ಬೆಂಗಳೂರು: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ದುರಂತ ನಡೆದ ಬೆನ್ನಲ್ಲೇ ಬೆಂಗಳೂರಿನ ಸುಮ್ಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ಟ್ರಕ್, ಕಾರು ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ ಇಬ್ಬರಿಗೆ ಗಾಯವಾಗಿದ್ದು ಸ್ಥಿತಿ ಗಂಭೀರವಾಗಿದೆ. ಮೃತರನ್ನು ಯೇಸು.ಡಿ ಮತ್ತು ಜೆನ್ನಿಫರ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಆಟೋದಲ್ಲಿದ್ದರು ಎಂದು ತಿಳಿದುಬಂದಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ 'ಕಾವೇರಿ' ಬಳಿ ಇದ್ದಕ್ಕಿದ್ದಂತೆ ಕಾರಿಗೆ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ಶುಕ್ರವಾರ ನಡೆದಿದೆ. ಇಂದು ಬೆಳಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಸಾಫ್ಟ್ ವೇರ್ ಎಂಜಿನಿಯರ್ ಹಾಗೂ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಫ್ಟ್
ಮಂಡ್ಯ: ಮದ್ದೂರು ಪಟ್ಟಣಕ್ಕೆ ಭೇಟಿ ನೀಡಿದ್ದ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಗುರುವಾರ (ಸೆ.11) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ
ಬೆಂಗಳೂರು: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ನಾಮನಿರ್ದೇಶನಗೊಂಡ ಡಾ. ಆರತಿ ಕೃಷ್ಣ, ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್.ಕೆ ಅವರು ವಿಧಾನ ಪರಿಷತ್ ನ ಸದಸ್ಯರಾಗಿ ಪಮಾಣ ವಚನ ಸ್ವೀಕರಿಸಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು
ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ನಾಯಕ ಮತ್ತು ಎಂಎಲ್ಸಿ ಸಿ.ಟಿ. ರವಿ ವಿರುದ್ಧ ಪ್ರಕರಣ ದಾಖಲಾಗಿದೆ. ಮದ್ದೂರು ಪೊಲೀಸ್ ಸಬ್ಇನ್ಸ್ಪೆಕ್ಟರ್ ನೀಡಿದ ದೂರಿನನ್ವಯ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ದೂರು ಹಿನ್ನೆಲೆಯಲ್ಲಿ ಅನ್ಯ ಸಮುದಾಯಗಳ ಮಧ್ಯೆ
ಬೆಳಗಾವಿ: ಆರು ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆಗೈದು ಅಪಘಾತ ಎಂದು ಬಿಂಬಿಸಿದ್ದ ಪತಿ ಹಾಗೂ ಆತನ ಇಬ್ಬರು ಸಹಜರರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಚೈತಾಲಿ ಪ್ರದೀಪ್ ಕಿರಣಗಿ (23) ಹತ್ಯೆಯಾದ ಗರ್ಭಿಣಿ ಮಹಿಳೆ. ಆರೋಪಿಗಳನ್ನು ಮಹಿಳೆಯ ಪತಿ ಪ್ರದೀಪ್ ಅನ್ನಾಸಾಬ್ ಕಿರಣಗಿ ಈತನ ಸಹಚರರಾದ ಸದ್ದಾಂ ಅಕ್ಬರ್ ಇಮಂದರ್ ಮತ್ತು ರಾಜನ್
ಬೆಂಗಳೂರು: ಕಾರಾಗೃಹದಲ್ಲಿರುವ ವಿಚಾರಣಾಧೀನ ಹಾಗೂ ಸಜಾ ಕೈದಿಗಳಿಗೆ ಕದ್ದುಮುಚ್ಚಿ ಮೊಬೈಲ್ ಪೂರೈಕೆ ಸೇರಿದಂತೆ ಇತ್ತೀಚಿಗಿನ ನಟ ದರ್ಶನ್ಗೆ ದೊರಕುತ್ತಿದ್ದ ರಾಜಾತಿಥ್ಯ ವಿಚಾರವಾಗಿ ಪರಪ್ಪನ ಅಗ್ರಹಾರ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಇದೀಗ ಪರಪ್ಪನ ಅಗ್ರಹಾರ ಮತ್ತೆ ಸುದ್ದಿಯಲ್ಲಿದ್ದು ಜೈಲು ವಾರ್ಡನ್ನಿಂದಲೇ ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ ಮಾಡಲಾಗಿದೆ ಎಂಬುದು ಬಹಿರಂಗಗೊಂಡಿದೆ. ಕೈದಿಗಳಿಗೆ
ಭಾಲ್ಕಿ: ಒಂದೇ ಕುಟುಂಬದ ನಾಲ್ವರು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನಲ್ಲಿ ಮಂಗಳವಾರ ನಡೆದಿದೆ. ಕಾರಂಜಾ ಜಲಾಶಯದ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಬೀದರ್ ನ ಮೈಲೂರಿನವರಾದ ಶಿವಮೂರ್ತಿ ಮಾರುತಿ ಬ್ಯಾನರ್ಜಿ (45) ಅವರ ಮೂವರು ಮಕ್ಕಳಾದ ಶ್ರೀಶಾಂತ (9)
ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅನುಭವಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೆಲಸ ಹಂಚಿಕೆ ಮಾಡಲಾಗಿದ್ದು, ಗ್ರಂಥಾಲಯದಲ್ಲಿ ಕ್ಲರ್ಕ್ ಕೆಲಸ ನೀಡಲಾಗಿದೆ. ಜೈಲು ಅಧಿಕಾರಿಗಳ ಪ್ರಕಾರ, ವಿಚಾರಣಾಧೀನ ಕೈದಿಗಳು ಮತ್ತು ಸಜಾಬಂದಿಗಳಿಗೆ ಗ್ರಂಥಾಲಯದಿಂದ ಪುಸ್ತಕ ವಿತರಣೆ
ಇದೊಂದು ವಿಪರ್ಯಾಸ. ಧರ್ಮಸ್ಥಳವೆಂದರೆ ನ್ಯಾಯ ಮತ್ತು ಧರ್ಮ ಸಿಗುವ ಸ್ಥಳ. ಇವತ್ತಿಗೂ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಗ್ರಾಮೀಣ ಭಾಗದ ಹಿರೀಕರು ಆ ಊರಿನ ಹೆಸರನ್ನು ಸಹ ಬಾಯಿಬಿಟ್ಟು ಹೇಳಲು ಹಿಂಜರಿಯುತ್ತಾರೆ. ಯಾಕೆಂದರೆ, ಆ ರೀತಿ ಹೇಳಿದರೆ ಆ ಊರಿಗಿರುವ ಶಕ್ತಿಗೆ ತಾವು ಮಾಡುವ ಅಪಮಾನವಾಗಬಹುದು; ಹಾಗೊಮ್ಮೆ