ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಿನಲ್ಲಿ ಕಮಲ ಅರಳಿದ್ದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಒಂದೇ ಒಂದು ಮತದಿಂದ ಗೆಲುವು ಸಾಧಿಸಿದ್ದಾರೆ. ಇದೇ ಮೊದಲ ಬಾರಿಗೆ ಕಲಬುರಗಿಯಲ್ಲಿ ಬಿಜೆಪಿ ಸ್ವತಂತ್ರ್ಯವಾಗಿ ಗೆಲುವು ಸಾಧಿಸಿದೆ. ಮೇಯರ್ ಆಗಿ ಬಿಜೆಪಿಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕ್ಷೇತ್ರ ಆಯ್ಕೆ ಗೊಂದಲ ಮುಂದುವರಿದಿದೆ. ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿಯಲ್ಲಿ ಸ್ಪರ್ಧಿಸಿ ಗೆದ್ದು ಈ ಬಾರಿ ಅಲ್ಲಿ ಸ್ಪರ್ಧಿಸುವುದಿಲ್ಲ ಎಂದು ಆರಂಭದಲ್ಲಿಯೇ ಹೇಳಿದ್ದರು.ಕೋಲಾರದಲ್ಲಿ ಸ್ಪರ್ಧಿಸುವುದಾಗಿ ಹೋಗಿ ಅಲ್ಲಿ ಘೋಷಣೆ ಮಾಡಿ ಸರ್ವೆ ಮಾಡಿಸಿ

ಬೆಂಗಳೂರು: ಹಿಂದೂ ಧರ್ಮ, ಸಾಹಿತ್ಯ ಇತ್ಯಾದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುವ ನಟ ಚೇತನ್ ಅಹಿಂಸ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್‌ ಮಾಡಿದ್ದರು ಎಂದು ಶಿವಕುಮಾರ್ ಎಂಬುವವರು ನೀಡಿದ ದೂರಿನಡಿ ನಟ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿ ಎಫ್ಐಆರ್ ದಾಖಲಿಸಿದ್ದಾರೆ. ನಟ

ಬೆಳಗಾವಿ: ವಿಧಾನಸಭೆ ಚುನಾವಣೆ ಗೆಲ್ಲಲು ಪ್ರತಿಪಕ್ಷ ಕಾಂಗ್ರೆಸ್ ರಾಜ್ಯದ ಜನತೆಗೆ ಹಲವು ಗ್ಯಾರಂಟಿಗಳನ್ನು ನೀಡುತ್ತಿದ್ದು, ಸೋಮವಾರ ಯುವ ನಿಧಿ ತನ್ನ 4ನೇ ಗ್ಯಾರಂಟಿಯನ್ನು ಘೋಷಿಸಿದೆ. ಈ ಮೂಲಕ ಚುನಾವಣೆಯಲ್ಲಿ ಯುವಕರ ಮತ ಸೆಳೆಯಲು ಮುಂದಾಗಿದೆ. ಇಂದು ಬೆಳಗಾವಿಯಲ್ಲಿ ನಡೆದ ಯುವ ಕ್ರಾತಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್

ಬೆಂಗಳೂರು: 2018ರಲ್ಲಿ ಬಹುತೇಕ ಲಿಂಗಾಯತ ಮತಗಳನ್ನು ಪಡೆದಿದ್ದ ಬಿಜೆಪಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಅದೇ ಮ್ಯಾಜಿಕ್ ನಿರೀಕ್ಷಿಸುವಂತಿಲ್ಲ, ಸದ್ಯ ನಡೆಯುತ್ತಿರುವ ಬದಲಾವಣೆ ಕೇಸರಿ ಪಕ್ಷದ ನಾಯಕರನ್ನು ಆತಂಕಕ್ಕೀಡು ಮಾಡಿದೆ. ಬಿಜೆಪಿ ವಿರುದ್ಧ ಬಹಿರಂಗವಾಗಿ ಕೆಲಸ ಮಾಡುತ್ತಿರುವ ಜಾಗತಿಕ ಲಿಂಗಾಯತ ಚಳುವಳಿ, ಪಂಚಮಸಾಲಿ ಗುಂಪುಗಳು ಮತ್ತು ರಾಷ್ಟ್ರೀಯ ಬಸವ ದಳದ ಸದಸ್ಯರು ಈ

ಬೆಂಗಳೂರು: ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಶುಕ್ರವಾರ ರಾತ್ರಿ ಮಳೆ ನೀರಿನಿಂದ ತುಂಬಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಈ ಕುರಿತ ವಿಡಿಯೋವೊಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಕಳೆದ ವರ್ಷವೇ ಈ ಹೆದ್ದಾರಿ ಮಳೆಯಿಂದ ಮುಳುಗಿತ್ತು.

ದಿನದಿ೦ದ ದಿನಕ್ಕೆ ಚುನಾವಣೆಯ ಬಗ್ಗೆ ಮತದಾರರಲ್ಲಿ ಕುತೂಹಲ ಮೂಡಿಸುವುದರೊ೦ದಿಗೆ ರಾಜಕೀಯ ಪಕ್ಷದಲ್ಲಿಯೂ ಭಾರೀ ಸೀಟು ಆಕಾ೦ಕ್ಷಿಗಳ ಪಟ್ಟಿಯು ದಿನದಿ೦ದ ದಿನಕ್ಕೆ ಹೆಚ್ಚುತ್ತಿದೆ. ಬಿಜೆಪಿಯು ತಮ್ಮ ಎದುರಾಳಿ ಪಕ್ಷಗಳಾದ ಕಾ೦ಗ್ರೆಸ್,ಜೆಡಿಎಸ್ ಗೆ ಸಡ್ಡುಹೊಡುವುದರಲ್ಲಿ ಹಿ೦ದಿಲ್ಲವಾದರೂ ರಾಜ್ಯದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲು ರಾಜ್ಯದ ಬಿಜೆಪಿ ಮುಖ೦ಡರಿ೦ದ ಸಾಧ್ಯವಾಗುತ್ತಿಲ್ಲ ಅದಕ್ಕಾಗಿಯೇ ಕೇ೦ದ್ರ

ಬೆಂಗಳೂರು: ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ರೈಲು ನಿಲ್ದಾಣದಲ್ಲಿ ಡ್ರಮ್ ನಲ್ಲಿ ಇರಿಸಲಾಗಿದ್ದ ಮಹಿಳೆಯ ಮೃತದೇಹ ಪತ್ತೆ ಪ್ರಕರಣವನ್ನು ಬೇಧಿಸುವಲ್ಲಿ ರಾಜ್ಯ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ.  ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದ್ದು, ಇತರ ಐವರ ಹುಡುಕಾಟ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬಂಧಿತರನ್ನು ಕಮಾಲ್, ತನ್ವೀರ್ ಮತ್ತು ಶಕೀಬ್ ಎಂದು ಗುರುತಿಸಲಾಗಿದೆ.

ಹಾವೇರಿ: ಬೀರೇಶ್ವರ ನಗರದಲ್ಲಿರುವ ವಿಧಾನ ಪರಿಷತ್‌ ಸದಸ್ಯ ಆರ್‌.ಶಂಕರ್‌ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. ಶಂಕರ್‌ ಅವರ ಗೃಹ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಗೆ ವಿತರಣೆ ಮಾಡಲು ಸಂಗ್ರಹಿಸಿಟ್ಟಿದ್ದ ಶಂಕರ್‌ ಭಾವಚಿತ್ರ ಇರುವ ಸೀರೆ ಬಾಕ್ಸ್,‌ ತಟ್ಟೆ– ಲೋಟ ಹಾಗೂ ಎಲ್‌ಕೆಜಿಯಿಂದ ಪದವಿ ಕಾಲೇಜುಗಳವರೆಗೆ

ನವದೆಹಲಿ: ಹಿರಿಯ ಪತ್ರಕರ್ತ ವೇದ್ ಪ್ರತಾಪ್ ವೈದಿಕ್ ಅವರು ಮಂಗಳವಾರ ಗುರುಗ್ರಾಮದ ತಮ್ಮ ಮನೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. "ಹಿರಿಯ ಪತ್ರಕರ್ತ ವೈದಿಕ್ ಅವರು ಇಂದು ಬೆಳಗ್ಗೆ ಅವರ ಗುರುಗ್ರಾಮದ ಮನೆಯಲ್ಲಿ ಬಾತ್ ರೂಮ್ ಗೆ ಹೋದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು