ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಹುಬ್ಬಳ್ಳಿ: ಹುಬ್ಬಳ್ಳಿಯ ಭವಾನಿನಗರದಲ್ಲಿರುವ ಉದ್ಯಮಿಯೊಬ್ಬರ ನಿವಾಸದಲ್ಲಿ ಶನಿವಾರ ನಗರ ಅಪರಾಧ ವಿಭಾಗ (ಸಿಸಿಬಿ)ದಳದ ಪೊಲೀಸರು ದಾಳಿ ನಡೆಸಿದ್ದು,  ಲೆಕ್ಕಕ್ಕೆ ಸಿಗದ 3 ಕೋಟಿ ರೂ.ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ತೆರಿಗೆ ವಂಚನೆ ನಡೆದಿದ್ದೇ ಆದರೆ, ತನಿಖೆ ನಡೆಸಲು ತನಿಖಾಧಿಕಾರಿ ಎಸ್.ಕೆ.ಪಟ್ಟಣಕುಡಿ ಅವರಿಗೆ

ಬೆಂಗಳೂರು: ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ಕರ್ನಾಟಕ ಲೋಕಾಯುಕ್ತ ಉಪ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಏಳು ತಂಡಗಳನ್ನು ರಚಿಸಿದೆ. ತಂಡಗಳು ಈಗಾಗಲೇ ರಾಜ್ಯದಾದ್ಯಂತ ಟ್ರ್ಯಾಕಿಂಗ್ ಮತ್ತು ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು ಮತ್ತು ದಾವಣಗೆರೆ ನಗರಗಳ ವಿವಿಧೆಡೆ ತಂಡಗಳು ಬೇಟೆ ಆರಂಭಿಸಿವೆ

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 24 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಶನಿವಾರ ಕರೆ ನೀಡಿದೆ. ಕಳೆದ ನಾಲ್ಕು ದಿನಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದ ಸಾರಿಗೆ ನೌಕರರ ಸಮಾನ ಮನಸ್ಕರ

ದಾವಣಗೆರೆ: ಭಾಸ್ಕರ್ ರಾವ್ ಅವರು ಬಿಜೆಪಿಗೆ ಜಿಗಿದಿದ್ದಾರೆ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನದ ನಂತರ, ಎಎಪಿ ತನ್ನ ದಾವಣಗೆರೆ ಸಮಾವೇಶದಿಂದ ವಿಧಾನಸಭೆ ಚುನಾವಣೆಗೆ ದೊಡ್ಡ ಘೋಷಣೆಗಳನ್ನು ಮಾಡುವ ಸಾಧ್ಯತೆಯಿದೆ ಮತ್ತು ಚುನಾವಣಾ ಮಾರ್ಗಸೂಚಿಯನ್ನು ಹೊರಡಿಸಲಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ

ಬೆಂಗಳೂರು: ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ . ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದು ಲೋಕಾಯುಕ್ತ

ಬೀದರ್: ಬೀದರ್ ಜಿಲ್ಲೆಯಲ್ಲಿ ಮಂಗಳವಾರ 22 ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಏಳು ಅಂತಸ್ತಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಶ್ರೀರಾಮ ಕ್ಯಾಡಗಿ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಶ್ರೀರಾಮ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಬ್ರಿಮ್ಸ್) ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದನು. ಬ್ರಿಮ್ಸ್ ಹಾಸ್ಟೆಲ್‌ನಲ್ಲಿ ವಾಸವಿದ್ದ ಆತ ಬೆಳಗ್ಗೆ ಆತ್ಮಹತ್ಯೆ