ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಕಲಬುರಗಿ: ಕಲಬುರಗಿಯ ಜೇವರ್ಗಿ ರಸ್ತೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ನಿನ್ನೆ ರಾತ್ರಿ 8.30ರ ಸುಮಾರಿಗೆ ಲಾರಿ, ಕಾರು, ದ್ವಿಚಕ್ರ ವಾಹನಗಳ ನಡುವೆ ಈ ಸರಣಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೈಕ್‌ ಮತ್ತು ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ

ಬೆಂಗಳೂರು, ಅಕ್ಟೋಬರ್​ 17: ಕಳೆದ ಎರಡ್ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆಗೆ ಬೆಂಗಳೂರು ಅಕ್ಷರಶಃ ನಲುಗಿ ಹೋಗಿದೆ. ನಾನಾ ಅವಾಂತರಗಳು ಸಂಭವಿಸಿವೆ. ಇಷ್ಟು ದಿನ ಕಾಣಿಯಾಗಿದ್ದ ಸೂರ್ಯದೇವ ಇಂದು ಆಚೆ ಬಂದಿದ್ದಾನೆ. ಆದರೆ ಮಳೆ ಹೊಡೆತಕ್ಕೆ ಸಿಲುಕಿ ಅದರಿಂದ ಸಹಜ ಸ್ಥಿತಿಯತ್ತ ಮರಳುತ್ತಿರುವಾಗಲೇ ಬೆಂಗಳೂರಿಗೆ ಮತ್ತೆ ವರುಣನ ಎಚ್ಚರಿಕೆ

ಬೆಂಗಳೂರು : ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆಯಲ್ಲಿ ಆ್ಯಕ್ಸಿಸ್ ಬ್ಯಾಂಕ್ನ ನೌಕರರು ಸೇರಿ ಒಟ್ಟು 8 ಜನರು ಬಂಧನಕ್ಕೊಳಗಾಗಿದ್ದಾರೆ. ವಿಐಪಿ ಷೇರು ಟ್ರೇಡಿಂಗ್ ಹೆಸರಿನಲ್ಲಿ ಹಣ ಹೂಡಿಕೆ ಮಾಡಿಸಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ನಾಗರಭಾವಿ ಆ್ಯಕ್ಸಿಸ್ ಬ್ಯಾಂಕ್ನಲ್ಲಿ ಇಂತಹದೊಂದು ಘಟನೆ ನಡೆದಿದೆ. ಇದೇ ಮೊದಲ ಬಾರಿ

ಬೆಂಗಳೂರು, ಅಕ್ಟೋಬರ್​ 16: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ  ಮೊನ್ನೆ ಜಾಮೀನು ಮಂಜೂರು ಆಗಿದೆ. ಜನಪ್ರತಿನಿಧಿಗಳ ಕೋರ್ಟ್​, ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ ಜೈಲಧಿಕಾರಿಗಳಿಗೆ ಜಾಮೀನು ಪ್ರತಿ ತಡವಾಗಿ ಕೈ ಸೇರಿದ ಹಿನ್ನೆಲೆ ಇಂದು ಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನಿಂದ ನಾಗೇಂದ್ರ ಬಿಡುಗಡೆ ಆಗಿದ್ದಾರೆ.

ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ವಿಪರೀತ ಮಳೆಯಾಗುತ್ತಿದೆ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು

ಬೆಂಗಳೂರು, ಅಕ್ಟೋಬರ್ 16: ಮುಡಾ ಪ್ರಕರಣದಿಂದ ಸರ್ಕಾರ ತೀವ್ರ ಮುಜುಗರಕ್ಕೆ ಸಿಲುಕಿದೆ. ಪ್ರಕರಣದ ತನಿಖೆ ಕೂಡ ತೀವ್ರಗೊಂಡಿದೆ. ವಿರೋಧ ಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜೀನಾಮಗೆ ಆಗ್ರಹಿಸುತ್ತಲೇ ಇದ್ದಾರೆ. ಈ ಮಧ್ಯೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ನೀಡಿದ್ದಾರೆ. ಸಿಎಂ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ

ಬೆಂಗಳೂರು: ದಲಿತ ಸಮುದಾಯದ ಗುತ್ತಿಗೆದಾರನಿಗೆ ಬೆದರಿಕೆ, ಜಾತಿನಿಂದನೆ ಪ್ರಕರಣದಲ್ಲಿ ಜೈಲು ಸೇರಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಇದೀಗ ಅತ್ಯಾಚಾರ ಪ್ರಕರಣದಲ್ಲೂ ಬಿಗ್ ರಿಲೀಫ್​ ಸಿಕ್ಕಿದೆ. ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನಗೆ ಕೋರ್ಟ್ ಜಾಮೀನು ನೀಡಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್

ಕೋಲ್ಕತ್ತಾ: ಆರ್‌ಜಿ ಕಾರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಹತ್ಯೆ ಘಟನೆಯ ಹಿನ್ನೆಲೆಯಲ್ಲಿ ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಪಶ್ಚಿಮ ಬಂಗಾಳದಲ್ಲಿ ಕಿರಿಯ ವೈದ್ಯರು ನಡೆಸುತ್ತಿರುವ ಆಮರಣಾಂತ ಉಪವಾಸ ಇಂದು ಸೋಮವಾರ 10 ನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ ಮತ್ತೊಬ್ಬ ವೈದ್ಯರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ

ಚೆನ್ನೈ: 12578 ಮೈಸೂರು-ದರ್ಭಾಂಗ ಬಾಗ್ಮತಿ ಎಕ್ಸ್‌ಪ್ರೆಸ್‌ ರೈಲು ಚೆನ್ನೈ-ಗುಡೂರು ವಿಭಾಗದಲ್ಲಿ ಚೆನ್ನೈ ಸೆಂಟ್ರಲ್‌ನಿಂದ 41 ಕಿಲೋಮೀಟರ್ ದೂರದಲ್ಲಿರುವ ಕವರೈಪೆಟ್ಟೈ ನಿಲ್ದಾಣದಲ್ಲಿ ನಿಂತಿದ್ದ ಸರಕು ರೈಲಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಪರಿಣಾಮ ಆದರಲ್ಲಿದ್ದ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇದರಿಂದಾಗಿ ಬಾಗಮತಿ ಎಕ್ಸ್‌ಪ್ರೆಸ್‌ನ 12 ಬೋಗಿಗಳು ಹಳಿತಪ್ಪಿವೆ. ಮೈಸೂರು ದರ್ಭಾಂಗ ಎಕ್ಸ್ ಪ್ರೆಸ್ ರೈಲನ್ನು

ಬೆಂಗಳೂರು, ಅ.12: ಎಡಿಜಿಪಿ ಚಂದ್ರಶೇಖರ್ (ADGP Chandrashekar) ಅವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ವಿರುದ್ದ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸುರೇಶ್ ಬಾಬು ವಿರುದ್ದ ಬೆದರಿಕೆ ಆರೋಪದಡಿ ದೂರು ದಾಖಲಾಗಿದೆ. ಎಡಿಜಿಪಿ ಚಂದ್ರಶೇಖರ್ ದೂರು ಆಧರಿಸಿ ಎನ್​ಸಿಆರ್ ದಾಖಲಾಗಿದೆ. ಸೆ.28