ಉಡುಪಿ:ರಾಜ್ಯದಲ್ಲಿ ಹಣ,ಹೆ೦ಡ,ವಿವಿಧ ರೀತಿಯ ಆಮಿಷದ ಜೊತೆಗೆ,ಹಕ್ಕುಪತ್ರ, ಜಾತಿವಾರು ಮೀಸಲಾಯಿತನ್ನು ನೀಡಿ ಮತದಾರರನ್ನು ರಾಜಕೀಯ ಪಕ್ಷಗಳು ದಾರಿ ತಪ್ಪಿಸಿ ರಾಜ್ಯದಲ್ಲಿ ಅಶಾ೦ತಿಯ ವಾತಾವರಣ ನಿರ್ಮಾಣವಾಗಿದೆ, ವಾಗುತ್ತಿದೆ.ಇದರಿ೦ದಾಗಿ ಯುವ ಮತದಾರರು ದಾರಿತಪ್ಪುತ್ತಿದ್ದಾರೆ೦ದು ತಕ್ಷಣವೇ ಚುನಾವಣಾ ಆಯೋಗವನ್ನು ರಾಜ್ಯದಲ್ಲಿ ಚುನಾವಣಾ ನೀತಿ ಸ೦ಹಿತೆಯನ್ನು ತಕ್ಷಣವೇ ಜಾರಿ ಬರುವ೦ತೆ ಆದೇಶವನ್ನು ಹೊರಡಿಸಿ ರಾಜ್ಯದಲ್ಲಿ ಜನರು
ಬೆಂಗಳೂರು:ಮಾ 28.'ಭಾರತೀಯ ಜನತಾ ಪಕ್ಷ(ಬಿಜೆಪಿ)ವನ್ನು ಕಟ್ಟಿ ಬೆಳೆಸಿದ ನನ್ನ ತಂದೆಯನ್ನು ಮರೆಯುತ್ತಿರುವ ಆ ಪಕ್ಷವೀಗ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ' ಎಂದು ಮಾಜಿ ಕೇಂದ್ರ ಸಚಿವ ದಿ. ಅನಂತಕುಮಾರ್ ಪುತ್ರಿ ವಿಜೇತಾ ಬೇಸರ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ನಾಯಕರ ಕುರಿತಾದ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. 'ನನ್ನ ತಂದೆ
ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ಕಾಲ ಲೋಕಾಯುಕ್ತ ಪೊಲೀಸ್ ಕಸ್ಟಡಿಗೆ ನೀಡಿ ಮಂಗಳವಾರ ಆದೇಶ ಹೊರಡಿಸಿದೆ. ಜಾಮೀನು ರದ್ದಾದ ನಂತರ ನಿನ್ನೆ ಸಂಜೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಿದ್ದ ಲೋಕಾಯುಕ್ತ ಪೊಲೀಸರು, ಇಂದು
ಹಾಸನ: ಹಾಸನ ಜಿಲ್ಲೆಯ ಬೇಲೂರಿನಲ್ಲಿ ಕುರಾನ್ ಪಠಣ ವಿರೋಧಿಸಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಬೇಲೂರು ಚನ್ನಕೇಶವ ರಥೋತ್ಸವದ ವೇಳೆ ಕುರಾನ್ ಪಠಣ ರದ್ದುಗೊಳಿಸುವಂತೆ ಆಗ್ರಹಿಸಿ ಬಜರಂಗದಳ
ಬೆಂಗಳೂರು: ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ್ದು, ಬಿಜೆಪಿ ಶಾಸಕರಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ
ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರದಲ್ಲಿ ಸೋಮವಾರ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರ ಮನೆಯನ್ನು ಗುರಿಯಾಗಿಸಿಕೊಂಡು ಬಂಜಾರ ಸಮುದಾಯದ ಸದಸ್ಯರು ಕಲ್ಲು ತೂರಾಟ ನಡೆಸಿದರು. ರಾಜ್ಯ ಸರ್ಕಾರವು ಪರಿಶಿಷ್ಟ ಸಮುದಾಯಗಳಿಗೆ (ಎಸ್‌ಸಿ) ಒಳ ಮೀಸಲಾತಿ ಘೋಷಿಸಿರುವುದನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪಟ್ಟಣದಲ್ಲಿ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಲಾಗಿದೆ. ಪ್ರತಿಭಟನೆಯಲ್ಲಿ ಕೆಲವು
ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ದಾವೆಯನ್ನು ಪರಿಗಣಿಸಿರುವ ಬೆಂಗಳೂರಿನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲು ಶುಕ್ರವಾರ ಆದೇಶಿಸಿದ್ದು, ರೂಪಾ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ರೂಪಾ
ಬೆಂಗಳೂರು: ಮುಷ್ಕರವನ್ನು ಹಿಂತೆಗೆದುಕೊಂಡು ಕೆಲಸಕ್ಕೆ ಮರಳಬೇಕು ಅಥವಾ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು 40 ದಿನಗಳಿಂದ ಮುಷ್ಕರ ನಡೆಸುತ್ತಿರುವ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಅಡಿಯ ಗುತ್ತಿಗೆ ನೌಕರರಿಗೆ ಅಂತಿಮ ಎಚ್ಚರಿಕೆಯನ್ನು ನೀಡಲಾಗಿದೆ. ಎನ್ಎಚ್ಎಂ ಹೊರಡಿಸಿದ ಪತ್ರಿಕಾ ಪ್ರಕಟಣೆಯು, ತುರ್ತು ಸಭೆಯನ್ನು ಆಯೋಜಿಸಲು ಮತ್ತು 48 ಗಂಟೆಗಳ ಒಳಗೆ ಕೆಲಸಕ್ಕೆ ಹಿಂತಿರುಗದ
ಬೆಂಗಳೂರು: ಬಹು ನಿರೀಕ್ಷಿತ ಕೆ ಆರ್ ಪುರಂ-ವೈಟ್‌ಫೀಲ್ಡ್ ಮೆಟ್ರೋ ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಉದ್ಘಾಟನೆ ಮಾಡಿದರು. ಬೆಂಗಳೂರಿನ ಕೆಆರ್‌ಪುರಂ-ವೈಟ್‌ಫೀಲ್ಡ್ ಮೆಟ್ರೋ ಮಾರ್ಗ ಉದ್ಘಾಟನೆ ಮಾಡಿದ ಬಳಿಕ ಮೋದಿಯವರು, ನಾಲ್ಕು ಕಿ.ಮೀ ವರೆಗೂ ಮೆಟ್ರೋದಲ್ಲಿ ಪ್ರಯಾಣ ಮಾಡಿದರು. ಮೆಟ್ರೋ ರೈಲು ಸಂಚಾರದ ವೇಳೆ ಮೋದಿಯವರು ಮೆಟ್ರೋ ಸಿಬ್ಬಂದಿಗಳು,
ಚಿಕ್ಕೋಡಿ: ದೇವರಿಗೆ ನೈವೇದ್ಯ ಕೊಟ್ಟು ಬರುತ್ತಿದ್ದ ಇಬ್ಬರು ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಸಾವಿಗೀಡಾದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದಲ್ಲಿ ನಡೆದಿದೆ. ಶ್ರೀಧರ್ ಪಾರಿಸ್ ಹೊಸೂರು (15) ಹಾಗೂ ಹರ್ಷಿತಾ ಶೀತಲ ಚಿಪ್ಪಾಡಿ (8) ಮೃತ ಮಕ್ಕಳು. ಯುಗಾದಿ ಹಬ್ಬದ ಪ್ರಯುಕ್ತ ದೇವರ ದರ್ಶನಕ್ಕೆ