ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ಕಾಲ ಲೋಕಾಯುಕ್ತ ಪೊಲೀಸ್ ಕಸ್ಟಡಿಗೆ ನೀಡಿ ಮಂಗಳವಾರ ಆದೇಶ ಹೊರಡಿಸಿದೆ. ಜಾಮೀನು ರದ್ದಾದ ನಂತರ ನಿನ್ನೆ ಸಂಜೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಿದ್ದ ಲೋಕಾಯುಕ್ತ ಪೊಲೀಸರು, ಇಂದು

ಹಾಸನ: ಹಾಸನ ಜಿಲ್ಲೆಯ ಬೇಲೂರಿನಲ್ಲಿ ಕುರಾನ್ ಪಠಣ ವಿರೋಧಿಸಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಬೇಲೂರು ಚನ್ನಕೇಶವ ರಥೋತ್ಸವದ ವೇಳೆ ಕುರಾನ್ ಪಠಣ ರದ್ದುಗೊಳಿಸುವಂತೆ ಆಗ್ರಹಿಸಿ ಬಜರಂಗದಳ

ಬೆಂಗಳೂರು: ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ್ದು, ಬಿಜೆಪಿ ಶಾಸಕರಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರದಲ್ಲಿ ಸೋಮವಾರ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರ ಮನೆಯನ್ನು ಗುರಿಯಾಗಿಸಿಕೊಂಡು ಬಂಜಾರ ಸಮುದಾಯದ ಸದಸ್ಯರು ಕಲ್ಲು ತೂರಾಟ ನಡೆಸಿದರು. ರಾಜ್ಯ ಸರ್ಕಾರವು ಪರಿಶಿಷ್ಟ ಸಮುದಾಯಗಳಿಗೆ (ಎಸ್‌ಸಿ) ಒಳ ಮೀಸಲಾತಿ ಘೋಷಿಸಿರುವುದನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪಟ್ಟಣದಲ್ಲಿ ನಿಷೇಧಾಜ್ಞೆ (ಸೆಕ್ಷನ್‌ 144) ಜಾರಿಗೊಳಿಸಲಾಗಿದೆ. ಪ್ರತಿಭಟನೆಯಲ್ಲಿ ಕೆಲವು

ಬೆಂಗಳೂರು: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ದಾವೆಯನ್ನು ಪರಿಗಣಿಸಿರುವ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಲು ಶುಕ್ರವಾರ ಆದೇಶಿಸಿದ್ದು, ರೂಪಾ ಅವರಿಗೆ ಸಮನ್ಸ್‌ ಜಾರಿ ಮಾಡಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ರೂಪಾ

ಬೆಂಗಳೂರು: ಮುಷ್ಕರವನ್ನು ಹಿಂತೆಗೆದುಕೊಂಡು ಕೆಲಸಕ್ಕೆ ಮರಳಬೇಕು ಅಥವಾ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು 40 ದಿನಗಳಿಂದ ಮುಷ್ಕರ ನಡೆಸುತ್ತಿರುವ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಅಡಿಯ ಗುತ್ತಿಗೆ ನೌಕರರಿಗೆ ಅಂತಿಮ ಎಚ್ಚರಿಕೆಯನ್ನು ನೀಡಲಾಗಿದೆ. ಎನ್ಎಚ್ಎಂ ಹೊರಡಿಸಿದ ಪತ್ರಿಕಾ ಪ್ರಕಟಣೆಯು, ತುರ್ತು ಸಭೆಯನ್ನು ಆಯೋಜಿಸಲು ಮತ್ತು 48 ಗಂಟೆಗಳ ಒಳಗೆ ಕೆಲಸಕ್ಕೆ ಹಿಂತಿರುಗದ

ಬೆಂಗಳೂರು: ಬಹು ನಿರೀಕ್ಷಿತ ಕೆ ಆರ್‌ ಪುರಂ-ವೈಟ್‌ಫೀಲ್ಡ್‌ ಮೆಟ್ರೋ ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಉದ್ಘಾಟನೆ ಮಾಡಿದರು. ಬೆಂಗಳೂರಿನ ಕೆಆರ್‌ಪುರಂ-ವೈಟ್‌ಫೀಲ್ಡ್‌ ಮೆಟ್ರೋ ಮಾರ್ಗ ಉದ್ಘಾಟನೆ ಮಾಡಿದ ಬಳಿಕ ಮೋದಿಯವರು, ನಾಲ್ಕು ಕಿ.ಮೀ ವರೆಗೂ ಮೆಟ್ರೋದಲ್ಲಿ ಪ್ರಯಾಣ ಮಾಡಿದರು. ಮೆಟ್ರೋ ರೈಲು ಸಂಚಾರದ ವೇಳೆ ಮೋದಿಯವರು ಮೆಟ್ರೋ ಸಿಬ್ಬಂದಿಗಳು,

ಚಿಕ್ಕೋಡಿ: ದೇವರಿಗೆ ನೈವೇದ್ಯ ಕೊಟ್ಟು ಬರುತ್ತಿದ್ದ ಇಬ್ಬರು ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಸಾವಿಗೀಡಾದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದಲ್ಲಿ ನಡೆದಿದೆ. ಶ್ರೀಧರ್ ಪಾರಿಸ್ ಹೊಸೂರು (15) ಹಾಗೂ ಹರ್ಷಿತಾ ಶೀತಲ ಚಿಪ್ಪಾಡಿ (8) ಮೃತ ಮಕ್ಕಳು. ಯುಗಾದಿ ಹಬ್ಬದ ಪ್ರಯುಕ್ತ ದೇವರ ದರ್ಶನಕ್ಕೆ

ಚಿಕ್ಕಮಗಳೂರು: ತರೀಕೆರೆ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಾಹನ‌ ತಪಾಸಣೆ ಮಾಡುವಾಗ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಅಕ್ರಮ ಚಿನ್ನ ಪತ್ತೆಯಾಗಿದೆ. ಎಸ್ಪಿ‌ ಉಮಾ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಚರಣೆ ಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದ ಕೋಟ್ಯಾಂತರ ಮೌಲ್ಯದ ಚಿನ್ನ‌ ವಶಕ್ಕೆ ಪಡೆದ ಪೊಲೀಸ್ ತಂಡ. ತರೀಕೆರೆ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ

ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ಗುರುವಾರ ತೆರವುಗೊಳಿಸಿದ್ದು, ಆದೇಶದಿಂದ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬಾರದು ಮತ್ತು ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಕೋರಿ ಯಾವುದೇ ಉಪಜಾತಿ,