ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಕಲಬುರಗಿ: ಕೋರ್ಟ್ ಹಾಲ್‌ಗೆ ತೆರಳುವ ಕೆಲವೇ ನಿಮಿಷಗಳಿಗೂ ಮುನ್ನ ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರು ಸಾವನಪ್ಪಿರುವ ಘಟನೆ, ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಕಲಬುರಗಿ ಜಿಲ್ಲಾ 3ನೇ ಹಿರಿಯ ಶ್ರೇಣಿ ನ್ಯಾಯಾಧೀಶರಾದ ವಿಶ್ವನಾಥ್ ವಿ ಮೂಗತಿ (44) ಸಾವನ್ನಪ್ಪಿದ ದುರ್ದೈವಿ. ಕಳೆದ ವಾರವೇ ಕಲಬುರಗಿ ಕೋರ್ಟ್‌ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು. ಇಂದು ಬೆಳಗ್ಗೆ

ಬೆಂಗಳೂರು:‌ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ವಿಶೇಷ ಸಿಬಿಐ ನ್ಯಾಯಾಲಯ ಇತ್ತೀಚೆಗೆ ವಿಧಿಸಿದ್ದ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಈ ಹಂತದಲ್ಲಿ ಜಾರಿಗೊಳಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು

ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದ್ದು, ಕರ್ನಾಟಕದ ಕರಾವಳಿ ಸೇರಿ 13 ಜಿಲ್ಲೆಗಳಲ್ಲಿ ಜೂನ್ 14ರವರೆಗೂ ಭಾರಿ ಮಳೆ ಸಾಧ್ಯತೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಪೈಕಿ 9 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,

ಶಿವಮೊಗ್ಗ: ರಕ್ಷಣಾ ಮತ್ತು ಏರೋಸ್ಪೇಸ್ ಕೈಗಾರಿಕೆಗಳಿಗೆ ವಿಶೇಷ ಮತ್ತು ಗುಣಮಟ್ಟದ ಉಕ್ಕಿನ ಉತ್ಪಾದನೆಯನ್ನು ಸರ್ಕಾರ ಉತ್ತೇಜಿಸಲು ಪ್ರಯತ್ನಿಸುತ್ತಿದೆ, ಭದ್ರಾವತಿಯಲ್ಲಿ ಅಂತಹ ಉತ್ಪಾದನೆ ಸಾಧ್ಯವೇ ಎಂದು ನಾವು ಪರಿಶೀಲಿಸುತ್ತೇವೆ. ಎಲ್ಲಾ ಆಯ್ಕೆಗಳನ್ನು ಹುಡುಕುತ್ತಿದ್ದೇವೆ. ಕಾರ್ಯಸಾಧ್ಯತಾ ಅಧ್ಯಯನದ ಆಧಾರದ ಮೇಲೆ ನಾವು ನಿರ್ಧರಿಸುತ್ತೇವೆ ಎಂದು ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್ ಹೇಳಿದ್ದಾರೆ. ವಿಶ್ವೇಶ್ವರಯ್ಯ

ಬೆಂಗಳೂರು: RCB ಚೊಚ್ಚಲ ಬಾರಿಗೆ ಐಪಿಎಲ್ ಕಪ್ ಗೆದ್ದ ಹಿನ್ನೆಲೆಯಲ್ಲಿ ವಿಧಾನಸೌಧದಿಂದ ಎಂಜಿ ರಸ್ತೆ ಅಲ್ಲದೇ ನಗರದ ಪ್ರಮುಖ ಪ್ರದೇಶಗಳು ಸೇರಿದಂತೆ ಇಡೀ ಬೆಂಗಳೂರಿನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲು ನಗರ ಪೊಲೀಸರು ಸಲಹೆ ನೀಡಿದ್ದರು. ಇದರಿಂದ ವಿವಿಧ ಪ್ರದೇಶಗಳಿಗೆ ತಂಡ ತೆರಳುವುದರಿಂದ ಅಭಿಮಾನಿಗಳು ಒಂದೆಡೆ ಸೇರುವ ಬದಲು ರಸ್ತೆ ಬದಿಯಲ್ಲಿಯೇ

ಬೆಂಗಳೂರು: ನಾಗರಹೊಳೆ ಹುಲಿ ಮೀಸಲು ಪ್ರದೇಶವನ್ನು (NTR) ಅತಿಕ್ರಮಣ ಮಾಡಿದ್ದಾರೆಂದು ಆರೋಪಿಸಲಾದ ವ್ಯಕ್ತಿಗಳು ಅರಣ್ಯ ಹಕ್ಕು ಕಾಯ್ದೆ (ಎಫ್‌ಆರ್‌ಎ) ಅಡಿಯಲ್ಲಿ ಸಲ್ಲಿಸಿದ ಅರ್ಜಿಗಳನ್ನು ಉಪವಿಭಾಗ ಸಮಿತಿ ಇತ್ತೀಚೆಗೆ ತಿರಸ್ಕರಿಸಿದೆ. ಅರ್ಜಿದಾರರು ಸಂರಕ್ಷಿತ ಅರಣ್ಯ ಪ್ರದೇಶವನ್ನು ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂದು ಸಮಿತಿ ತೀರ್ಪು ನೀಡಿ ಕಾನೂನು ಕಾರ್ಯವಿಧಾನಗಳ ಪ್ರಕಾರ ಜಿಲ್ಲಾ ಮಟ್ಟದ

ಧಾರವಾಡ: ರಸ್ತೆ ಬದಿ ನಿಂತಿದ್ದ ಲಾರಿಗೆ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡದ ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಬೆಂಗಳೂರಿನ ವೇಣುಗೋಪಾಲ್ (63) ಹಾಗೂ ಮೈಸೂರಿನ ಸುರೇಶ್ (60) ಹಾಗೂ

ಬೆಳಗಾವಿ: ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಆರೋಪದ ಮೇಲೆ ಸ್ವಯಂ ಘೋಷಿತ ಮಠಾಧೀಶ ಲೋಕೇಶ್ವರ ಸ್ವಾಮಿ ಅವರನ್ನು ಬಂಧಿಸಿದ ನಂತರ, ರಾಯ್‌ಬಾಗ್ ತಾಲ್ಲೂಕು ಆಡಳಿತದ ಅಧಿಕಾರಿಗಳು ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿ ಮಠಾಧೀಶರ ಅಕ್ರಮ ಆಶ್ರಮವನ್ನು ಕೆಡವಿದ್ದಾರೆ. ಮೇಖಳಿ ಗ್ರಾಮದ ಸರ್ವೇ ನಂ. 225 ರಲ್ಲಿ ಸರ್ಕಾರಿ 8 ಎಕರೆ

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ‌ ಕನ್ನಮಂಗಲ ಗೇಟ್ ಸಮೀಪದ ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸರು ಭಾನುವಾರ ಬೆಳಿಗ್ಗೆ ದಾಳಿ ಮಾಡಿ 31 ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕನ್ನಮಂಗಲ ಗೇಟ್ ಬಳಿಯ ಫಾರ್ಮ್​ ಹೌಸ್​ನಲ್ಲಿ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸರು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರಂಭವಾಗುವುದರೊಂದಿಗೆ ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗಂಟೆಗೆ