಕ್ಕೆ 100 ಗೆಲ್ಲುತ್ತಾರೆ ಎಂದು ರಕ್ತದಲ್ಲಿ ಪತ್ರ ಬರೆದಿದ್ದ ಯುವಕ ಮಂಜುನಾಥ್ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​ ಭೇಟಿ ಅವರು ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಕ್ತದಲ್ಲಿ ಬರೆದು ಕೊಡುತ್ತೇನೆ ಶೆಟ್ಟರ್ ಗೆಲ್ಲುವುದಿಲ್ಲ ಎಂದು ಹೇಳಿಕೆ ನೀಡಿದ್ದರು.

ಕಾಪು:ಏ 27. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮೀನುಗಾರರಿಗೆ ಸಬ್ಸಿಡಿ ದರದಲ್ಲಿ ಡೀಸೆಲ್, ವಿಮೆ, ಹಾಗೂ ಮೀನುಗಾರ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಈ ಪ್ರಮುಖ ಮೂರು ಯೋಜನೆಯ ಭರವಸೆಯನ್ನು ರಾಹುಲ್ ಗಾಂಧಿ ಘೋಷಿಸಿದ್ದಾರೆ. ಗುರುವಾರದ೦ದು ಕಾಪುವಿನ ಉಚ್ಚಿಲ ಶಾಲಿನಿ ಡಾ.ಜಿ. ಶಂಕರ್ ಸಭಾಂಗಣದಲ್ಲಿ ಆಯೋಜಿಸಿದ ಮೀನುಗಾರರ ಸಂವಾದ ಕಾರ್ಯಕ್ರಮದಲ್ಲಿ

ಮಂಗಳೂರು:ಏ 27. ಬೆಳ್ತಂಗಡಿಯಿಂದ ಈ ಬಾರಿ ರಕ್ಷಿತ್ ಶಿವರಾಂ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಅವರನ್ನು ಗೆಲ್ಲಿಸಬೇಕೆಂದು ಬಿಲ್ಲವ ಸಮುದಾಯ ಪ್ರಯತ್ನ ಪಡುತ್ತಿದೆ. ಹಾಗಾಗಿ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಹರೀಶ್ ಪೂಂಜಾ ಅವರಿಗೆ ಈ ಬಾರಿ ಗೆಲುವಿನ ದಾರಿ ಕಠಿಣವಾಗಲಿದೆ ಎನ್ನಲಾಗುತ್ತಿದೆ. ರಕ್ಷಿತ್ ಶಿವರಾಂ ಅವರು ಸಮಾಜ ಸೇವೆಯಲ್ಲಿ

ಮಂಗಳೂರು: ಕಾಂಗ್ರೆಸ್ ಮುಖಂಡ ಗಂಗಾಧರ ಗೌಡ ಅವರ ಎರಡು ವಸತಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ಶಿಕ್ಷಣ ಸಂಸ್ಥೆಯ ಮೇಲೆ ಆದಾಯ ತೆರಿಗೆ ಇಲಾಖೆ ಸೋಮವಾರ ದಾಳಿ ನಡೆಸಿದೆ. ಈ ಶಿಕ್ಷಣ ಸಂಸ್ಥೆಯು ಗಂಗಾಧರಗೌಡ ಅವರ ಪುತ್ರ ರಂಜನ್ ಗೌಡ ಅವರಿಗೆ ಸೇರಿದ್ದಾಗಿದೆ. ಗಂಗಾಧರಗೌಡರು 2018 ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ಗೆ

ಪುಣೆ: ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್-ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, 22 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. ದುರ್ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಹಾಗೂ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣ ನಡೆಸುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ

ಬೆಳ್ತಂಗಡಿ; ಏ 23 . ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ದೇವಕಿಯವರ ಪುತ್ರಿ ಕೌಶಲ್ಯ ಮೃತಪಟ್ಟ ನವವಿವಾಹಿತೆ. ಇನ್ನು ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ

ತುಮಕೂರು: ತುಮಕೂರಿನ ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಸ್ವಾಮಿಗಳಿಗೆ ಇಂದು ಶ್ರೀಮಠದಲ್ಲಿ ಜಂಗಮಪಟ್ಟಾಧಿಕಾರ ಮಹೋತ್ಸವ ನೆರವೇರಿತು. ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಸ್ವಾಮಿಗಳಿಗೆ ಶ್ರೀ ಶಿವಸಿದ್ದೇಶ್ವರ ಎಂಬ ಯೋಗ ಪಟ್ಟ ನೀಡಲಾಗಿದೆ. ಸಿದ್ಧಗಂಗೆಯ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಸೇರಿದಂತೆ ಹಲವು ಮಠಾಧ್ಯಕ್ಷರು ಹಾಗೂ ಗಣ್ಯರು

ತಿರುವನಂತಪುರಂ: ನಾಳೆ ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕ್ಸೇವಿಯರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕೇರಳಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ

ಕಾಸರಗೋಡು:ಏ, 22. ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಹಿತ ದಂಪತಿ ಸೇರಿದಂತೆ ನಾಲ್ವರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೇಲ್ಪರಂಬ ದ ಅಬೂಬಕ್ಕರ್ (35), ಪತ್ನಿ ಅಮೀನಾ ಅಸರ್ (23), ಬೆಂಗಳೂರಿನ ಸೂರಜ್ (32) ಮತ್ತು ಎ.ಕೆ ವಸೀಮ್ (32) ಎಂದು ಗುರುತಿಸಲಾಗಿದೆ. ಬಂಧಿತರಿಂದ 150 ಗ್ರಾಂ

ಸುಳ್ಯ:ಏ, 21. 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಲಾ ವಿಭಾಗದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ವಂಶಸ್ಥರಾದ ಮಂಜುಶ್ರೀ ಕೆದಂಬಾಡಿ ಅವರು ಪಿಯು ಪರೀಕ್ಷೆಯಲ್ಲಿ 591 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಮಂಜುಶ್ರೀ ಕೆದಂಬಾಡಿ ಸುಳ್ಯದ ಉಬೇರಡ್ಕದ ತೀರ್ಥರಾಮ ಕೆದಂಬಾಡಿ