ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಲ್ಲಿ ಸಚಿವ ವಿ. ಸೋಮಣ್ಣ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇದರೊಂದಿಗೆ ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ವಿರುದ್ಧ ಸಚಿವ ಆರ್. ಅಶೋಕ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಹಾಗೂ ಕನಕಪುರದಲ್ಲಿ ಡಿಕೆಶಿ

ಬೆಂಗಳೂರು: ಆರ್ ಸಿಬಿ ಮತ್ತು ಲಖನೌ ವಿರುದ್ಧದ ಪಂದ್ಯದ ಬಳಿಕ ಲಖನೌ ತಂಡದ ಮೆಂಟರ್ ಗೌತಮ್ ಗಂಭೀರ್ ರ ಆವೇಶದ ಸಂಭ್ರಮಾಚರಣೆ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 2023ರ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್)ನ 15ನೇ ಪಂದ್ಯದ ಕೊನೆಯ ಓವರ್‌ನಲ್ಲಿ ನಾಟಕೀಯ ತಿರುವು ಪಡೆದ

ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದ ಟಿಕೆಟ್ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಪಕ್ಷದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಹೌದು.. ಚುನಾವಣಾ ರಾಜಕೀಯದಿಂದ ಬಿಜೆಪಿ ನಾಯಕ ಕೆ.ಎಸ್‌. ಈಶ್ವರಪ್ಪ ನಿವೃತ್ತರಾಗಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ

ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ಯಾವುದೇ ರಾಜಕೀಯ ಪಕ್ಷದಲ್ಲಿ ಟಿಕೆಟ್ ಹಂಚಿಕೆ ನಂತರ ಒಂದಿಷ್ಟು ಅಸಮಾಧಾನ, ಬಂಡಾಯ ಸಹಜವಾಗಿರುತ್ತದೆ. ಅದೇ ರೀತಿ ಕಾಂಗ್ರೆಸ್ ವಿಚಾರದಲ್ಲೂ ಆಗಿದೆ. ಆದರೆ, ನಿರೀಕ್ಷಿಸಿದ ಪ್ರಮಾಣಕ್ಕಿಂತಲೂ ಕೈ ಪಾಳಯದಲ್ಲಿ ಬಂಡಾಯ ಬೆಂಕಿ ಹೆಚ್ಚಾಗಿ ಹೋಗಿದೆ. ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ ನಂತರ ಕಾಂಗ್ರೆಸ್

ಬೆಂಗಳೂರು: ಹಾಲಿ ಐಪಿಎಲ್ ಟೂರ್ನಿಯಲ್ಲಿ ಗಾಯಾಳುಗಳ ಗಾಯದ ಸಮಸ್ಯೆ ಮುಂದುವರೆದಿರುವಂತೆಯೇ ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇಬ್ಬರು ಆಟಗಾರರು ಕೂಡ ಗಾಯದಿಂದ ಹೊರಗುಳಿದಿದ್ದು, ಅವರ ಬದಲಿಗೆ ಇಬ್ಬರು ಆಟಗಾರರು ತಂಡ ಸೇರ್ಪಡೆಯಾಗಿದ್ದಾರೆ. ಗಾಯಗೊಂಡಿರುವ ರೀಸ್ ಟಾಪ್ಲಿ ಮತ್ತು ರಜತ್ ಪಾಟಿದಾರ್ ಅವರ ಬದಲಿಗೆ ದಕ್ಷಿಣ ಆಫ್ರಿಕಾದ ವೇಯ್ನ್ ಪಾರ್ನೆಲ್ ಮತ್ತು

ಶಿರಸಿ: ದರೋಡೆ, ಬ್ಲಾಕ್ ಮೇಲ್, ಅಪಹರಣ ಸೇರಿದಂತೆ ಹಲವು ಪ್ರಕರಣದ ಆರೋಪಿಯಾಗಿರುವ ರೌಡಿ ಶೀಟರ್ ಫಯಾಜ್ ಚೌಟಿ ಜೊತೆಗೆ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚಿಗೆ ಸಭೆ ನಡೆಸಿರುವ ಫೋಟೋ ವೈರಲ್ ಆಗುತ್ತಿದೆ. ಫಯಾಜ್ ಚೌಟಿ  ಭೂಗತ ಪಾತಕಿ ಹೆಬ್ಬೆಟ್ಟು ಮಂಜ ಸೇರಿದಂತೆ ಅನೇಕರೊಂದಿಗೆ ಸಂಪರ್ಕದಲ್ಲಿದ್ದಾನೆ. ಆದರೆ, ಐದು ದಿನಗಳ

ಬೆಂಗಳೂರು: ಇದ್ರೀಷ್ ಪಾಷಾ ಹತ್ಯೆ ಪ್ರಕರಣದ ಆರೋಪಿಗಳಾದ ಪುನೀತ್ ಕೆರೆಹಳ್ಳಿ ಹಾಗೂ ಅವರ ನಾಲ್ವರು ಸಹಚರರನ್ನು ರಾಮನಗರ ಪೊಲೀಸರು ರಾಜಸ್ಥಾನದಲ್ಲಿ ಬುಧವಾರ ಬಂಧಿಸಿದ್ದಾರೆ. ಇತ್ತೀಚೆಗೆ ಕನಪುರದ ಸಾತನೂರು ಬಳಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್​ ಕೆರೆಹಳ್ಳಿ

ಬೆಂಗಳೂರು: ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ನಾನು ಬೆಂಬಲ ನೀಡುತ್ತೇನೆಂದು ನಟ ಕಿಚ್ಚ ಸುದೀಪ್ ಅವರು ಬುಧವಾರ ಹೇಳಿದ್ದಾರೆ. ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿಯೇ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ

ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ರಾಜಧಾನಿ ಬೆಂಗಳೂರಿನ ಸದಸ್ಯತ್ವ ಪಾಲು 28. ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್‌ ನಡುವೆ ಈ ಕ್ಷೇತ್ರಗಳಲ್ಲಿ ನೇರ ಹಣಾಹಣಿ ಇದೆ. 28 ಕ್ಷೇತ್ರಗಳ ಪೈಕಿ 15 ಸ್ಥಾನ ಗೆಲ್ಲಲು ಕಾಂಗ್ರೆಸ್ ಮತ್ತು ಬಿಜೆಪಿ ತಂತ್ರ ರೂಪಿಸುತ್ತಿವೆ. ಬೆಂಗಳೂರನ್ನು ಗೆದ್ದವರೇ ರಾಜ್ಯವನ್ನು ಗೆಲ್ಲುತ್ತಾರೆ ಎಂಬ ನಂಬಿಕೆ ಇದೆ.

ಬೆಂಗಳೂರು: ಏ 04. ಅನಿತಾ ಕುಮಾರಸ್ವಾಮಿ ಅವರು ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ. ಪಕ್ಷದ ಅಭ್ಯರ್ಥಿ ಇಲ್ಲದಿದ್ದಾಗ ಪಕ್ಷದ ಗೌರವ ಉಳಿಸಲು ಅವರನ್ನು ಕರೆದುಕೊಂಡು ಬಂದು ನಿಲ್ಲಿಸಿದೆವು, ನಾವೇ ಅವರನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿದ್ದೇವೆ ಹೊರತು ಅವರಿಗೆ ಸ್ವಂತ ಆಸಕ್ತಿಯಿರಲಿಲ್ಲ ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಭವಾನಿಗೆ